• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು – ಕಾಂಗ್ರೆಸ್ ಲೇವಡಿ

Any Mind by Any Mind
May 29, 2021
in ರಾಜಕೀಯ
0
ಕರೋನಾ ಇಲ್ಲದಿರುತ್ತಿದ್ದರೆ ಬಿಜೆಪಿ ಶಾಸಕರು ರೆಸಾರ್ಟ್ ಸೇರುತ್ತಿದ್ದರು – ಕಾಂಗ್ರೆಸ್ ಲೇವಡಿ
Share on WhatsAppShare on FacebookShare on Telegram

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಹೆಚ್ಚಾಗುತ್ತಿರುವ ಬೆನ್ನಲ್ಲೇ, ಬಿಜೆಪಿಯೊಳಗೆ ಆಂತರಿಕ ಬೇಗುದಿ ಮತ್ತಷ್ಟು ತೀವ್ರಗೊಳ್ಳುತ್ತಿದೆ. ಬಿಜೆಪಿ ನಾಯಕರೇ ತಮ್ಮೊಳಗಿನ ಕಚ್ಚಾಟವನ್ನು ಬಹಿರಂಗವಾಗಿ ತೋಡಿಕೊಳ್ಳುತ್ತಿದ್ದಾರೆ. ಬಿಜೆಪಿಯೊಳಗಿನ ಈ ಬೆಂಕಿಗೆ ಕಾಂಗ್ರೆಸ್ ತುಪ್ಪ ಸುರಿಯುವ ಪ್ರಯತ್ನವನ್ನು ಮಾಡುತ್ತಿದೆ.

ADVERTISEMENT

ಸಿಎಂ ಯಡಿಯೂರಪ್ಪ ಅವರನ್ನು ಬದಲಾಯಿಸಿ ಹೊಸ ನಾಯಕರನ್ನು ಸಿಎಂ ಮಾಡಬೇಕು ಎಂಬ ರಾಜಕೀಯ ಕೆಸರೆರಚಾಟವನ್ನು ತೀಕ್ಷ್ಣವಾಗಿ ಟೀಕಿಸಿರುವ ಕಾಂಗ್ರೆಸ್, ಕರೋನಾ ಇಲ್ಲದೇ ಇದ್ದರೆ ಇಷ್ಟೊತ್ತಿಗೆ ಬಿಜೆಪಿ ನಾಯಕರು ರೆಸಾರ್ಟ್ ಸೇರಿರುತ್ತಿದ್ದರು, ಎಂದು ಲೇವಡಿ ಮಾಡಿದೆ.

“ಇಷ್ಟು ದಿನ ಕರೋನಾ ನಿರ್ವಹಣೆಗೆ ಹೊರಬರದೆ ಅಡಗಿದ್ದ ಬಿಜೆಪಿ ಸಚಿವ ಶಾಸಕರೆಲ್ಲ ಈಗ ಕುರ್ಚಿ ಕದನಕ್ಕಾಗಿ ದಿಢೀರ್ ಪ್ರತ್ಯಕ್ಷರಾಗಿದ್ದಾರೆ,” ಎಂದು ಕಾಂಗ್ರೆಸ್’ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ತಮ್ಮ ಅಧಿಕಾರಾವಧಿಯಲ್ಲಿ ಕೇವಲ ಖುರ್ಚಿಗಾಗಿ ಜಗಳದಲ್ಲಿ ತೊಡಗುವ ಪಕ್ಷದಿಂದ ಜನರ ರಕ್ಷಣೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.

ಕರೋನಾ ಇಲ್ಲದೆ ಇದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು!

ಇಷ್ಟು ದಿನ ಕರೋನಾ ನಿರ್ವಹಣೆಗೆ ಹೊರಬರದೆ ಅಡಗಿದ್ದ ಬಿಜೆಪಿ ಸಚಿವ ಶಾಸಕರೆಲ್ಲ ಈಗ ಕುರ್ಚಿ ಕದನಕ್ಕಾಗಿ ದಿಡೀರ್ ಪ್ರತ್ಯಕ್ಷರಾಗಿದ್ದಾರೆ.

ತನಗೆ ಸಿಕ್ಕ ಅಧಿಕಾರವಧಿಯಲ್ಲೆಲ್ಲ ಕುರ್ಚಿ ಕಾಳಗದಲ್ಲಿ ಮುಳುಗುವ ಬಿಜೆಪಿಯಿಂದ ಜನರ ರಕ್ಷಣೆ ಸಾಧ್ಯವಿಲ್ಲ.

— Karnataka Congress (@INCKarnataka) May 29, 2021

ನಳಿನ್ ಕುಮಾರ್ ಕಟೀಲ್ ವಿರುದ್ದ ಟೀಕಾಪ್ರಹಾರ:

ಎರಡು ದಿನಗಳ ಹಿಂದೆ ನಾಯಕತ್ವ ಬದಲಾವಣೆಯ ಕುರಿತು ಸಚಿವ ಸಿ ಪಿ ಯೋಗೇಶ್ವರ್ ಅವರು ನೀಡದ ಹೇಳಿಕೆಗೆ ಬಿಜೆಪಿಯಲ್ಲಿಯೇ ತೀವ್ರ ಅಪಸ್ವರ ಕೇಳಿ ಬರುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಡ್ಯಾಮೇಜ್ ಕಂಟ್ರೋಲ್ ಮಾಡಲು ಮುಂದಾಗಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ಈ ಡ್ಯಾಮೇಜ್ ಕಂಟ್ರೋಲ್ ನಡೆಯನ್ನು ಟೀಕಿಸಿರುವ ಕಾಂಗ್ರೆಸ್, ಸರ್ಕಾರದ ಆದ್ಯತೆ ಡ್ಯಾಮೆಜ್ ಕಂಟ್ರೋಲ್ ಹೊರತಾಗಿ ಕರೋನಾ ಕಂಟ್ರೋಲ್ ಅಲ್ಲ ಎಂದು ಹೇಳಿದೆ.

“ಯತ್ನಾಳ್’ತನ್ನಂತೂ ಏನೂ ಮಾಡಲಾಗಲಿಲ್ಲ, ಯೋಗೀಶ್ವರ್‌ರವರ ವಿರುದ್ಧವಾದರೂ ಕ್ರಮ ಕೈಗೊಂಡು ತಮ್ಮ ಬೆನ್ನುಮೂಳೆ ಗಟ್ಟಿ ಇದೆ ಎಂದು ನಿರೂಪಿಸುವಿರಾ ನಳಿನ್ ಕುಮಾರ್ ಕಟೀಲ್ ಅವರೇ ಎಂದು,” ಟ್ವೀಟ್ ಮೂಲಕ ಕಾಂಗ್ರೆಸ್ ಟೀಕಿಸಿದೆ.

ಇನ್ನು ಬಿಜೆಪಿ ಕೇವಲ ತನ್ನ ಒಡೆದ ಮನೆಯ ಬಗ್ಗೆ ಚಿಂತೆ ಮಾಡುತ್ತಿದೆಯೇ ಹೊರತಾಗಿ ಜನರ ಬಗ್ಗೆ ಎಳ್ಳಷ್ಟೂ ಕಾಳಜಿ ಹೊಂದಿಲ್ಲ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.

'@BJP4Karnataka ಸರ್ಕಾರದ ಆದ್ಯತೆ ಕರೋನಾ ಕಂಟ್ರೋಲ್ ಅಲ್ಲ ಡ್ಯಾಮೇಜ್ ಕಂಟ್ರೋಲ್!
ಜನರ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲದ ಬಿಜೆಪಿಗೆ ತನ್ನ ಒಡೆದ ಮನೆಯ ಬಗ್ಗೆ ಚಿಂತೆ.

ಯತ್ನಾಳ್‌ರನ್ನಂತೂ ಏನೂ ಮಾಡಲಾಗಲಿಲ್ಲ, ಯೋಗೀಶ್ವರ್‌ರವರ ವಿರುದ್ಧವಾದರೂ ಕ್ರಮ ಕೈಗೊಂಡು ತಮ್ಮ ಬೆನ್ನುಮೂಳೆ ಗಟ್ಟಿ ಇದೆ ಎಂದು ನಿರೂಪಿಸುವಿರಾ @nalinkateel ಅವರೇ!? pic.twitter.com/ZCmCvagfTR

— Karnataka Congress (@INCKarnataka) May 29, 2021
Previous Post

ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಪಡೆಯಲು ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ

Next Post

ಮೃತ ಕೋವಿಡ್ ವಾರಿಯರ್ಸ್ ಪರಿಹಾರ ಬಿಡುಗಡೆ: ಸಿಎಂಗೆ ಸಿದ್ದರಾಮಯ್ಯ ಪತ್ರ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಮೃತ ಕೋವಿಡ್ ವಾರಿಯರ್ಸ್ ಪರಿಹಾರ ಬಿಡುಗಡೆ: ಸಿಎಂಗೆ ಸಿದ್ದರಾಮಯ್ಯ ಪತ್ರ

ಮೃತ ಕೋವಿಡ್ ವಾರಿಯರ್ಸ್ ಪರಿಹಾರ ಬಿಡುಗಡೆ: ಸಿಎಂಗೆ ಸಿದ್ದರಾಮಯ್ಯ ಪತ್ರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada