• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಂಗ್ರೆಸ್‌ನಲ್ಲಿ ರೇಟ್ ಫಿಕ್ಸ್ ಆಗಿದೆ..ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗ್ತಿಲ್ಲ: ವಿಜಯೇಂದ್ರ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
July 3, 2026
in Top Story, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ನಲ್ಲಿ ರೇಟ್ ಫಿಕ್ಸ್ ಆಗಿದೆ..ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗ್ತಿಲ್ಲ: ವಿಜಯೇಂದ್ರ ವ್ಯಂಗ್ಯ
Share on WhatsAppShare on FacebookShare on Telegram

ಬೆಂಗಳೂರು: ಬೆಳೆ ಬೆಳೆಯದಿರಿ ಎಂದು ಮುಖ್ಯಮಂತ್ರಿಗಳು ನೀಡಿದ ಹೇಳಿಕೆಯು ರೈತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ.

ADVERTISEMENT
B.Y. Vijayendra : ಬಿ.ವೈ ವಿಜಯೇಂದ್ರ ಸ್ಥಾನ ಬದಲಾವಣೆ ಸಾಧ್ಯತೆ.?  #pratidhvani

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಈ ನಾಡಿನ ದೊರೆ, ಮುಖ್ಯಮಂತ್ರಿಗಳು ಒಂದು ಹೇಳಿಕೆ ಕೊಟ್ಟಿದ್ದಾರೆ. ನೀರಿಲ್ಲ, ಬೆಳೆ ಬೆಳೆಯುವುದು ಬೇಡ. ಭೀಕರ ಬರಗಾಲದ ಮುನ್ಸೂಚನೆ ವಿಚಾರವನ್ನು ಸಂಪುಟದಲ್ಲಿ ಚರ್ಚಿಸಿ ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲದ ಕಾರಣ ರೈತರು ಬೆಳೆ ಬೆಳೆಯದಿರಿ ಎಂದು ಸ್ವತಃ ಮುಖ್ಯಮಂತ್ರಿಗಳು ಹೇಳಿದ್ದು ಬಹಳ ಆಶ್ಚರ್ಯ ಮಾತ್ರವಲ್ಲದೇ ಅತ್ಯಂತ ನೋವನ್ನು ತಂದಿದೆ ಎಂದರು.

ನಾವೇನೇ ಹೇಳಿಕೆ ನೀಡಿದರೂ ಪ್ರಬುದ್ಧತೆಯಿಂದ ಮಾತನಾಡಬೇಕು ಎಂದು ವಿನಂತಿಸಿದರು. ಇಡೀ ದೇಶದಲ್ಲಿ ಬರಗಾಲದ ಛಾಯೆ ಮೂಡಿದೆ. ಪ್ರಕೃತಿ ಮುನಿಸಿಕೊಂಡ ಸಂದರ್ಭದಲ್ಲಿ ರಾಜ್ಯದ ರೈತರಿಗೆ ಅಭಯ, ಭರವಸೆಯನ್ನು ಸರ್ಕಾರ ನೀಡಬೇಕಿತ್ತು. ಮುಂದಿನ 15- 20 ದಿನ ಮಳೆ ಬೀಳುವ ಆಶಾಭಾವ ಇದೆ. ಮುಖ್ಯಮಂತ್ರಿಗಳು ಹೇಳಿದರೆಂದು ಬಿತ್ತನೆಯೇ ಮಾಡದೇ ಇದ್ದರೆ ಯಾರು ಹೊಣೆಗಾರರು ಎಂದು ಆತಂಕ ವ್ಯಕ್ತಪಡಿಸಿದರು.

Sadananda Gowda Viral Audio Sparks Row: ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿದ ಆಡಿಯೋ #pratidhvani

ಶೇ 50- 60 ಮಳೆ ಕಡಿಮೆ ಇರುವಾಗ ರಾಜ್ಯ ಸರಕಾರದ ಆದ್ಯತೆ ಏನು? ಇವರೇನಾದರೂ ಜಿಲ್ಲಾಧಿಕಾರಿಗಳಿಗೆ ಹಣ ಬಿಡುಗಡೆ ಮಾಡಿದ್ದಾರಾ ಎಂದು ಪ್ರಶ್ನಿಸಿದರು. ರೈತರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಸಂಬಂಧಿಸಿ ಅನುದಾನ ಬಿಡುಗಡೆ ಮಾಡಿದ್ದಾರಾ? ಬರಗಾಲದ ಮುನ್ಸೂಚನೆ ವಿಚಾರ ರಾತ್ರೋರಾತ್ರಿ ಜ್ಞಾನೋದಯ ಆಗಿದೆಯೇ? ಯಾಕೆ ಈ ರೀತಿ ಕಪಟ ನಾಟಕ ಆಡುತ್ತಿದ್ದೀರಿ? ಎಂದು ಕೇಳಿದರು. ಮುಖ್ಯಮಂತ್ರಿ ರೈತಪರವಾಗಿಲ್ಲದೇ ರಿಯಲ್ ಎಸ್ಟೇಟ್ ಪರ ಆದರೆ ರಾಜ್ಯದ ಹಣೆಬರಹ ಇದೇ ಆಗುತ್ತದೆ ಎಂದು ಆಕ್ಷೇಪಿಸಿದರು. ನಮ್ಮ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುವ ದುಸ್ಸಾಹಸಕ್ಕೆ ಯಾಕೆ ಕೈ ಹಾಕಿದ್ದೀರಿ ಎಂದು ಪ್ರಶ್ನಿಸಿದರು.

Priyank Kharge : RSS ವಿರುದ್ಧ ಸಮರ ಸಾರಿದ್ದ  ಪ್ರಿಯಾಂಕ್ ಖರ್ಗೆಗೆ ಕೋರ್ಟ್ ನೋಟಿಸ್.!  #pratidhvani

ಮುಖ್ಯಮಂತ್ರಿಗಳು ಇದರ ಬಗ್ಗೆ ಗಂಭೀರವಾಗಿ ಚಿಂತಿಸಬೇಕು ಎಂದ ಅವರು, ರೈತರಿಗೆ ಕೊಡಬೇಕಾದ ಯೋಜನೆ, ಆಡಳಿತ ಸನ್ನದ್ಧತೆ ಕಡೆಗೆ ಗಮನಿಸದೇ ಮುಖ್ಯಮಂತ್ರಿಗಳು ಕೈಚೆಲ್ಲಿ ಕೂತರೆ ಹೇಗೆ ಎಂದು ಟೀಕಿಸಿದರು. ಎಸ್‍ಐಆರ್ ಇರುವ ಕಾರಣ ಆಗಸ್ಟ್ ಮಧ್ಯದಲ್ಲಿ ಮುಂಗಾರು ಅಧಿವೇಶನ ಮಾಡುವುದಾಗಿ ಹೇಳಿದ್ದಾರೆ. ಶಾಸಕರು ಮನೆ ಮನೆಗೆ ತೆರಳಿ ಎಸ್‍ಐಆರ್ ಮಾಡುತ್ತಾರಾ ಎಂದರು.

R Ashoka : ಕೆಂಪೇಗೌಡ ಜಯಂತಿಯಲ್ಲಿ ಚಪ್ಪಲಿ ಎಸೆತ ಘಟನೆ.! #srvishwanath #sudhakar #pradeepeshwar

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ ಆಗಿದೆ

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ ಆಗಿದೆ. ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿಲ್ಲ. ಇದೇ ಕಾರಣಕ್ಕೆ ಅಧಿವೇಶನ ಮುಂದೂಡುತ್ತಿದ್ದಾರೆ. ಸಿದ್ದರಾಮಯ್ಯನವರ ಪೂರ್ಣ ಸಂಪುಟ ಇದ್ದರೂ ನೆರೆ ಬಂದಾಗ ರೈತರ ಸಂಕಷ್ಟಕ್ಕೆ ಸ್ಪಂದಿಸಿರಲಿಲ್ಲ. ಕ್ಯಾಬಿನೆಟ್ ವಿಸ್ತರಿಸಿದರೆ ಈ ಸರಕಾರದ ಬುಡ ಅಲ್ಲಾಡುವ ವಾಸ್ತವಿಕ ಸತ್ಯ ಸಿಎಂಗೆ ಗೊತ್ತಿದೆ. ಹಾಗಾಗಿ ಎಸ್‍ಐಆರ್ ನೆಪ ಒಡ್ಡಿದ್ದಾರೆ ಎಂದು ಆರೋಪಿಸಿದರು.

D K  Shivakumar : ಮಾಧ್ಯಮಗಳು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಲು ಸಿಎಂ ಡಿಕೆಶಿ ಕರೆ.. #pratidhvani

ಹಾನಗಲ್ ತಾಲ್ಲೂಕಿನ ನರೇಗಲ್‍ನಲ್ಲಿ ಹಾಲುಮತ ಸಮಾಜದ ಒಂದೇ ಕುಟುಂಬದ ಆರು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಮತ್ತೊಂದೆಡೆ ಹಾಸನದ ರಟ್ಟೇಹಳ್ಳಿಯಲ್ಲಿ ಮರಾಠಾ ಸಮಾಜದ ಬಡ ಕುಟುಂಬದ ಶಿವಾಜಿ ರಾವ್ ಅವರನ್ನು ಹಾಡಹಗಲೇ ಒದ್ದು ಪ್ರಾಣ ತೆಗೆಯುವ ಕೆಲಸ ಆಗಿದೆ. ಚಿಕ್ಕಬಳ್ಳಾಪುರದಲ್ಲಿ ಲವ್ ಜಿಹಾದ್‍ಗೆ ಒಳಗಾಗಿ ಫಿಸಿಯೋಥೆರಪಿಸ್ಟ್ ಕೊಲೆಯಾಗಿದೆ. ಮುಖ್ಯಮಂತ್ರಿ ಡಿಕೆ ಸಾಫ್ಟ್ ಹಿಂದುತ್ವವಾದ, ಗೃಹಸಚಿವ ಪಿಕೆ ಮತ್ತು ಕೆಪಿಸಿಸಿ ಅಧ್ಯಕ್ಷ ಬಿಕೆ ಅವರ ಹಿಂದೂ ವಿರೋಧಿ ನೀತಿ- ಇವರ ಹೇಳಿಕೆಗಳು ಮತೀಯ ಶಕ್ತಿಗಳಿಗೆ ಧೈರ್ಯ ನೀಡುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರದ ಅಲ್ಪಸಂಖ್ಯಾತರ ಓಲೈಕೆಯೇ ಇದಕ್ಕೆ ಕಾರಣ ಎಂದು ಆಕ್ಷೇಪಿಸಿದರು.

.

Previous Post

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ಸಚಿವ ಕೆ.ಜೆ ಜಾರ್ಜ್ ಮಹತ್ವದ ಮಾಹಿತಿ

Next Post

“ಘೋಷಣೆ ಬೆಟ್ಟದಷ್ಟು, ಸಾಧನೆ ಶೂನ್ಯ! ಭರವಸೆ ಕಾಂಗ್ರೆಸ್‌ನದು, ಮೋಸ ಮಾತ್ರ ಬಡವರ ಪಾಲು!”

Related Posts

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?
Top Story

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

by ಪ್ರತಿಧ್ವನಿ
July 5, 2026
0

ಬೆಳಗಾವಿ: ಆರ್‌ಎಸ್‌ಎಸ್‌ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿರುವ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ನೀಡದಿರಲು ಸಂಘದ ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಆದರೆ ಪರೋಕ್ಷವಾಗಿ...

Read moreDetails
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

July 4, 2026
Next Post
Indira Kit on R Ashok

"ಘೋಷಣೆ ಬೆಟ್ಟದಷ್ಟು, ಸಾಧನೆ ಶೂನ್ಯ! ಭರವಸೆ ಕಾಂಗ್ರೆಸ್‌ನದು, ಮೋಸ ಮಾತ್ರ ಬಡವರ ಪಾಲು!"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada