• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: ಅಥಣಿ ಪಟ್ಟಣ ಸಂಪೂರ್ಣ ಬಂದ್

ಪ್ರತಿಧ್ವನಿ by ಪ್ರತಿಧ್ವನಿ
November 4, 2025
in Top Story, ರಾಜಕೀಯ
0
ಬೆಳಗಾವಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಹೋರಾಟ: ಅಥಣಿ ಪಟ್ಟಣ ಸಂಪೂರ್ಣ ಬಂದ್
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ಕಬ್ಬಿನ ಬೆಳೆಗೆ ನಿಗದಿತ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲಾ ರೈತರು ಆರಂಭಿಸಿದ್ದ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಗುರ್ಲಾಪುರದಲ್ಲಿ ಆರಂಭವಾದ ಈ ಹೋರಾಟ ಇದೀಗ ಬೆಳಗಾವಿ ಜಿಲ್ಲೆಯಾದ್ಯಂತ ಹಬ್ಬಿದ್ದು, ವಿಜಯಪುರ, ಸಂಕೇಶ್ವರ ಜತ್ತ ಜಾಂಬೋಟಿ ಹೆದ್ದಾರಿ ಬಂದ್ ಮಾಡಿ ರೈತರು ಆಕ್ರೋಶ ಹೊರಹಾಕಿದ್ದಾರೆ.

 

ಜಿಲ್ಲಾ ರೈತರ ಹೋರಾಟಕ್ಕೆ ಅಥಣಿ ಜನತೆ ಬೆಂಬಲ ನೀಡಿದ್ದಾರೆ. ಇಂದು ಅಥಣಿ ಪಟ್ಟಣ ಸಂಪೂರ್ಣ ಬಂದ್ ಆಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಲು, ಹಣ್ಣು, ಆಸ್ಪತ್ರೆ, ಮೆಡಿಕಲ್, ತರಕಾರಿ ಹೊರತುಪಡಿಸಿ ಇನ್ನುಳಿದ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಬಂದ್‌ ಮಾಡುವ ಮೂಲಕ ಅಥಣಿ ಜನರು ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.

Satish Jarkiholi on Siddu Meeting: ಸಿದ್ದರಾಮಯ್ಯ, ಪರಂ, ಮಹದೇವಪ್ಪ ರಹಸ್ಯ ಮೀಟಿಂಗ್ ಏನು? #pratidhvani

ಇನ್ನು ಬೆಳಗಾವಿಯ ರೈತರ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಂಬಲ ಸೂಚಿಸಿದ್ದು, ರೈತರ ಪ್ರತಿಭಟನೆಗೆ ರಾಜ್ಯ ಸರ್ಕಾರ ಸ್ಪಂದನೆ ನೀಡದೇ ಇದ್ದಾಗ, ವಿರೋಧ ಪಕ್ಷವಾಗಿ ನಾವು ಬೆಂಬಲ ನೀಡಬೇಕಿದೆ ಎಂದಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರ್ಲಾಪುರದಲ್ಲಿ ಕೆಲ ದಿನಗಳಿಂದ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ನ್ಯಾಯಯುತವಾಗಿರುವ ಬೇಡಿಕೆಗಳನ್ನು ರಾಜ್ಯ ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸುವ ಆಗ್ರಹ ಇದೆ. ವಿರೋಧ ಪಕ್ಷವಾಗಿ ನಾವು ರೈತರಿಗೆ ಬೆಂಬಲ ನೀಡಬೇಕಿದೆ. ಹಾಗಾಗಿ ನಾನು ಸಹ ಪಕ್ಷದ ಮುಖಂಡರ ಜೊತೆಗೆ ಚರ್ಚೆ ಮಾಡಿ, ರೈತರ ಪ್ರತಿಭಟನೆಗೆ ಬೆಂಬಲ ಕೊಡಲು ಬಂದಿದ್ದೇನೆ. ಅತೀವೃಷ್ಟಿ ಸಂದರ್ಭದಲ್ಲಿ ಸಹ ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾನು ಪ್ರವಾಸ ಮಾಡಿದ್ದೆ ಎಂದರು.

ಇನ್ನು ಭೀಕರ ಮಳೆಯಿಂದ ತೊಂದರೆಗಿಡಾದಾಗ ಕೂಡ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ ಸಚಿವರು, ಕೃಷಿ ಸಚಿವರು ಉತ್ತರ ಕರ್ನಾಟಕ ಪ್ರವಾಸ ಮಾಡಲಿಲ್ಲ. ರೈತರು ಇಂದು ಮತ್ತೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೂ ರಾಜ್ಯ ಸರ್ಕಾರ ಕಿಂಚಿತ್ತೂ ತಲೆ ಕೆಡಸಿಕೊಳ್ಳದೇ ಇದ್ದಾಗ ನಾವು ಹೋರಾಟಕ್ಕೆ ಬಂದಿದ್ದೇವೆ. ಸಂಕಷ್ಟದಲ್ಲಿರುವ ರೈತರ ಪರಿಸ್ಥಿತಿ ಕೇಳಲು ರಾಜ್ಯ ಸರ್ಕಾರ ಮುಂದೆ ಬರುತ್ತಿಲ್ಲ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು.

CM Siddaramaiah and GT Devegowda : ದ್ವೇಷ ಮರೆತು ಒಂದಾದ ಜಿಟಿ ದೇವೇಗೌಡ, ಸಿದ್ದರಾಮಯ್ಯ...! #pratidhvani
Tags: BelagaviBJPcongressFarmersfarmersprotestKarnatakaprotest
Previous Post

ಬಿಹಾರ ವಿಧಾನಸಭೆ ಚುನಾವಣೆ: ಮಹಿಳಾ ಮತದಾರರಿಗೆ ಭರ್ಜರಿ ಗ್ಯಾರಂಟಿ ಘೋಷಿಸಿದ ಆರ್‌ಜೆಡಿ

Next Post

ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ

ಕಾಂಗ್ರೆಸ್ ಮಾಜಿ ಸಚಿವ ಹೆಚ್‌.ವೈ ಮೇಟಿ ನಿಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada