• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರಾಜ್ಯದ ನೀರಾವರಿ ಯೋಜನೆಗಳು, ಅನುದಾನಗಳ ಬಗ್ಗೆ ಬಿಜೆಪಿ ಸಂಸದರು ಬಾಯಿ ಬಿಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
September 12, 2025
in Top Story, ಕರ್ನಾಟಕ, ರಾಜಕೀಯ
0
ರಾಜ್ಯದ ನೀರಾವರಿ ಯೋಜನೆಗಳು, ಅನುದಾನಗಳ ಬಗ್ಗೆ ಬಿಜೆಪಿ ಸಂಸದರು ಬಾಯಿ ಬಿಡಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್ ಆಗ್ರಹ
Share on WhatsAppShare on FacebookShare on Telegram

ಆಲಮಟ್ಟಿ ಎತ್ತರ ‌ಹೆಚ್ಚಳ ನಮ್ಮ ಹಕ್ಕು

ADVERTISEMENT

ಶಿವಮೊಗ್ಗ, ಸೆ.12:

“ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಅನುದಾನ, ಆಲಮಟ್ಟಿ ಎತ್ತರ ಹೆಚ್ಚಳಕ್ಕೆ ಅನುಮತಿ ಸೇರಿದಂತೆ ಕರ್ನಾಟಕದ ಪರವಾಗಿ ಬಿಜೆಪಿ ಸಂಸದರು ಬಾಯಿ ಬಿಡಬೇಕು.‌ ಇಲ್ಲದಿದ್ದರೆ ರಾಜಿನಾಮೆ ನೀಡಿ ಮರು ಚುನಾವಣೆ ಎದುರಿಸಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸವಾಲೆಸೆದರು.

ಲಕ್ಕವಳ್ಳಿಯ ಭದ್ರಾ ಅಣೆಕಟ್ಟು ಬಾಗಿನ ಅರ್ಪಣೆ ಬಳಿಕ ಐಬಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಅವರು ಮಾತನಾಡಿದರು.

“ಬಿಜೆಪಿ ಸಂಸದರು ಒಂದೇ ಒಂದು ದಿನವೂ ಪ್ರಧಾನಿಯವರನ್ನು, ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿಲ್ಲ. ಸಚಿವರಾದ ಪ್ರಹ್ಲಾದ್ ಜೋಶಿ, ಸೋಮಣ್ಣ ‌ಅವರು ನಾವು ಮಾತನಾಡಿದ್ದೇವೆ ಎಂದು ಹೇಳಿದರು ಬಿಟ್ಟರೆ,‌ ಮಿಕ್ಕವರದ್ದು ಬರೀ ಬುಟ್ಟಿ ಬೇವಿನ ಸೊಪ್ಪು” ಎಂದು ವ್ಯಂಗ್ಯವಾಡಿದರು.

MosaleHosahalli Accident: ಮೆರವಣಿಗೆ ಹೊರಟವ್ರ ಮೇಲೆ ನುಗ್ಗಿ ಬಂದ ಟ್ರಕ್‌.. 10 ಸಾ** #pratidhvani

“ನಾವು ನಿಮ್ಮ ಬಳಿ ಬೇಡುತ್ತಿಲ್ಲ, ಕೊಡಿ ಎಂದು ಕೊರಗುತ್ತಿಲ್ಲ. ನಮ್ಮ ಹಕ್ಕಿನ ಬಗ್ಗೆ ಮಾತನಾಡುತ್ತಿದ್ದೇವೆ” ಎಂದು ಹೇಳಿದರು.

“ಬಿಜೆಪಿ ಸಂಸದರು ಎದುರುಗೊಂಡರೆ ಜನರು ಪ್ರಶ್ನೆ ಮಾಡಬೇಕು. ನಮ್ಮ‌ ಪಾಲಿನ ಹಣ ಕೊಡಿಸಿ ಎಂದು ಕೇಳಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಕೇಳಲು ರಾಜ್ಯದ ಬಿಜೆಪಿ ಸಂಸದರು ಬಾಯನ್ನೇ ಬಿಚ್ಚುತ್ತಿಲ್ಲ. ನಾನು ಎರಡು ಬಾರಿ ಪ್ರಧಾನಿಯವರು ಹಾಗೂ ಹಣಕಾಸು ಸಚಿವರನ್ನು ಭೇಟಿಯಾಗಿದ್ದೇನೆ. ಕೇಂದ್ರ ಜಲಶಕ್ತಿ ಸಚಿವರಲ್ಲಿಯೂ ಮನವಿ ಮಾಡಿದ್ದೇನೆ. ಆದರೆ ಬಿಜೆಪಿಯವರು ಬಾಯಿಯನ್ನೇ ಬಿಡುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಆಲಮಟ್ಟಿ ಎತ್ತರ ‌ಹೆಚ್ಚಳ ನಮ್ಮ ಹಕ್ಕು

“ದೇವೇಂದ್ರ ಫಡ್ನವಿಸ್ ಅವರೇ ಆಲಮಟ್ಟಿ ಎತ್ತರ ಹೆಚ್ಚಳ ನಿಮ್ಮ ಹಕ್ಕಲ್ಲ, ನಮ್ಮ ಹಕ್ಕು. ಆಲಮಟ್ಟಿ ಎತ್ತರವನ್ನು 524 ಮೀಟರ್ ಗೆ ಎತ್ತರಿಸಲು ಅವಕಾಶ ನೀಡುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿರುವುದು ಸರಿಯಲ್ಲ” ಎಂದರು.

“ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೇ ನಮ್ಮ ಸರ್ಕಾರ 11 ಸಾವಿರ ಕೋಟಿಯಷ್ಟು ಹಣವನ್ನು ಖರ್ಚು ಮಾಡಿದೆ. ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಅಲ್ಲಿ ರೂ.5,300 ಕೋಟಿ ನೀಡುತ್ತೇವೆ ಎಂದು ಹೇಳಿದ್ದರು. ಇದನ್ನು ನೋಡಿ ಬಸವರಾಜ ಬೊಮ್ಮಾಯಿ ಅವರು 5,300 ಕೋಟಿ ಬರುತ್ತದೆ. ಅದಕ್ಕೆ ಒಂದಷ್ಟು ಕೆಲಸಗಳನ್ನು ತೆಗೆದುಕೊಳ್ಳುತ್ತೇನೆ ಎಂದಿದ್ದರು” ಎಂದು ತಿಳಿಸಿದರು.

“ಐದು ಜಿಲ್ಲೆಗಳಿಗೆ ಜೀವನಾಡಿಯಾಗಿರುವ ಭದ್ರಾ ಅಣೆಕಟ್ಟು ತುಂಬಿದರೆ ರೈತರ ಜೀವನ ಸುಭದ್ರ. ನಾವು ನಮ್ಮಲ್ಲಿಯೇ ನೀರಿಗಾಗಿ ಜಗಳ ಮಾಡಿಕೊಳ್ಳಬಾರದು. ಆ ಜಿಲ್ಲೆ, ಈ ಜಿಲ್ಲೆ, ನೀರು ಈ ತಾಲ್ಲೂಕಿಗೆ ಸೇರಬೇಕು ಎಂದು ಜಗಳ ಮಾಡಿಕೊಂಡರೆ ಪ್ರಯೋಜನವಿಲ್ಲ. ನಾವು ಎಲ್ಲರಿಗೂ ನ್ಯಾಯ ಸಲ್ಲಿಸುವ ಕೆಲಸ ಮಾಡುತ್ತೇವೆ. ಆಲಮಟ್ಟಿ ಎತ್ತರವನ್ನು 524 ಮೀ. ಎತ್ತರಿಸಲು ಕೇಂದ್ರದಿಂದ ಅನುಮತಿ ನೀಡುತ್ತಲೇ ಇಲ್ಲ. ಬಿಜೆಪಿಯವರು ತುಟಿ ಬಿಚ್ಚುತ್ತಿಲ್ಲ” ಎಂದರು.

“ಚೆನ್ನಗಿರಿ ತಾಲ್ಲೂಕಿನಲ್ಲಿ 45 ಕೆರೆಗಳನ್ನು ತುಂಬಿಸಲು ರೂ.365 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.‌ ಭದ್ರಾ ಅಚ್ಚುಕಟ್ಟಿನ ಶಾಸಕರ ಕ್ಷೇತ್ರದ ಅನೇಕ‌ ಕೆಲಸಗಳಿಗೆ ನಾನು ಮಂಜೂರಾತಿ ನೀಡಿದ್ದೇನೆ. ಏಕೆಂದರೆ ಚುನಾವಣೆ ಹೊತ್ತಿಗೆ ಜನರು ಏನು ಕೆಲಸ ಮಾಡಿದ್ದಾರೆ ಎಂದು ನೋಡುತ್ತಾರೆ ಹೊರತು ಇನ್ನೇನನ್ನೂ ನೋಡುವುದಿಲ್ಲ” ಎಂದರು.

ರೂ.100 ಕೋಟಿ ಪ್ರಸ್ತಾವನೆ

“ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಭದ್ರಾ ಅಣೆಕಟ್ಟುವಿನ ನಾಲೆಗಳು ದುರಸ್ತಿಯಾಗಬೇಕು ಎಂದು ಸುಮಾರು ರೂ.100 ಕೋಟಿ ಮೊತ್ತದ ಪ್ರಸ್ತಾವನೆ ಸಲ್ಲಿಸಿದ್ದಾರೆ. ಸಂಗಮೇಶ್ ಅವರು ಸುಮಾರು ರೂ.150 ಕೋಟಿ ವಿಶೇಷ ಅನುದಾನವನ್ನು ನನ್ನನ್ನು ಪುಸಲಾಯಿಸಿ ಜನರ ಕಲ್ಯಾಣಕ್ಕೆ ಪಡೆದುಕೊಂಡು ಬಿಟ್ಟಿದ್ದಾರೆ. ಮಧು ಬಂಗಾರಪ್ಪ ಅವರಿಗೆ, ಸಾಗರದ ಬೇಳೂರು ಗೋಪಾಲಕೃಷ್ಣ ಅವರಿಗೂ ವಿಶೇಷ ಅನುದಾನಗಳನ್ನು ನೀಡಿದ್ದೇನೆ. ಪರಿಷತ್ ಸದಸ್ಯರಾದ ಬಲ್ಕಿಸ್ ಬಾನು ಅವರು ಭದ್ರಾವತಿ ಹಾಗೂ ಶಿವಮೊಗ್ಗದ ಬಗ್ಗೆ ಅಪಾರ ಕಾಳಜಿಯಿಟ್ಟುಕೊಂಡು ಅನುದಾನಗಳನ್ನು ಪಡೆಯುತ್ತಿದ್ದಾರೆ. ಎಸ್.ಎಸ್. ಮಲ್ಲಿಕಾರ್ಜುನ ಅವರು ಸಹ ವಿಶೇಷ ಕಾಳಜಿವಹಿಸಿ ಭದ್ರಾ ಅಚ್ಚುಕಟ್ಟು ಪ್ರದೇಶಗಳ ಜನರ ಪರವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.

“ಬಯಲು ಸೀಮೆಯ ಜನರ ಬದುಕಿಗೂ ಭದ್ರಾ ಅಣೆಕಟ್ಟು ಜೀವನಾಡಿಯಾಗಿದೆ. ರೈತರ ಜೀವನ ಹಸನು ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಏಕೆಂದರೆ ಸಂಬಳವಿಲ್ಲದೆ, ನಿವೃತ್ತಿ ಹೊಂದದೆ, ಪಿಂಚಣಿ ಪಡೆಯದೇ ಸದಾ ದುಡಿಯುವ ಕಾಯಕಯೋಗಿ ರೈತ” ಎಂದರು.

“ಕಾಂಗ್ರೆಸ್ ಸರ್ಕಾರದ ಜನಪ್ರತಿನಿಧಿಗಳು ಜನರ ಪರವಾಗಿ, ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಮೇಲೆ ಜನರಿಗೆ ನಂಬಿಕೆಯಿದೆ.‌ ಈ ನಂಬಿಕೆಯನ್ನು ‌ನಾವು ಉಳಿಸಿಕೊಂಡಿದ್ದೇವೆ. ಅವಕಾಶ ಸಿಕ್ಕಾಗ ಪುಣ್ಯ ಕಾರ್ಯಗಳನ್ನು ಮಾಡಬೇಕು ಎಂದು ಹಿರಿಯರು ಹೇಳಿದ್ದಾರೆ. ನಾವು ಜನಸೇವೆಯೇ ಪುಣ್ಯ ಕಾರ್ಯ ಎಂದು ಮಾಡುತ್ತಿದ್ದೇವೆ. ಮಾತು ಕೊಡುವುದು ದೊಡ್ಡದಲ್ಲ, ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ದೊಡ್ಡದು” ಎಂದರು.

“ದೊಡ್ಡ ಇತಿಹಾಸ ಹೊಂದಿರುವ ಅಣೆಕಟ್ಟು ಇದಾಗಿದ್ದು, 1947 ರಲ್ಲಿ ಕಟ್ಟಲು ಪ್ರಾರಂಭ ಮಾಡಲಾಯಿತು. 1965 ರಲ್ಲಿ ಕಾರ್ಯಚಾರಣೆ ಪ್ರಾರಂಭ ಮಾಡಿತು. ಇದರ ನಿರ್ಮಾಣಕ್ಕೆ ವಿಶ್ವೇಶ್ವರಯ್ಯ ಅವರ ಕೊಡುಗೆಯೂ ಇದೆ. ಇಷ್ಟು ವರ್ಷದ ಇತಿಹಾಸದಲ್ಲಿ ಜುಲೈ ತಿಂಗಳಲ್ಲಿ ತುಂಬಿರುವುದು ಮೂರು ಬಾರಿ ಮಾತ್ರ. ಈ ವರ್ಷ ಗರಿಷ್ಠ ಮಟ್ಟ ತಲುಪಿ ಇತಿಹಾಸ ನಿರ್ಮಾಣ ಮಾಡಿದೆ” ಎಂದರು.

“92 ವರ್ಷಗಳ ಇತಿಹಾಸದಲ್ಲಿ ಕೆಆರ್ ಎಸ್ ಕೂಡ ಜೂನ್ ತಿಂಗಳಲ್ಲಿ ತುಂಬಿರಲಿಲ್ಲ.‌ ಅದೂ ಸಹ ತುಂಬಿತ್ತು. ಕಳೆದ ವಾರ ಆಲಮಟ್ಟಿ ಅಣೆಕಟ್ಟಿಗೆ ಬಾಗಿನ ಅರ್ಪಿಸಲಾಯಿತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬರ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದರು. ಅವರ ಅಪಪ್ರಚಾರ, ಟೀಕೆಗಳು ಸಾಯುತ್ತವೆ ನಮ್ಮ ಕೆಲಸಗಳು ಮಾತ್ರ ಉಳಿಯುತ್ತವೆ” ಎಂದರು.

“ಗ್ಯಾರಂಟಿಗಳಿಗೆ ಎಂದು 52 ಸಾವಿರ ಕೋಟಿ ಹಣವನ್ನು ವಾರ್ಷಿಕವಾಗಿ ಜನರಿಗಾಗಿ ಖರ್ಚು ಮಾಡುತ್ತಿದ್ದೇವೆ. ಈಗಾಗಲೇ 1 ಲಕ್ಷ‌ ಕೋಟಿಯಷ್ಟು ಹಣ ಯಾವ ಮಧ್ಯವರ್ತಿಯೂ ಇಲ್ಲದೇ ಜನರಿಗೆ ತಲುಪಿದೆ. ಈ ರೀತಿಯ ಒಂದೇ ಒಂದು ಕಾರ್ಯಕ್ರಮವನ್ನು ಬಿಜೆಪಿ, ದಳದವರು ನೀಡಿಲ್ಲ.‌ ಬಿಜೆಪಿಯವರು ನಮ್ಮನ್ನು ನಕಲು ಮಾಡಿದರು ಆದರೆ ಇನ್ನೂ ಸರಿಯಾಗಿ ಜಾರಿ ಮಾಡಲು ಸಾಧ್ಯವಾಗಿಲ್ಲ.‌ 2028 ಕ್ಕೆ ‌ಅಧಿಕಾರಕ್ಕೆ ಬರುವುದು ನಿಶ್ಚಿತ” ಎಂದರು.

Tags: BJPCongress Partydkshiavkuamrಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹಾಸನ ಗಣಪತಿ ಮೆರವಣಿಗೆ ದುರಂತದ ಬಾಧಿತರನ್ನು ಇಂದು ರಾತ್ರಿ ಭೇಟಿ ಮಾಡುವ ಜೇಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ

Next Post

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada