ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಚರ್ಚೆಯೇ ಆಗಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲ್ ಅವರು ಕಳೆದ ಮೂರು ವರ್ಷಗಳಿಂದ ಪಕ್ಷವನ್ನು ಅತ್ಯಂತ ಸಮರ್ಥವಾಗಿ. ಮುನ್ನಡೆಸಿದ್ದಾರೆ. ಸುಮಾರು 8- 10 ಬಾರಿ ರಾಜ್ಯವನ್ನು ಸುತ್ತಿದ್ದಾರೆ ಎಂದರು.

ಬೂತ್ ಮಟ್ಟದಿಂದ ಸಂಘಟನೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆ ಮುನ್ನ ಹಾಗೂ ನಂತರ ವಿಧಾನ ಪರಿಷತ್ ಚುನಾವಣೆ, ಉಪ ಚುನಾವಣೆ ಎಲ್ಲವನ್ನೂ ಸಮರ್ಥವಾಗಿ ಸಂಘಟಿಸಿ ಎದುರಿಸಿದ್ದಾರೆ. ಯಶಸ್ವಿಯಾಗಿ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ಮುಂದುವರೆಯುತ್ತಿದ್ದೇವೆ. ಅವರ ನೇತೃತ್ವ ಪಕ್ಷಕ್ಕೆ ಇನ್ನಷ್ಟು ಬಲ ನೀಡಲಿದೆ ಎಂದರು.