• Home
  • About Us
  • ಕರ್ನಾಟಕ
Friday, July 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಜೆಪಿಯವರು ಮೊದಲು ಕೇಂದ್ರದ ವಿರುದ್ಧ ಪ್ರತಿಭಟಿಸಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!

ಪ್ರತಿಧ್ವನಿ by ಪ್ರತಿಧ್ವನಿ
April 1, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

* ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ

ADVERTISEMENT
  • ಹಾಲಿನ ದರ ಏರಿಕೆಯಿಂದ ರೈತರಿಗೆ ಅನುಕೂಲ ಬೆಳಗಾವಿ: ಕರ್ನಾಟಕ ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲಿ, ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರಕಾರ ಜನ ಸಾಮಾನ್ಯರಿಗೆ ಹೊರೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.

ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇಂಧನ ಬೆಲೆ ಏರಿಕೆ, ಗ್ಯಾಸ್, ಪ್ರತಿಯೊಂದು ದಿನಸಿ ಬೆಲೆಗಳ ಏರಿಕೆಯಾಗಿದೆ. ಇದರ ಬಗ್ಗೆ ಮೊದಲು ಬಿಜೆಪಿಯವರು ಪ್ರಶ್ನಿಸಲಿ, ಹಾಲಿನ ದರ ಏರಿಸಿರುವುದರಿಂದ ರೈತರಿಗೆ ಅನುಕೂಲ ಆಗಿದೆ ಎಂದು ತಿರುಗೇಟು ನೀಡಿದರು.

ರಾಜ್ಯ ಬಿಜೆಪಿಯಲ್ಲಿ ಘಟಾನುಘಟಿ ನಾಯಕರಿದ್ದಾರೆ, ರಾಜ್ಯಕ್ಕೆ ನ್ಯಾಯಕೊಡಿಸಲಿ. ನಮ್ಮ ಹಕ್ಕು ನಮ್ಮ ತೆರಿಗೆ ಅಂತ ಹೋರಾಟ ಮಾಡಿದರೂ ಪ್ರಯೋಜವಾಗಲಿಲ್ಲ. ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ರಾಜ್ಯ ಬಿಜೆಪಿ ನಾಯಕರಿಗೆ ಇದ್ಯಾ?. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದರೆ ಪ್ರಯೋಜನವಿಲ್ಲ. ಕೇಂದ್ರದಲ್ಲಿ ಪ್ರಶ್ನಿಸಲಾಗದ ನಾಯಕರು ಈಗ ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಲು ಮುಂದಾಗಿರುವುದು ಹಾಸ್ಯಸ್ಪದ ಎಂದು ಸಚಿವರು ತಿಳಿಸಿದರು.

ಬಿಜೆಪಿ ಸರ್ಕಾರ ಕಡೇ ದಿನಗಳಲ್ಲಿ ಮಾಡಿದ ತಪ್ಪಿನಿಂದಾಗಿ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಕ್ಕ ಸಿಕ್ಕಂತೆ ಟೆಂಡರ್ ಮಾಡಿ, ಯಾವುದೇ ಹಣ ಬಿಡುಗಡೆ ಮಾಡದೇ ಹೋದರು. ಇದೀಗ ಹಣ ಬಿಡುಗಡೆ ಮಾಡಿ ಅಂತ ನಮ್ಮನ್ನು ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಕಷ್ಟಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ಹೊಣೆ ಎಂದು ದೂರಿದರು.

  • ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ
    ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಕಾಂಗ್ರೆಸ್ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿರುವ ಪಕ್ಷ. ಸರ್ವಜನಾಂಗಕ್ಕೂ ಬೇಕಾಗಿರುವ ಪಕ್ಷ ಕಾಂಗ್ರೆಸ್ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
  • ಗೃಹಲಕ್ಷ್ಮಿ ಹಣ ಬಿಡುಗಡೆ
    ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವೂ ಈಗಾಗಲೇ ಫಲಾನುಭವಿಗಳ ಖಾತೆಗೆ ಸಂದಾಯವಾಗಿದೆ. ಜೊತೆಗೆ ಫೆಬ್ರವರಿ ತಿಂಗಳ ಹಣ ಕೂಡ ಈಗಾಗಲೇ ಬಿಡುಗಡೆಯಾಗಿದ್ದು, ಶೀಘ್ರವೇ ಫೆಬ್ರವರಿ ತಿಂಗಳ ಹಣ ಸಂದಾಯವಾಗಲಿದೆ ಎಂದು ಹೇಳಿದರು.
    [15:52, 01/04/2025] Shivu .uncle…..: ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ”(ಪೇಜ್ ೧) . . ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ ಡಾ||ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ಚಿತ್ರ . ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ|ರಾಜಕುಮಾರ್ ಮಗಳು,‌ ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ – ತಂದೆ ಲಕ್ಷ್ಮೀ ಹಾಗೂ ಗೋವಿಂದರಾಜು ಅವರು ಟ್ರೇಲರ್ ಅನಾವರಣ ಮಾಡಿ ಮಗನ ಚಿತ್ರಕ್ಕೆ ಶುಭ ಕೋರಿದರು‌. ಹಿರಿಯ ನಿರ್ಮಾಪಕ ಎಸ್‌‌ ಎ ಚಿನ್ನೇಗೌಡ, ಡಾ||ರಾಜಕುಮಾರ್ ಪುತ್ರಿ ಪೂರ್ಣಿಮಾ ರಾಮಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿ.ಮಾದೇಶ್ ನಿರ್ಮಾಣದ, ಅಶೋಕ್ ಕಡಬ ನಿರ್ದೇಶಿಸಿರುವ ಈ ಚಿತ್ರ ಏಪ್ರಿಲ್ 4 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ನಿಂಬಿಯಾ ಬನದ‌ ಮ್ಯಾಗ” ನಾನು ನಾಯಕನಾಗಿ ಅಭಿನಯಿಸಿರುವ ಮೊದಲ ಚಿತ್ರ ಎಂದು ಮಾತನಾಡಿದ ನಾಯಕ ಷಣ್ಮುಖ,‌ “ನಿಂಬಿಯಾ ಬನದ ಮ್ಯಾಗ” ಚಿತ್ರ ಮಲೆನಾಡಿನ ಮಡಿಲಲ್ಲಿ ನಡೆಯುವ ಸುಂದರ ದೃಶ್ಯ ಕಾವ್ಯ. ಅಮ್ಮ‌ – ಮಗನ ಬಾಂಧವ್ಯದ ಕಥೆ. ಅಶೋಕ್ ಕಡಬ ನಿರ್ದೇಶನ, ವಿ.ಮಾದೇಶ ಅವರ ನಿರ್ಮಾಣ ಹಾಗೂ ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ನನ್ನ ತಂದೆ, ತಾಯಿ, ದೊಡ್ಡಪ್ಪ,‌ ಚಿಕ್ಕಮ್ಮ‌ ಹಾಗೂ ನನ್ನ ಪತ್ನಿ ಸೇರಿದಂತೆ ಅನೇಕ ಕುಟುಂಬ ಸದಸ್ಯರು ಇಂದಿನ ಸಮಾರಂಭಕ್ಕೆ ಆಗಮಿಸಿದ್ದಾರೆ. ನನ್ನ ಸೋದರಮಾವಂದಿರಾದ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್,‌ ಗೀತಾ ಶಿವರಾಜಕುಮಾರ್,‌ ಮಂಗಳಾ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್,‌ ಶ್ರೀಮುರಳಿ ಹೀಗೆ ಕುಟುಂಬ ಸದಸ್ಯರೆಲ್ಲರು ನನ್ನ ಚಿತ್ರಕ್ಕೆ ಶುಭ ಕೋರಿದ್ದಾರೆ. ನಿಮ್ಮೆಲ್ಲರಿಗೂ ಧನ್ಯವಾದ ಎಂದರು.

ಮಲೆನಾಡ ಭಾಗದ ಬೆಂಗಾಡಿಯಲ್ಲಿ ಮೇಲ್ ಬೈಲ್ ದೊಡ್ಡ ಮನೆಯ ನಾಲ್ಕು ವರ್ಷದ ಮಗು ಅಚ್ಚು ( ಅಚ್ಚಣ್ಣ ) ಕಾಣೆಯಾಗಿದೆ. ಆ ತಾಯಿ ಇಂದಲ್ಲ ನಾಳೆ ಮಗು ಬಂದೆ ಬರುತ್ತೆ ಅನ್ನೋ ನಂಬಿಕೆಯಲ್ಲೇ ಕಾಯುತ್ತಿದ್ದಾಳೆ.
ಕಾಲ ಉರುಳಿದಂತೆ 25 ವರ್ಷದ ನಂತರ ಮೇಲ್ ಬೈಲ್ ದೊಡ್ಡಮನೆಯಲ್ಲಿ ಸಂತೋಷದ ವಾತಾವರಣ. ಕಾರಣ ಕಳೆದು ಹೋದ ಮಗ ಅಚ್ಚಣ್ಣ ಬಂದಿದ್ದಾನೆ. ಮುಂದೆ ಏನೂ ಎಂಬುದು ” ನಿಂಬಿಯಾ ಬನಾದ ಮ್ಯಾಗ – ಪೇಜ್ – 1″ ಚಿತ್ರದ ಕಥಾ ಸಾರಾಂಶ . ಭಾಗ 2. ಸಹ ಬರಲಿದೆ. ಷಣ್ಮುಖ ಅವರು ಮೊದಲ ಬಾರಿಗೆ ನಾಯಕನಾಗಿ‌ ನಟಿಸಿದ್ದಾರೆ. ತನುಶ್ರೀ ಈ ಚಿತ್ರದ ನಾಯಕಿ. 25 ವರ್ಷಗಳ ನಂತರ “ಮೇಘಮಾಲೆ” ಖ್ಯಾತಿಯ ಸುನಾದ್ ರಾಜ್ ಸಹ ಇದರಲ್ಲಿ ಅಭಿನಯಿಸಿದ್ದಾರೆ. ಆರೋನ್ ಕಾರ್ತಿಕ್ ಸಂಗೀತ ನೀಡಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಪಳನಿ ಡಿ ಸೇನಾಪತಿ ಹಿನ್ನೆಲೆ ಸಂಗೀತ ನೀಡಿದ್ದಾರೆ. ಸಿದ್ದು ಕಾಂಚನಹಳ್ಳಿ ಛಾಯಾಗ್ರಹಣ, ರವಿತೇಜ ಸಂಕಲನ ಹಾಗೂ ಮದನ್ ಹರಿಣಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಏಪ್ರಿಲ್ 4 ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದರು ನಿರ್ದೇಶಕ ಅಶೋಕ್ ಕಡಬ.‌

ನಿರ್ಮಾಪಕ ವಿ.ಮಾದೇಶ್, ನಾಯಕಿ ತನುಶ್ರೀ, ಚಿತ್ರದಲ್ಲಿ ನಟಿಸಿರುವ “ಮೇಘಮಾಲೆ” ಖ್ಯಾತಿಯ ಸುನಾದ್‌ರಾಜ್, ಸಂದೀಪ್ ಮಲಾನಿ ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

Tags: Basanagouda patil Yatnalbasanagouda patil yatnal latest newsbasanagouda patil yatnal speechBasanagowda Patil Yatnalbasanagowda patil yatnal newsbasanagowda patil yatnal today newsBasangouda Patil Yatnalbasangouda patil yatnal bjpbasangouda patil yatnal newsbasangouda patil yatnal speechbjp mla basangouda patil yatnalcongressLakshmi hebbalkarlakshmi hebbalkar vs basangouda patil yatnalYatnal
Previous Post

ಟ್ರೇಲರ್ ನಲ್ಲಿ ಮೋಡಿ ಮಾಡಿದ “ನಿಂಬಿಯಾ ಬನಾದ ಮ್ಯಾಗ ಚಿತ್ರ ..

Next Post

ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ..

Related Posts

Top Story

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

by ಪ್ರತಿಧ್ವನಿ
July 18, 2025
0

“ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ....

Read moreDetails

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

July 18, 2025

Santhosh Lad: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ಕುರಿತು ಅರಿವು ಮೂಡಿಸಿದ ಸಚಿವ ಸಂತೋಷ್‌ ಲಾಡ್..‌

July 18, 2025

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

July 18, 2025

Delhi High Court: ಕೋವಿಡ್-19ರಲ್ಲಿ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈ ಕೋರ್ಟ್..

July 18, 2025
Next Post

ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಲು ಕೇಂದ್ರ ಸರಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ..

Recent News

Top Story

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

by ಪ್ರತಿಧ್ವನಿ
July 18, 2025
Top Story

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 18, 2025
Top Story

Santhosh Lad: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ಕುರಿತು ಅರಿವು ಮೂಡಿಸಿದ ಸಚಿವ ಸಂತೋಷ್‌ ಲಾಡ್..‌

by ಪ್ರತಿಧ್ವನಿ
July 18, 2025
Top Story

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

by ಪ್ರತಿಧ್ವನಿ
July 18, 2025
Top Story

Delhi High Court: ಕೋವಿಡ್-19ರಲ್ಲಿ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈ ಕೋರ್ಟ್..

by ಪ್ರತಿಧ್ವನಿ
July 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

July 18, 2025

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

July 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada