ದಾವಣಗೆರೆ: ಮುಖ್ಯಮಂತ್ರಿಗಳೇ ನೀವು ಚುನಾವಣಾ ರಾಜಕಾರಣವನ್ನು ನಂತರ ಮಾಡಿಕೊಳ್ಳಿ. ಸದ್ಯಕ್ಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ, ಬರ ಹೊಡೆತದಿಂದ ತತ್ತರಿಸಿರುವ ರೈತರಿಗೆ ಮೊದಲು ಪರಿಹಾರ ನೀಡುವ ಕೆಲಸ ಮಾಡಿ ಎಂದ ಬಿಜೆಪಿ(BJP Karnataka) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ(Vijayendra) ಆಗ್ರಹಿಸಿದರು.
ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎನ್ನುವಾಗ ಕೇಂದ್ರದ ಕಡೆಗೆ ಸಿದ್ದರಾಮಯ್ಯ ಕೈ ತೋರಿಸುವುದಿಲ್ಲ. ಬರದ ಬಗ್ಗೆ ಸಂಕಷ್ಟಕ್ಕೆ ತುತ್ತಾದ ರೈತರಿಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಕೇಳಿದಾಗ ಮಾತ್ರ ತಪ್ಪದೇ ಕೇಂದ್ರದತ್ತ ಬೊಟ್ಟು ಮಾಡುತ್ತಾರೆ ಎಂದು ಟೀಕಿಸಿದರು. ದಾವಣಗೆರೆ ಜಿಲ್ಲೆಯ ಜಮ್ಮಾಪುರ ಗ್ರಾಮದ ರೈತ ಕುಟುಂಬ ಮರುಳಪ್ಪ, ಸಿದ್ದಮ್ಮನವರ ಜಮೀನಿಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಬೂಟಾಟಿಕೆ ಮಾಡಲು ನಾನು ಬರ ಅಧ್ಯಯನ ಪ್ರವಾಸ ಕೈಗೊಂಡಿಲ್ಲ. ರೈತರ ಬಗ್ಗೆ ಕಾಳಜಿಯಿಂದ ಬರ ಅಧ್ಯಯನ ಮಾಡುತ್ತಿದ್ದೇನೆ. ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಸರ್ಕಾರದ ಗಮನ ಸೆಳೆದು, ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇನೆ. ರೈತರು ಅಂದರೆ ಲಿಂಗಾಯತರಷ್ಟೇ ಅಲ್ಲ. ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲ ಜಾತಿ, ಧರ್ಮಿಯರೂ ಇದ್ದಾರೆ. ದಲಿತ ಕುಟುಂಬದ ರೈತರ ಜಮೀನಿಗೆ ಇಲ್ಲಿ ಭೇಟಿ ನೀಡಿದ್ದೇನೆ. ಬಡ ರೈತ ದಂಪತಿಗಳ ಕಣ್ಣೀರು ನಮ್ಮ ಮನಸ್ಸಿಗೂ ನೋವುಂಟು ಮಾಡುತ್ತಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಓಲೈಕೆ ಶುರು ಮಾಡಿದ್ದಾರೆ. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಅನುದಾನ ನೀಡುವ ಘೋಷಣೆ ಮಾಡಿದ್ದಾರೆ. ಹೀಗೆ ಸಾವಿರಾರು ಕೋಟಿ ಅನುದಾನ ನೀಡುತ್ತಿರುವ ಸಿದ್ದರಾಮಯ್ಯ ರೈತರ ಬಗ್ಗೆಯೂ ಗಮನ ಹರಿಸಲಿ, ಅನ್ನದಾತರ ಸಂಕಷ್ಟಕ್ಕೂ ಸ್ಪಂದಿಸಲಿ ಎಂದು ಒತ್ತಾಯಿಸಿದರು.
ಲಕ್ಷಾಂತರ ರೈತ ಕುಟುಂಬಗಳು ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ಆ ರೈತರ ಬಗ್ಗೆಯೂ ಗಮನ ಹರಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ್ಯತೆ ಕೇವಲ ಅಲ್ಪಸಂಖ್ಯಾತರ ಕಡೆಗೆ ಮಾತ್ರ ಇದೆ. ಹಿಂದುಗಳ ಬಗ್ಗೆ ಯಾವುದೇ ಆದ್ಯತೆ ನೀಡುತ್ತಿಲ್ಲ. ಹಿಂದುಗಳೆಂದರೆ ಕೇವಲ ಲಿಂಗಾಯತ, ಬ್ರಾಹ್ಮಣರಷ್ಟೇ ಅಲ್ಲ, ಎಲ್ಲಾ ಪರಿಶಿಷ್ಟರು, ಹಿಂದುಳಿದವರೂ ಸೇರುತ್ತಾರೆ ಎಂದರು.
Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್
ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...
Read moreDetails