2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಾಜ್ಯಾದ್ಯಂತ ಕಾಂಗ್ರೆಸ್ ಬಹುಮತ ಪಡೆದು ಗೆಲುವಿನ ಪತಾಕೆ ಹಾರಿಸಿದೆ. ಇನ್ನು ಚುನಾವಣೆಯಲ್ಲಿ ಸೋತಿರುವ ಬಿಜೆಪಿ ವಿರುದ್ಧ ವ್ಯಂಗ್ಯವಾಡಿದ ಕಾಂಗ್ರೆಸ್ ನವರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ತಿರುಗೇಟು ನೀಡಿದ್ದಾರೆ. ಜೊತೆಗೆ ಸವಾಲನ್ನು ಕೂಡ ಹಾಕಿದ್ದಾರೆ.

ʻಕಲಿಯುತ್ತೇವೆ, ಸೋಲಿನಿಂದ, ಹಿನ್ನಡೆಗಳಿಂದ, ತಪ್ಪುಗಳಿಂದ ಉತ್ತರಿಸುತ್ತೇವೆ. ಟೀಕೆಗಳಿಗೆ, ಕುಹಕಗಳಿಗೆ, ಒಡಕು ಮಾತುಗಳಿಗೆ ನಮ್ಮ ಗತಿಶೀಲತೆಯಿಂದ ನಾವು ಇರಲಿಕ್ಕೇ ಬಂದವರು, ಗೆಲ್ಲಲಿಕ್ಕೇ ಬಂದವರು. ನಮಗೆ ಸೋಲು ಕ್ಷಣಿಕ, ಮುನ್ನಡೆ ಸತತ. ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್‍ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಅಂತ ಸಾಮಾಜಿ ಜಾಲತಾಣದ ಮೂಲಕ ಕಾಂಗ್ರೆಸ್ಸಿರಿಗೆ ಬಿ.ಎಲ್.ಸಂತೋಷ್ ಚಾಲೆಂಜ್ ಮಾಡಿದ್ದಾರೆ.
