ಗಾಂಧಿನಗರ: ಸೂರತ್ ನಲ್ಲಿ ಬಿಜೆಪಿಯ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವುದರ ಮೂಲಕ ಎನ್ ಡಿಎಗೆ ಮೊದಲ ಜಯ ತಂದುಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆದರೆ, ಇದಕ್ಕೆ ಕಾಂಗ್ರೆಸ್ ತೀವ್ರವಾಗಿ ಆರೋಪಿಸಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ನ ಹಿರಿಯ ನಾಯಕ ಜೈರಾಮ್ ರಮೇಶ್, ದಲಾಲ್ 1984ರಿಂದ ಸತತವಾಗಿ ಗೆಲ್ಲುತ್ತಾ ಬಂದಿರುವ ಸೂರತ್ ನಲ್ಲಿ ಮ್ಯಾಚ್ ಫಿಕ್ಸ್ ಮಾಡಲು ಯತ್ನಿಸುತ್ತಿದ್ದಾರೆ. ಬಿಜೆಪಿ ಕುರಿತು ಜನರಿಗೆ ಕೋಪವೂ ಇದೆ. ಭಯವೂ ಇದೆ. ಹಾಗಾಗಿ ಈಗಿನಿಂದಲೇ ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಮಾಡಲು ಪ್ರಯತ್ನಿಸುತ್ತಿದೆ ಎಂದಿದ್ದಾರೆ.
ಈ ಕುರಿತು ಅಕ್ಷೇಪ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಇದು ಸರ್ವಾಧಿಕಾರಿಯ ನಿಜವಾದ ಮುಖ. ಇದನ್ನು ಬಿಜೆಪಿ ಮತ್ತೊಮ್ಮೆ ದೇಶದ ಮುಂದೆ ತೋರಿಸಿದ್ದಾರೆ. ಜನರ ನಾಯಕನನ್ನು ಆಯ್ಕೆ ಮಾಡುವ ಹಕ್ಕನ್ನು ಕಸಿದುಕೊಳ್ಳುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ನಾಶಪಡಿಸುವ ಮತ್ತೊಂದು ಹೆಜ್ಜೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಸೂರತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾಣಿ ನಾಮಪತ್ರ ತಿರಸ್ಕೃತವಾಗಿತ್ತು. ಅಲ್ಲದೇ, ನಾಮಪತ್ರ ಸಲ್ಲಿಸಿದ್ದ ಇನ್ನುಳಿದ 8 ಜನ ಪಕ್ಷೇತರ ಅಭ್ಯರ್ಥಿಗಳು ಕೂಡ ಕಣದಿಂದ ಹಿಂದೆ ಸರಿದಿದ್ದರು. ಹೀಗಾಗಿ ಮತದಾನ ನಡೆಯದೇ ಗೆಲುವು ಬಿಜೆಪಿ ಪಾಲಾಯಿತು. ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾದರು. ಈ ಗೆಲುವಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಸಲ್ಲಿಸಿದ್ದ ನಾಮಪತ್ರದಲ್ಲಿನ ಸಹಿಗಳು ತಮ್ಮದಲ್ಲ ಎಂದು ಮೂವರು ಸೂಚಕರು ವಕೀಲರ ಮೂಲಕ ಚುನಾವಣಾಧಿಕಾರಿಗೆ ಪ್ರಮಾಣ ಪತ್ರ ಸಲ್ಲಿಸಿದ್ದರು. ಆಗ ಅಧಿಕಾರಿಗಳು ಸಹಿ ಪರಿಶೀಲಿಸಿದ್ದರು. ಆಗ ನಾಮಪತ್ರಗಳಲ್ಲಿನ ಸೂಚಕರ ಸಹಿಯಲ್ಲಿ ವ್ಯತ್ಯಾಸ ಕಂಡು ಬಂದಿದ್ದಲು. ಹೀಗಾಗಿ ಅವರ ನಾಮಪತ್ರ ತಿರಸ್ಕೃತಗೊಂಡಿತ್ತು. ಸದ್ಯ ಕಾಂಗ್ರೆಸ್ ಕೋರ್ಟ್ ಮೊರೆ ಹೋಗಿದೆ.