ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಆಡಳಿತರೂಢ ಬಿಜೆಪಿ ಸರ್ಕಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಪಕ್ಷದ ರಾಜ್ಯ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಭೂಪೇಂದ್ರ ಪಟೇಲ್, ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಪಕ್ಷ ಅಧಿಕಾರಕ್ಕೆ ಬಂದರೆ ಏಕರೂಪ ನಾಗರೀಕ ಸಂಹಿತೆ ಜಾರಿ ಮಾಡಲಾಗುವುದು ಮತ್ತು ರಾಜ್ಯಕ್ಕೆ ಕಂಟಕವಾಗಿರುವ ಸ್ಲೀಪರ್ ಸೆಲ್‌ಗಳನ್ನು ತೊಡೆದು ಹಾಕಲು ಕಾನೂನನ್ನು ಜಾರಿಗೆತರಲಾಗುವುದು ಎಂದು ತಿಳಿಸಲಾಗಿದೆ.