ಇಂದು (ಮಾ.೭) ಸಿಎಂ ಸಿದ್ದರಾಮಯ್ಯ (Cm siddaramaiah) ಮಂಡನೆ ಮಾಡಿದ 2025-26 ನೇ ಸಾಲಿನ ಬಜೆಟ್‌ನಲ್ಲಿ ಮುಸ್ಲಿಂ ಸಮುದಾಯದ (Muslim community) ಗುತ್ತಿಗೆದಾರರಿಗೆ ಮೀಸಲಾತಿ ನೀಡಿದ ಸರ್ಕಾರದ ನಡೆಯ ವಿರುದ್ಧ ಮಾಜಿ ಸಚಿವ, ಬಿಜೆಪಿ ನಾಯಕ ಸುನೀಲ್ ಕುಮಾರ್ (Sunil kumar) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತಾಗಿ ಟ್ವಿಟ್ ಮಾಡಿ ಆಕ್ರೋಶ ಹೊರಹಾಕಿರುವ ಶಾಸಕ ಸುನೀಲ್ ಕುಮಾರ್, ಸರ್ಕಾರಿ ಕಾಮಗಾರಿಗಳಲ್ಲಿ 2 ಕೋಟಿ ರೂ.ವರೆಗಿನ ಗುತ್ತಿಗೆ ಮತ್ತು 1 ಕೋಟಿ ರೂ.ವರೆಗಿನ ಖರೀದಿಯಲ್ಲಿ ಮುಸ್ಲಿಂ ಮೀಸಲಾತಿ ಕಲ್ಪಿಸುವುದಾಗಿ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವುದನ್ನು ಖಂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ? ರಾಜ್ಯದಲ್ಲಿ ಹಿಂದುಳಿದ ವರ್ಗ ಅಂತ ಕೇವಲ ಮುಸಲ್ಮಾನರು ಮಾತ್ರವೇ..? ಇದು ಸರ್ಕಾರದ ಓಲೈಕೆ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಸುನೀಲ್ ಕುಮಾರ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.