ರಾಜ್ಯಸಭೆಗೆ(Rajya Saba) ಆಯ್ಕೆಯಾದ ನಾಸಿರ್ ಹುಸೇನ್(Nasir Hussain) ಬೆಂಬಲಿಗರು ಪಾಕಿಸ್ತಾನ್(Pakistan) ಜಿಂದಾಬಾದ್ ಘೋಷಣೆ ಕೂಗಿರುವ ವಿಚಾರದ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಪ್ರತಿಪಕ್ಷ ಬಿಜೆಪಿ(BJP) ಕೂಡ ತೀವ್ರವಾಗಿ ಖಂಡಿಸಿದೆ.
ಪ್ರಕರಣದ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ಹಂಚಿಕೊಂಡಿರುವ ಬಿಜೆಪಿ(BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(BYVijayendra), ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್(Congress) ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನು ತನ್ನ ಮಡಿಲಲ್ಲಿ ಕಟ್ಟಿ ಕೊಂಡಿರಬಹುದು ಎಂದು ಅಂದಾಜಿಸಲು ಇಂದಿನ ಘಟನೆ ಸಾಕ್ಷಿ ಒದಗಿಸಿದೆ.

ರಾಜ್ಯ ಸಭೆಗೆ ಆಯ್ಕೆಮಾಡಿ ಕಳುಹಿಸಿರುವ ಸೈಯದ್ ನಾಸೀರ್ ಹುಸೇನ್ ಹಿಂದೆ ಇರುವ ಬೆಂಬಲಿಗರು ಪಾಕಿಸ್ತಾನಿ ಬೆಂಬಲಿತ ಉಗ್ರರೇ ಇರಬೇಕು, ‘ತನ್ನನು ರಕ್ಷಿಸಲು ತಮ್ಮ ಮನಃಸ್ಥಿತಿಯ ಕಾಂಗ್ರೆಸ್ ಸರ್ಕಾರ ಇರುವಾಗ ನಾವ್ಯಾರಿಗೆ ಹೆದರಬೇಕು’ ಎಂಬ ದುಷ್ಟ ಮನಸ್ಸಿನಿಂದ ಘೋಷಣೆ ಕೂಗಿರುವ ದೇಶ ವಿರೋಧಿ ನೀಚರನ್ನು ಈ ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕು.
ಸಾಕ್ಷಿಗಳೆಲ್ಲವೂ ಕಣ್ಣೆದುರಿಗೇ ಇರುವಾಗ ದೇಶ ವಿರೋಧಿಗಳನ್ನು ರಕ್ಷಿಸಲು ಯತ್ನಿಸುವ ಪ್ರಯತ್ನ ನಡೆದರೆ ಮುಂದಾಗುವ ಪರಿಣಾಮಕ್ಕೆ ಕಾಂಗ್ರೆಸ್ಸ ರ್ಕಾರವೇ ಹೊಣೆಯಾಗಲಿದೆ. ನಮ್ಮ ಮುಂದಿನ ಹೋರಾಟ “ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನ ಸೌಧ ಬಿಟ್ಟು ತೊಲಗಿ” ಎಂದು ತಿಳಿಸಿದ್ದಾರೆ
BYV #BJPPresident #Karnataka #Congress #BYVijayendra #Rajyasaba






