• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ, ಒಳ ಮೀಸಲಾತಿಯಡಿ ಹುದ್ದೆ ಭರ್ತಿಗೆ ವಿಜಯೇಂದ್ರ ಆಗ್ರಹ..

ಪ್ರತಿಧ್ವನಿ by ಪ್ರತಿಧ್ವನಿ
March 4, 2026
in Uncategorized
0
“ಒಳ ಮೀಸಲಾತಿ ಜಾರಿ ಮಾಡದೇ ಹುದ್ದೆ ಭರ್ತಿಯಾದರೆ, ರಾಜ್ಯದಲ್ಲಿ ಮುಂದಿನ ಘಟನೆಗಳಿಗೆ ನೀವೇ ಹೊಣೆ”
Share on WhatsAppShare on FacebookShare on Telegram

ಬೆಂಗಳೂರು : ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ADVERTISEMENT
Iran Israel War : Khameneiಪರ Indiaದಲ್ಲಿ  ಪ್ರತಿಭಟನೆ ಮಾಡೋದು ಬೇಡ  |Major| Raghu Ram Reddy |Pratidhvani

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೀಸಲಾತಿ ಪ್ರಮಾಣವನ್ನು ಶೇ 50ರಿಂದ ಶೇ 56ಕ್ಕೆ ಏರಿಸಿದ್ದಾರೆ. ನೀವು 50 ಸಾವಿರ ಖಾಲಿ ಹುದ್ದೆ ಭರ್ತಿ ಮಾಡುತ್ತೀರಾ, ಅಥವಾ 1 ಲಕ್ಷ ಹುದ್ದೆ ಭರ್ತಿ ಮಾಡುವಿರಾ ಎಂಬುದು ನಿಮಗೆ ಬಿಟ್ಟದ್ದು. ಎಲ್ಲ ಖಾಲಿ ಹುದ್ದೆ ಭರ್ತಿ ಮಾಡಿ ಎಂಬ ಆಗ್ರಹ ನಮ್ಮದು. ಶೇ 56 ಒಳ ಮೀಸಲಾತಿ ನೀಡಿ ಬಿಜೆಪಿ ಸರಕಾರವು ಎಲ್ಲ ಸಮುದಾಯಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿದೆ. ಅದರ ಆಧಾರದಡಿ ಶೋಷಿತ- ಪೀಡಿತ ಸಮುದಾಯಗಳಿಗೆ ಒಳ ಮೀಸಲಾತಿ ಪರಿಗಣಿಸಿ ಈ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಗಳೇ ಪದೇಪದೇ ಈ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದೀರಿ. ಪರಿಶಿಷ್ಟ ಜಾತಿ- ಪಂಗಡಗಳ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ರಾಜ್ಯ ನ್ಯಾಯಾಲಯದ ಕುಂಟುನೆಪ ಹೇಳದೇ ಉದ್ಯೋಗ ನೀಡಿ ನ್ಯಾಯ ಕೊಡಿ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ- ಪಂಗಡಗಳ ಯುವಜನತೆ ಸೇರಿ ಎಲ್ಲ ವರ್ಗಗಳ ಜನರಿಗೆ ನ್ಯಾಯ ಕೊಡುವ ಕೆಲಸ ಮಾಡಿ. ಅದನ್ನು ಬಿಟ್ಟು ಈ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳು ತೊಟ್ಟಿಲು ತೂಗುವ ಜೊತೆಗೇ ಮಗುವನ್ನು ಚಿವುಟುವ ಕೆಲಸ ಮಾಡುತ್ತಿದೆ ಇದು ಅಕ್ಷಮ್ಯ ಅಪರಾಧ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ : ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಹಳೆಯ ಮೀಸಲಾತಿ ಪ್ರಮಾಣದಡಿ ನೇಮಕಾತಿಗೆ ಮುಂದಾಗಿರುವ ರಾಜ್ಯ ಸರ್ಕಾರವು ರಾಜ್ಯದಲ್ಲಿ ಬೆಂಕಿ ಹಚ್ಚಲು ಹೊರಟಂತಿದೆ. ನೀವೆಷ್ಟು ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುತ್ತೀರೆಂಬುದು ನಮಗೆ ತಿಳಿದಿಲ್ಲ. ಆದರೆ, ಯಾವ ಅಹಿಂದ ಸಮುದಾಯದ ಅಧಿಕಾರ ಹಿಡಿದ ಮುಖ್ಯಮಂತ್ರಿಗಳೇ ಆ ಸಮುದಾಯದ ತಾಳ್ಮೆಯನ್ನು ಪರೀಕ್ಷೆ ಮಾಡದಿರಿ. ಶೋಷಿತ- ಪೀಡಿತ ಸಮುದಾಯಗಳನ್ನು ಕೆಣಕದಿರಿ. ಒಳ ಮೀಸಲಾತಿ ಜಾರಿ ಮಾಡದೇ ಖಾಲಿ ಹುದ್ದೆ ಭರ್ತಿ ಮಾಡುವ ಕೆಲಸ ಮಾಡಿದರೆ, ರಾಜ್ಯದಲ್ಲಿ ಮುಂದೆ ಆಗುವ ಘಟನೆಗಳಿಗೆ ತಾವೇ ಹೊಣೆ ಹೊರಬೇಕಾಗುತ್ತದೆ ಎಂದು ವಿಜಯೇಂದ್ರ ಗುಡುಗಿದ್ದಾರೆ.

ಇದೆಲ್ಲವನ್ನು ಪರಿಗಣಿಸಿ ಸಮರ್ಪಕ ನಿರ್ಧಾರವನ್ನು ಮುಖ್ಯಮಂತ್ರಿಗಳು ಮಾಡಬೇಕು. ಯುವಜನತೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ವಯೋಮಿತಿ ಮೀರುತ್ತಿದೆ. ಅವರ ಸಹನೆಯ ಕಟ್ಟೆ ಒಡೆದು ಹೋಗಿದೆ. ಇದನ್ನು ಕೂಡ ಪರಿಗಣಿಸಿ ನ್ಯಾಯ ಕೊಡುವ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ತಮ್ಮ ಗೌರವ ಉಳಿಸಿಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ…

ಇದೇ 6ರಂದು ಅಧಿವೇಶನ ಆರಂಭ ಆಗುತ್ತಿದೆ. ಸರಣಿ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಪ್ರಾರಂಭ ಆಗಲಿದೆ. ನುಡಿದಂತೆ ನಡೆದ ಸರ್ಕಾರ ಯಾವುದೇ ಭರವಸೆಯನ್ನೂ ಈಡೇರಿಸಿಲ್ಲ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ಪ್ರಾರಂಭ ಮಾಡಲಿದ್ದಾರೆ. ಅತಿಥಿ ಉಪನ್ಯಾಸಕರ ಆಶ್ವಾಸನೆಯನ್ನೂ ಸರಕಾರ ಈಡೇರಿಸಿಲ್ಲ. ಅವರೂ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಸೃಷ್ಟಿಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೆಎಸ್‍ಆರ್‌ಟಿಸಿ – ಬಿಎಂಟಿಸಿ ನೌಕರರಿಗೆ ಪಿಎಫ್- ಗ್ರಾಚ್ಯುಟಿ ಕೊಡದೇ ಅನ್ಯಾಯ ಮಾಡುತ್ತಿದ್ದು, ಅವರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರೂ ಬೀದಿಗಿಳಿಯಲಿದ್ದಾರೆ. ಮತ್ತೊಂದೆಡೆ 108 ಆಂಬುಲೆನ್ಸ್ ಕೆಟ್ಟು ನಿಂತು ನೌಕರರಿಗೆ ಸಂಬಳ ಕೊಟ್ಟಿಲ್ಲ. 34 ತಿಂಗಳಿನಿಂದ ಸಣ್ಣಪುಟ್ಟ ಗುತ್ತಿಗೆದಾರರು ಸೇರಿಸಿಕೊಂಡು ಸುಮಾರು 40- 45 ಸಾವಿರ ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದಾರೆ. ಈಗಾಗಲೇ ಆತ್ಮಹತ್ಯೆ ಪ್ರಕರಣಗಳೂ ನಡೆದಿವೆ ಎಂದು ಸರ್ಕಾರದ ವೈಫಲ್ಯಗಳ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರಿನ ಕಸದ ಸಮಸ್ಯೆ ಇದ್ದೆ ಇದೆ , ಪೌರಕಾರ್ಮಿಕರ ಹೋರಾಟವೂ ನಡೆಯಲಿದ್ದು, ಸರಣಿ ಹೋರಾಟಗಳು ಪ್ರಾರಂಭ ಆಗಲಿವೆ. ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.

ಆಡಳಿತ ಪಕ್ಷವಾದ ಕಾಂಗ್ರೆಸ್ಸಿನ ಶಾಸಕರನ್ನು ಸಮಾಧಾನಪಡಿಸಲು ನೀವು ವಿದೇಶ ಪ್ರವಾಸ ಕಲ್ಪಿಸಿ ಕೊಟ್ಟಿದ್ದೀರೆಂದರೆ, ರಾಜ್ಯದ ಆಡಳಿತ ಸಂಪೂರ್ಣ ಕುಸಿದಿದೆ; ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅಭಿವೃದ್ಧಿಯಿಂದ ಕರ್ನಾಟಕವು ವಂಚಿತವಾಗಿದೆ. ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ. ಇದು ವಾಸ್ತವಿಕ ಸತ್ಯ. ಆದ್ದರಿಂದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರವನ್ನು ದೂರುವುದನ್ನು ಬಿಟ್ಟು ಇವೆಲ್ಲ ವಿಚಾರಗಳನ್ನು ಪರಿಗಣಿಸಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

Tags: B Y VijayendraBJPbjp karnatakaBMTCCM Siddaramaiahcongresscongress karnatakaDK ShivakumarGovernment jobsGovernment of IndiaGovernment of KarnatakaInternal Reservationkannada newsKarnataka PoliticsKSRTCPratidhvaniprotestsRamalinga ReddyRecruitementREservation IssueSCSTtransport strike
Previous Post

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

Next Post

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌...

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada