ಜಮ್ಮು-ಕಾಶ್ಮೀರಕ್ಕೆ (Jammu & kashmir) ವಿಶೇಷ ಸ್ಥಾನಮಾನ ಮರುಸ್ಥಾಪನೆ ವಿಚಾರಕ್ಕೆ ಸಂಬಂಧಪಟ್ಟಂತೆ, ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ (Assembly) ನವೆಂಬರ್ 6ರಂದು ಈ ನಿರ್ಣಯ ಅಂಗೀಕರಿಸಲಾಗಿದೆ.
ಈ ನಿರ್ಣಯ ಅಂಗೀಕಾರ ಇಂದು ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ನಿರ್ಣಯ ಅಂಗೀಕರಿಸಿದ್ದಕ್ಕೆ ವಿರೋಧಿಸಿ ಬಿಜೆಪಿಯ (BJP members) ವಿಧಾನಸಭೆ ಸದಸ್ಯರು ಗಲಾಟೆ ಮಾಡಿದ್ದಾರೆ.
ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನದ ಕುರಿತು, ಈ
ನಿರ್ಣಯವನ್ನ ವಿತ್ ಡ್ರಾ ಮಾಡಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ್ದು, ಬಿಜೆಪಿ ನಿಲುವಿಗೆ ವಿರುದ್ಧವಾಗಿ NC ಹಾಗೂ ಪಿಡಿಪಿ (PDP) ಸದಸ್ಯರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಸದನದಲ್ಲಿ ಕೋಲಾಹಲ ಸೃಷ್ಟಿಯಾಗಿದೆ.