• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 30, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಆಪರೇಷನ್ ಗೆ ಬಿಜೆಪಿಯವರು ಕೈಹಾಕಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವುದು ನಿಜ ಎಂದು ಗಣಿಗ ಶಾಸಕರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಎಂದಿಗೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಾರದೇ, ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ 2008, 2018 ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ.ಬಿಜೆಪಿಯವರು ,ಇಂತಹ ಪ್ರಯತ್ನಕ್ಕೆ ಈಗಲೂ ಕೈಹಾಕಿದ್ದು, 136 ಶಾಸಕರ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸುವುದು ಸುಲಭದ ಮಾತಲ್ಲ ಎಂದರು.

ADVERTISEMENT

ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ!ಸಿದ್ದರಾಮಯ್ಯನವರ ಮೇಲೆ ಮಾತ್ರ ಇಂತಹ ಪಿತೂರಿ ನಡೆಯುತ್ತಿರುವ ಕಾರಣವೇನು ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೆರಡೂ ಸೇರಿ , ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು.ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ: ಮುಖ್ಯಮಂತ್ರಿ ಸಿದ್ದರಾಮಯ್ಯ.

ಬಾಕಿ ಪ್ರಕರಣಗಳಿಗೆ ಪ್ರಾಸಿಕ್ಯೂಷನ್ ಅನುಮತಿ ನೀಡಲು ರಾಜ್ಯಪಾಲರಿಗೆ ಒತ್ತಾಯ:

ಮುಡಾ ಪ್ರಕರಣದಲ್ಲಿ ಸಿಎಂ ಅವರು ರಾಜಿನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಜಯೇಂದ್ರ ತಿಳಿಸಿದರು ಎಂದು ರಾಜಿನಾಮೆ ನೀಡಲು ಸಾಧ್ಯವೇ ? ನಾಳೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಆದೇಶವನ್ನು ನಿರೀಕ್ಷಿಸಲಾಗಿದೆ. ನಾಳೆ ಸರ್ಕಾರದ ಎಲ್ಲ ಸಚಿವರು, ಎಂ ಎಲ್ ಎಗಳು, ಎಂಎಲ್ ಸಿ ಗಳು ರಾಜ್ಯಪಾಲರನ್ನು ಭೇಟಿ ಮಾಡಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ಧನ ರೆಡ್ಡಿ ನಿರಾಣಿ ಮೇಲಿನ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ. ಇವರೆಲ್ಲರ ಪ್ರಕರಣಗಳಲ್ಲಿ ವಿಚಾರಣೆಯಾಗಿ ಚಾರ್ಜುಶೀಟ್ ಹಾಕುವ ಪ್ರಕ್ರಿಯೆ ಮಾತ್ರ ಬಾಕಿ ಇದ್ದು, ಅನುಮತಿ ಬಾಕಿ ಇದೆ ಎಂದು ತಿಳಿಸಿದರು.

ಪರಿಸರ ತೀರುವಳಿ ಬಂದ ತಕ್ಷಣ ಮಹಾದಾಯಿಗೆ ಚಾಲನೆ:ಮಹಾದಾಯಿ ಯೋಜನೆಗೆ (Mahadayi Yojane) ಚಾಲನೆ ನೀಡಲು ಸರ್ಕಾರ ಸಿದ್ದವಿದೆ.ಆದರೆ ಕೇಂದ್ರದಿಂದ ಪರಿಸರ ತೀರುವಳಿ ನೀಡುವುದು ಬಾಕಿ ಇದ್ದು, ತೀರುವಳಿ ನೀಡಿದ ತಕ್ಷಣ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

16 ನೇ ಹಣಕಾಸು ಆಯೋಗ ರಾಜ್ಯದ ಅನುದಾನ ಕೊರತೆ ನೀಗಿಸುವ ವಿಶ್ವಾಸ!

ನಿನ್ನೆ 16 ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದ್ದು, ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ರಾಜ್ಯದ ನಿಲುವನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. 15 ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಬಗ್ಗೆ ನವದೆಹಲಿಯಲ್ಲಿ ಸರಕಾರ ಪ್ರತಿಭಟನೆ ನಡೆಸಿತ್ತು. ಆಯೋಗ ಶಿಫಾರಸ್ಸು ಮಾಡಿದ್ದ 11495 ಕೋಟಿ ರೂ.ಗಳು ರಾಜ್ಯಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ತೆರಿಗೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದ್ದು , 1.66 ರಷ್ಟು ಪ್ರಮಾಣ ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಸುಮಾರ್‌ಉ 80,000 ಕೋಟಿ ರೂ. ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸಲು ನಿನ್ನೆ ನಡೆದ ಸಭೆಯಲ್ಲಿ ಆಯೋಗದವರಿಗೆ ವಿವರಿಸಲಾಗಿದೆ. 16 ನೇ ಹಣಕಾಸಿನ ಆಯೋಗದವರು ಹಿಂದಿನ ಹಣಕಾಸಿನ ಆಯೋಗದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಅನುದಾನದ ಕೊರತೆಯನ್ನು ಸರಿದೂಗಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

Tags: 16th FinanceCM Siddaramaiah‌Congress PartyMahadayi Yojane
Previous Post

ಐವತ್ತು ದಿನ ಯಶಸ್ವಿ ಪ್ರದರ್ಶನ ಕಂಡ “ದೇಸಾಯಿ” ಚಲನಚಿತ್ರ

Next Post

ಭಾರೀ ಮಳೆಗೆ ರಾಜ್ಯವೇ ತಲ್ಲಣ:19 ಸಾವು, 23 ಸಾವಿರ ಕ್ಕೂ ಹೆಚ್ಚು ಜನರ ಸ್ಥಳಾಂತರ!

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post

ಭಾರೀ ಮಳೆಗೆ ರಾಜ್ಯವೇ ತಲ್ಲಣ:19 ಸಾವು, 23 ಸಾವಿರ ಕ್ಕೂ ಹೆಚ್ಚು ಜನರ ಸ್ಥಳಾಂತರ!

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada