ಬೆಂಗಳೂರು :ಗಣೇಶನ ಮೂರ್ತಿಗಳನ್ನು ಇರಿಸಿಕೊಂಡು ಶುಕ್ರವಾರ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ದೇವರನ್ನೂ ಸಹ ಬಂಧಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಶನಿವಾರ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ, ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತೆ ಕಾಂಗ್ರೆಸ್ ಸರ್ಕಾರ ರಾಹುಕಾಲಕ್ಕೆ ಗಣೇಶ ಮೂರ್ತಿಗಳನ್ನು ಬಂಧಿಸಿದೆ ಎಂದು ಕಿಡಿಕಾರಿದೆ.
ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಅದೆಷ್ಟರ ಮಟ್ಟಿಗೆ ಲಜ್ಜೆ ಬಿಟ್ಟು ನಿಂತಿದೆ ಎನ್ನುವುದಕ್ಕೆ ಗಣೇಶ ಮೂರ್ತಿಯನ್ನು ಬಂಧಿಸಿ ಪೊಲೀಸ್ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿರುವುದೇ ಸಾಕ್ಷಿ! ಇಷು ದಿನ ಹಿಂದೂಗಳ ಮೇಲೆ ದಾಳಿ ಮಾಡಿಸುವುದು. ಹಿಂದೂಗಳ ಭೂಮಿ ಕಬಳಿಸುವುದು., ಹಿಂದೂಗಳನ್ನು ಬಂಧಿಸುವುದು , ಹಿಂದೂಗಳನ್ನು ಹತ್ತಿಕ್ಕುತ್ತಿದ್ದ ಭ್ರಷ್ಟ ಸಿಎಂ ಸಿದ್ದರಾಮಯ್ಯ, ಅವರು ಗಣೇಶ ಮೂರ್ತಿಗಳನ್ನೇ ಬಂಧಿಸಿರುವುದು ರಾಹು ಕಾಲ ಶೀಘ್ರದಲ್ಲೇ ಕೊನೆಯಾಗಲಿದೆ ಎಂಬುದರ ಮುನ್ಸೂಚನೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.