• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, July 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಡ್ಡ ಮತದಾನ ಆರೋಪ: ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿದ ಬಿಜೆಪಿ ಶಾಸಕ

ಪ್ರತಿಧ್ವನಿ by ಪ್ರತಿಧ್ವನಿ
June 30, 2026
in Top Story, ಕರ್ನಾಟಕ, ರಾಜಕೀಯ
0
ಅಡ್ಡ ಮತದಾನ ಆರೋಪ: ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿದ ಬಿಜೆಪಿ ಶಾಸಕ
Share on WhatsAppShare on FacebookShare on Telegram

ಹಾಸನ: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೇಲೂರು ಬಿಜೆಪಿ ಶಾಸಕ ಹೆಚ್.ಕೆ ಸುರೇಶ್  ಚನ್ನಕೇಶವಸ್ವಾಮಿ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ.

ADVERTISEMENT
Sadananda Gowda Viral Audio Sparks Row: ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಆಡಿಯೋ #pratidhvani

ಮಂಗಳವಾರ ಬೆಳಗ್ಗೆ ಬೇಲೂರಿನ ಐತಿಹಾಸಿಕ ಚನ್ನಕೇಶವಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಾಲಯದ ಆವರಣದಲ್ಲಿರುವ ಕರಿಕಲ್ಲು ಮುಟ್ಟಿ, ‘ನಾನು ವಿಧಾನಪರಿಷತ್ ಚುನಾವಣೆಯಲ್ಲಿ ಯಾವುದೇ ಅಡ್ಡಮತದಾನ ಮಾಡಿಲ್ಲ. ನಾನು ಬಿಜೆಪಿ ಪಕ್ಷಕ್ಕೆ ಎಂದಿಗೂ ದ್ರೋಹ ಮಾಡಿಲ್ಲ’ ಎಂದು ಮೂರು ಬಾರಿ ಪ್ರಮಾಣ ಮಾಡಿದರು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧದ ಅಡ್ಡಮತದಾನ ಆರೋಪವು ರಾಜಕೀಯ ಪಿತೂರಿಯ ಭಾಗ ಎಂದು ಆರೋಪಿಸಿದರು. ‘ನಾನು ಪಕ್ಷದ ಸೂಚನೆಯಂತೆ ಮತ ಚಲಾಯಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ನಾನು ದ್ರೋಹ ಮಾಡುವ ಪ್ರಶ್ನೆಯೇ ಇಲ್ಲ. ನಾನು ತಪ್ಪು ಮಾಡಿದ್ದರೆ ಭಗವಂತ ನನ್ನನ್ನು ಕ್ಷಮಿಸುವುದಿಲ್ಲ. ನನ್ನನ್ನು ಹಣದಿಂದ ಅಥವಾ ಒತ್ತಡದಿಂದ ಖರೀದಿಸಲು ಸಾಧ್ಯವಿಲ್ಲ. ಜನರ ಪ್ರೀತಿಯೇ ನನ್ನ ದೊಡ್ಡ ಶಕ್ತಿ’ ಎಂದು ಹೇಳಿದರು.

M.B. Patil : ಮೈಸೂರು ರಾಮೋಹಳ್ಳಿ ರಸ್ತೆ ಮೇಲ್ಸೇತುವೆ  ಕಾಮಗಾರಿ ಪರಿಶೀಲನೆ.! #pratidhvani

ವಿಧಾನಪರಿಷತ್ ಚುನಾವಣೆಯ ಬಳಿಕ ಬಿಜೆಪಿ ಶಾಸಕರ ಅಡ್ಡಮತದಾನದ ಆರೋಪಗಳು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಸುರೇಶ್ ಅವರ ಈ ಆಣೆ ಪ್ರಮಾಣ ಹೊಸ ಸಂಚಲನ ಮೂಡಿಸಿದೆ.

Previous Post

ವಿವಾಹಿತೆಯನ್ನು ಓಡಿಸಿಕೊಂಡು ಹೋದ ಯುವಕನ ಮನೆ ಧ್ವಂಸ..! : ಮಗ ಮಾಡಿದ ತಪ್ಪಿಗೆ ಕಣ್ಣೀರಿನಲ್ಲಿ ಬಡ ಕುಟುಂಬ..

Next Post

Karnataka SIR: ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರದ ಷರತ್ತುಗಳೇನು..?

Related Posts

ಬಂಡಿಪುರ, ನಾಗರಹೊಳೆ ಸಫಾರಿಗೆ ಗ್ರೀನ್ ಸಿಗ್ನಲ್: ಸುರಕ್ಷತೆಗೆ ಮೊದಲ ಆದ್ಯತೆ
Top Story

ಬಂಡಿಪುರ, ನಾಗರಹೊಳೆ ಸಫಾರಿಗೆ ಗ್ರೀನ್ ಸಿಗ್ನಲ್: ಸುರಕ್ಷತೆಗೆ ಮೊದಲ ಆದ್ಯತೆ

by ಪ್ರತಿಧ್ವನಿ
June 30, 2026
0

ಬೆಂಗಳೂರು: ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ಪುನಾರಂಭಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್...

Read moreDetails
ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಮೊಟ್ಟೆಗೆ ಬ್ರೇಕ್? ಮಕ್ಕಳ ಆರೋಗ್ಯಕ್ಕಿಂತ ರಾಜಕೀಯವೇ ಮುಖ್ಯವೇ..?

June 30, 2026
ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು

ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ: ಸಿದ್ದರಾಮಯ್ಯ ಮುಂದೆ ಪ್ರದೀಪ್‌ ಈಶ್ವರ್‌ ಕಣ್ಣೀರು

June 30, 2026
Toxic: ಜುಲೈ1ಕ್ಕೆ ಟಾಕ್ಸಿಕ್ ಲೇಡಿಸ್ ದರ್ಶನ! ಯಶ್‌ ಕೊಟ್ಟ ಸುಳಿವು ಏನ್‌ ಗೊತ್ತಾ?

Toxic: ಜುಲೈ1ಕ್ಕೆ ಟಾಕ್ಸಿಕ್ ಲೇಡಿಸ್ ದರ್ಶನ! ಯಶ್‌ ಕೊಟ್ಟ ಸುಳಿವು ಏನ್‌ ಗೊತ್ತಾ?

June 30, 2026
ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

ಪ್ರಶ್ನೆ ಕೇಳಿದ್ರೆ ಸಿಡಿದ ಸದಾನಂದ ಗೌಡ: ಮೋದಿ ನೋಡಿ ಹೊಸ ಚಾಳಿ ಬೆಳೆಸಿಕೊಂಡ್ರಾ ಬಿಜೆಪಿ ನಾಯಕರು..?

June 30, 2026
Next Post
Karnataka SIR: ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರದ ಷರತ್ತುಗಳೇನು..?

Karnataka SIR: ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರದ ಷರತ್ತುಗಳೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!