ಕೊಪ್ಪಳ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸಂಗಣ್ಣ ಕರಡಿ, ಲೋಕಸಭಾ ಸ್ಥಾನ ಹಾಗು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಸಂಸದ ಸಂಗಣ್ಣ ಕರಡಿ ಇತ್ತೀಚಿನ ಬೆಳವಣಿಗೆಯಿಂದ ಲೋಕಸಭಾ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಲೋಕಸಭಾಧ್ಯಕ್ಷರಿಗೆ ಇ-ಮೇಲ್ ಮೂಲಕ ರಾಜಿನಾಮೆ ಸಲ್ಲಿಕೆ ಮಾಡಿರುವ ಕರಡಿ ಸಂಗಣ್ಣ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೂ ರಾಜಿನಾಮೆ ಪತ್ರ ರವಾನೆ ಮಾಡಿದ್ದಾರೆ. ಇ-ಮೇಲ್ ಮೂಲಕ ಬಿಜೆಪಿ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ.
ಈ ಮೂಲಕ ನಾಳೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಆಗಿದೆ. ಇತ್ತೀಚಿಗೆ ಲೋಕಸಭಾ ಟಿಕೆಟ್ ಸಿಗದ ಕಾರಣಕ್ಕೆ ಬಂಡಾಯದ ಬಾವುಟ ಹಾರಿಸುವ ಸುಳಿವು ನೀಡಿದ್ದ ಸಂಗಣ್ಣ, ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಇದೀಗ ಕಾಂಗ್ರೆಸ್ ಸೇರುವ ಮೂಲಕ ಕೇಸರಿ ಪಡೆಗೆ ತಿರುಗೇಟು ನೀಡುವ ತಯಾರಿಯಲ್ಲಿದ್ದಾರೆ.