ಲೋಕಸಭಾ(LokaSaba) ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ(BJP) ನಾಯಕರು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ(Meeting) ನಡೆಸಿದರು. ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ(BJP) ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JPNadda) ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ದೇಶದ ಎಲ್ಲಾ ರಾಜ್ಯಗಳ ಪ್ರಮುಖ ಬಿಜೆಪಿ ನಾಯಕರುಗಳು ಪಾಲ್ಗೊಂಡಿದ್ದು, 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಲವು ಮಹತ್ವದ ವಿಚಾರಗಳ ಕುರಿತಂತೆ ಚರ್ಚೆ ನಡೆಸುವ ಮೂಲಕ ಚುನಾವಣೆಗೆ ರಣತಂತ್ರ ರೂಪಿಸಲಿದ್ದಾರೆ.

ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(NarendraModi), ಕೇಂದ್ರ ಗೃಹ ಸಚಿವ ಅಮಿತ್ ಶಾ(AmitShah), ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್(RajanathSingh) ಸೇರಿದಂತೆ ಹಲವು ಪ್ರಮುಖ ನಾಯಕರುಗಳು ಪಾಲ್ಗೊಂಡಿದ್ದಾರೆ.
#BJPIndia #NationalCoreCommitteeMeeting #NarendraModi #BJP












