• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಕ್ಕಳಲ್ಲಿ ವಿಷ ಬೀಜ ಬಿತ್ತುತ್ತಿರುವ ಬಿಜೆಪಿ: ಹರಿಪ್ರಸಾದ್‌ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
May 17, 2022
in ಕರ್ನಾಟಕ
0
Share on WhatsAppShare on FacebookShare on Telegram

ಕೋಮುವಾದಿ ಹೆಗ್ಡೇವಾರ್‌ ಭಾಷಣವನ್ನು ಶಾಲಾ ಮಕ್ಕಳ ಪಾಠ್ಯದಲ್ಲಿ ಸೇರಿಸುವ ಮೂಲಕ ಬಿಜೆಪಿ ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಅಸಮಾಧಾನ ಹೊರಹಾಕಿದ್ದಾರೆ.

ADVERTISEMENT

ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಮಕ್ಕಳಿದ್ದಾಗಲೇ ವಿಷ ಬೀಜ ಬಿತ್ತುವ ಕೆಲಸವಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ತಂದಿರೋದೇ ಈ ಕಾರಣಕ್ಕೆ ಎಂದರು.

ಹೆಗ್ಡೇವಾರ್ ಕೋಮುವಾದ ಪ್ರತಿನಿಧಿಸುವ ಸಂಘಟನೆ ಮುಖ್ಯಸ್ಥರಾಗಿದ್ದರು. ಈ ರೀತಿಯವರು, ನಕ್ಸಲರು ಬಹಳಷ್ಟಿದ್ದಾರೆ. ಅವರನ್ನೇಲ್ಲಾ ಪಠ್ಯ ಪುಸ್ತಕದಲ್ಲಿ ಸೇರಿಸಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದರು.

ಸ್ವತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡವರನ್ನು ಮಾತ್ರ ಪಠ್ಯದಲ್ಲಿ ಸೇರಿಸಲಾಗುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದಮೇಲೆ ಸಂಪೂರ್ಣವಾಗಿ ಆರ್‌ ಎಸ್‌ ಎಸ್‌ ಅಜೆಂಡಾ ಅನುಷ್ಠಾನಗೊಳಿಸುತ್ತಿದ್ದಾರೆ. ಅದರಲ್ಲೂ ಬಸವಣ್ಣ, ಕುವೆಂಪು, ಕನಕದಾಸರ ನಾಡಲ್ಲಿ ಹೆಗ್ಡೇವಾರ್ ಪಠ್ಯ ಸೇರಿಸಿರುವುದು ವಿಷಾದನೀಯ ಎಂದು ಹರಿಪ್ರಸಾದ್‌ ಹೇಳಿದರು.

ಹೆಗ್ಡೇವಾರ್ ಭಾಷಣವನ್ನು ಪಠ್ಯದಲ್ಲಿ ಸೇರಿಸಿರುವುದು ಸರಿಯಲ್ಲ. ತಕ್ಷಣವೇ ಪಠ್ಯದಿಂದ ಹೆಗ್ಡೇವಾರ್ ಭಾಷಣವನ್ನು ತೆಗೆಯಬೇಕು. ಪಠ್ಯದಿಂದ ಭಗತ್ ಸಿಂಗ್ ಮಾತ್ರವಲ್ಲ, ಬಸವಣ್ಣ, ನಾರಾಯಣಗುರು ಪಠ್ಯಗಳನ್ನೂ ತೆಗೆದಿದ್ದಾರೆ. ಇವರೆಲ್ಲರನ್ನೂ ಮೀರಿದ ಕೊಡುಗೆ ಹೆಗ್ಡೇವಾರ್ ಕೊಟ್ಟಿದ್ದಾರಾ? ಎಂದು ಅವರು ಪ್ರಶ್ನಿಸಿದರು.

ಶಿಕ್ಷಣ ಸಚಿವ ನಾಗೇಶ್ ಆರ್ ಎಸ್ ಎಸ್  ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದಾರೆ. ಯಾವ ಸಂದರ್ಭದಲ್ಲೂ ಶಿಕ್ಷಣ ಸಚಿವರಾಗಿ ಕೆಲಸ ಮಾಡಿಲ್ಲ. ನಾಗಪುರ ಯೂನಿವರ್ಸಿಟಿಯ ಗುಪ್ತಾ ಅಜೆಂಡಾ ಜಾರಿಗೊಳಿಸುತ್ತಿದ್ದಾರೆ. ಕೋಮುಸೌಹಾರ್ದವನ್ನು ಕದಡಲು ಬಿಜೆಪಿ ಪ್ರಯತ್ನಿಸುತ್ತಿದೆ. ಪಕ್ಷದ ವತಿಯಿಂದ ಅಧ್ಯಕ್ಷರು ಹೋರಾಟ ರೂಪಿಸಲಿದ್ದಾರೆ. ನಾವು ವಿಧಾನ ಪರಿಷತ್ತಿನಲ್ಲಿ ಹೋರಾಟ ಮಾಡುತ್ತೇವೆ. ರಾಷ್ಟ್ರೀಯ ಶಿಕ್ಷಣ ನೀತಿ ವಿರುದ್ಧವೂ ಬಹಳಷ್ಟು ಚರ್ಚೆ ಮಾಡಿದ್ದೇವೆ ಎಂದು ಅವರು ಹೇಳಿದರು.

Tags: MLCpratidvanitippu sultan
Previous Post

ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ : ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಣೆ!

Next Post

ಶೀಘ್ರವೇ ಬೆಂಗಳೂರಿನಲ್ಲಿ ‘ಟೋಯಿಂಗ್ ಕಾರ್ಯಾಚರಣೆ’ ಆರಂಭ : ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಶೀಘ್ರವೇ ಬೆಂಗಳೂರಿನಲ್ಲಿ ‘ಟೋಯಿಂಗ್ ಕಾರ್ಯಾಚರಣೆ’ ಆರಂಭ : ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಶೀಘ್ರವೇ ಬೆಂಗಳೂರಿನಲ್ಲಿ ‘ಟೋಯಿಂಗ್ ಕಾರ್ಯಾಚರಣೆ’ ಆರಂಭ : ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada