ಡಿಸಿಎಂ ಡಿ.ಕೆ ಶಿವಕುಮಾರ್ ಮೇಲಿನ ಆದಾಯ ಮೀರಿ ಆಸ್ತಿ ಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಬಿಜೆಪಿ ಶಾಸಕ ಯತ್ನಾಳ್ ಜಿದ್ದಿಗೆ ಬಿದ್ದಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಹಿಂಪಡೆದಿದ್ದ ಸರ್ಕಾರದ ನಡೆ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ನಲ್ಲಿ ಮತ್ತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದಾರೆ.
ಡಿಕೆಶಿ ವಿರುದ್ಧದ ಈ ಪ್ರಕರಣದ ತನಿಖೆಯು ಇನ್ನೇನು ಮುಕ್ತಾಯ ಹಂತದಲ್ಲಿದೆ. ಈ ಹಂತದಲ್ಲಿ ರಾಜ್ಯ ಸರ್ಕಾರ ಕಾನೂನುಬಾಹಿರವಾಗಿ ಪ್ರಕರಣ ಹಿಂಪಡೆದಿದೆ. ಒಮ್ಮೆ ಸಿಬಿಐ ತನಿಖೆಗೆ ನೀಡಿದ ಒಪ್ಪಿಗೆಯನ್ನು ಮತ್ತೆ ಹಿಂಪೆದಿರುವ ರಾಜ್ಯ ಸರ್ಕಾರ ಸಿಬಿಐ ತನಿಖೆ ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಹೀಗಾಗಿ ತನಿಖೆಯನ್ನು ಮತ್ತೆ ಮುಂದುವರಿಸುವಂತೆ ನಿರ್ದೇಶನ ನೀಡಬೇಕು ಅಂತ ಹೈಕೋರ್ಟ್ ಗೆ ಶಾಸಕ ಯತ್ನಾಳ್ ಪಿಐಎಲ್ ಸಲ್ಲಿಸಿದ್ದಾರೆ.