ಕೋಲಾರ:ಬಿಜೆಪಿ ಶಾಸಕ ಮುನಿರತ್ನ (MLA Munirathna) ಮತ್ತು ಬಿಬಿಎಂಪಿ (BBMP) ಗುತ್ತಿಗೆದಾರ ಚಲುವರಾಜು (Chaluvarju) ಎಂಬುವವರ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಗುತ್ತಿಗೆದಾರ ಮುನಿರತ್ನ ವಿರುದ್ಧ ಕೊಲೆ ಬೆದರಿಕೆ, ಜಾತಿ ನಿಂದನೆ ಆರೋಪದಡಿ ವಯಾಲಿಕಾವಲ್ ಠಾಣೆಯಲ್ಲಿ (Vyalikaval police station)FIR ಎಫ್‌ಐಆರ್ ದಾಖಲಾಗಿತ್ತು.ಸದ್ಯ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಮುನಿರತ್ನ ಅವರು ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದ ವೇಳೆ ಕೋಲಾರದ ಗಡಿಭಾಗದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರ ಕಾರನ್ನು ಚೇಸ್ ಮಾಡಿದ ಪೊಲೀಸರು ಕಾರು ಅಡ್ಡಗಟ್ಟಿ ಅವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿರುವ ಕುರಿತು ಮೊಬೈಲ್ ಟವರ್ ಲೊಕೇಶನ್ ಟ್ರೇಸ್ ಮಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಸಿಟಿ ಪೊಲೀಸ್ ಕಮೀಷನರ್ ಸೂಚನೆ ಮೇರೆಗೆ ಮುನಿರತ್ನ ಅವರನ್ನು ವಶಕ್ಕೆ ಪಡೆಯಲಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದು, ಅವರನ್ನು ಈಗಾಲೇ ಬೆಂಗಳೂರು ಕಡೆಗೆ ಕೊಲಾರ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾರೆ.