• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ನನ್ನ ಹಾಗೂ ಸಿಎಂ ನಡುವೆ ಭಿನ್ನಾಭಿಪ್ರಾಯವಿಲ್ಲ, ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ

ಪ್ರತಿಧ್ವನಿ by ಪ್ರತಿಧ್ವನಿ
December 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ ಸರಿಯಾಗಿ ಸಿಗುತ್ತಿಲ್ಲ. ರೈತರಿಗೆ ಸಹಾಯ ಮಾಡಲು ಮಹದಾಯಿ ಯೋಜನೆ ಬಗ್ಗೆ ತೀರ್ಮಾನ ಮಾಡಲು ಇವರೆಗೂ ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಮೇಕೆದಾಟು ವಿಚಾರದಲ್ಲಿ ನಮ್ಮ ಹೋರಾಟದಿಂದ ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಕ್ಕಿದ್ದು, ಒಂದೇ ದಿನದಲ್ಲಿ ಅನುಮತಿ ಕೊಡಿಸುತ್ತೇವೆ ಎಂದು ಹೇಳಿದ್ದವರು ಇನ್ನೂ ಕೊಡಿಸಿಲ್ಲ. ಭದ್ರ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ ಘೋಷಿಸಿದ ₹5,400 ಹಣವನ್ನು ಇದುವರೆಗೂ ಕೊಟ್ಟಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರದಲ್ಲಿ ಭೂ ಸಂತ್ರಸ್ತ ರೈತರಿಗೆ 76 ಸಾವಿರ ಕೋಟಿ ಪರಿಹಾರ ನೀಡಲು ನಮ್ಮ ಸರ್ಕಾರ ತೀರ್ಮಾನಿಸಿದೆ. ಈ ಯೋಜನೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು” ಎಂದು ಕಿಡಿಕಾರಿದರು.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ:
“ಬಿಜೆಪಿಯ ಯಾವೊಬ್ಬ ಸಂಸದರು ಕೇಂದ್ರ ಸರ್ಕಾರದ ಜೊತೆ ಈ ವಿಚಾರವಾಗಿ ಮಾತನಾಡಿಲ್ಲ. ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ” ಎಂದು ತಿರುಗೇಟು ನೀಡಿದರು.

ಸರ್ವಪಕ್ಷ ನಿಯೋಗ ಭೇಟಿ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಡಿ.8ರಂದು ಸಭೆ ಮಾಡಲು ನಾವು ನಿರ್ಧರಿಸಿದ್ದೆವು. ಆದರೆ ಅವರು ಸಮಯದ ಇಕ್ಕಟ್ಟಿದೆ ಎಂದು ನಮಗೆ ಪತ್ರ ಬರೆದರು. ಹೀಗಾಗಿ ಅವರು ನಾವು ಅವರಿಗೆ ಸಮಯ ನಿಗದಿ ಮಾಡಲು ಹೇಳಿದ್ದು, ಅವರು ಹೇಳಿದ ದಿನ ಸಭೆ ಮಾಡಲು ಸಿದ್ಧವಿದ್ದೇವೆ” ಎಂದು ಸ್ಪಷ್ಟಪಡಿಸಿದರು.

ನನ್ನ ಹಾಗೂ ಸಿಎಂ ನಡುವೆ ಭಿನ್ನಾಭಿಪ್ರಾಯವಿಲ್ಲ
ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಎಂಬ ಯತೀಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನನ್ನ ಹಾಗೂ ಸಿಎಂ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮಲ್ಲಿ ಈ ಹಿಂದೆಯೂ ಗೊಂದಲವಿಲ್ಲ, ಈಗಲೂ ಇಲ್ಲ, ಮುಂದೆಯೂ ಇಲ್ಲ. ಅವರು ಯಾವ ರೀತಿ ಹೇಳಿದ್ದಾರೆ ನನಗೆ ಗೊತ್ತಿಲ್ಲ. ನಾನು ಅವರ ಜೊತೆ ಮಾತನಾಡುವೆ” ಎಂದು ತಿಳಿಸಿದರು.

ಹೈಕಮಾಂಡ್ ನಿಮ್ಮನ್ನು ಯಾವಾಗ ಕರೆಯಬಹುದು ಎಂದು ಕೇಳಿದಾಗ, “ನನಗೆ ಗೊತ್ತಿಲ್ಲ. ಅವರು ನನ್ನ ಜೊತೆ ಚರ್ಚೆ ಮಾಡಿರುವ ವಿಚಾರವನ್ನು ನಿಮ್ಮ (ಮಾಧ್ಯಮಗಳ) ಮುಂದೆ ಬಹಿರಂಗಪಡಿಸುವುದಿಲ್ಲ” ಎಂದು ತಿಳಿಸಿದರು.

Tags: cm siddaramaiah dk shivakumarDCM DK ShivakumarDK Shivakumardk shivakumar cm buzzdk shivakumar delhidk shivakumar interviewdk shivakumar latest newsdk shivakumar meetingdk shivakumar newsdk shivakumar next cm karnatakadk shivakumar on rahul gandhidk shivakumar pm modidk shivakumar press updatedk shivakumar speechdk shivakumar today newsdk shivakumar updateskarnataka cm dk shivakumarkarnataka dk shivakumarrahul gandhi dk shivakumarsiddaramaiah vs dk shivakumar
Previous Post

‘ಯಜಮಾನ’ ಧಾರಾವಾಹಿಗೆ ಬಿಗ್‌ ಬಾಸ್‌ ಯಮುನಾ ಶ್ರೀನಿಧಿ ಎಂಟ್ರಿ

Next Post

ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಮನವಿಗೆ ಸ್ಪಂದಿಸಿದ ಸರ್ಕಾರ: ಡಿ.13ರಂದು ಮಹತ್ವದ ಸಭೆ

Related Posts

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ
Top Story

ಸತ್ತ ಅಕ್ಕನ ಅಸ್ಥಿಪಂಜರ ಹೊತ್ತು ಬ್ಯಾಂಕ್‌ಗೆ ಬಂದ ಸೋದರ: ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಹೃದಯವಿದ್ರಾವಕ ಪ್ರತಿಭಟನೆ

by ಪ್ರತಿಧ್ವನಿ
April 29, 2026
0

ಒಡಿಶಾದ ಖಿಯೋಂಜರ್ ಜಿಲ್ಲೆಯಲ್ಲಿ ನಡೆದ ಘಟನೆೊಂದು ಸಮಾಜದ ಸಂವೇದನಾಶೀಲತೆಯ ಕೊರತೆ ಮತ್ತು ಆಡಳಿತದ ಕಠೋರತೆಯನ್ನು ಬಯಲಿಗೆಳೆದಿದೆ. ಬಡ ಆದಿವಾಸಿ ಯುವಕ ಜೀತು ಮುಂಡಾ ತನ್ನ ಸತ್ತ ಅಕ್ಕನ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

ಪಕ್ಷ ರಾಜಕಾರಣ ಮತ್ತು ಮಹಿಳಾ ಮೀಸಲಾತಿ

April 28, 2026
Next Post
ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಮನವಿಗೆ ಸ್ಪಂದಿಸಿದ ಸರ್ಕಾರ: ಡಿ.13ರಂದು ಮಹತ್ವದ ಸಭೆ

ಬೆಂಗಳೂರು ಅಪಾರ್ಟ್‌ಮೆಂಟ್‌ ಫೆಡರೇಷನ್‌ ಮನವಿಗೆ ಸ್ಪಂದಿಸಿದ ಸರ್ಕಾರ: ಡಿ.13ರಂದು ಮಹತ್ವದ ಸಭೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada