• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ: ಬಸವರಾಜ ಬೊಮ್ಮಾಯಿ

Any Mind by Any Mind
September 28, 2023
in Top Story, ಕರ್ನಾಟಕ
0
ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ: ಬಸವರಾಜ ಬೊಮ್ಮಾಯಿ
Share on WhatsAppShare on FacebookShare on Telegram

ಹುಬ್ಬಳ್ಳಿ: ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ಹೊರಡಿಸಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯುಎಂಎ) ಈ ಹಿಂದೆ ತಮಿಳುನಾಡಿಗೆ ಪ್ರತಿನಿತ್ಯ 10,000 ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚಿಸಿದಾಗಲೇ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪರಿಣಾಮಕಾರಿಯಾಗಿ ವಾದ ಮಂಡಿಸಿದ್ದರೆ, ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಹೇಳಿದರು.

ADVERTISEMENT

ಈಗಾಗಲೇ ತಮಿಳುನಾಡಿಗೆ ಹೆಚ್ಚಿನ ನೀರನ್ನು ಹರಿಸಲಾಗಿದ್ದು, ಕಾವೇರಿ ಜಲವಿವಾದ ನ್ಯಾಯಮಂಡಳಿಯ ಆದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು ಅವರು ಹೇಳಿದರು.

ಕುಡಿಯುವ ನೀರಿಗಾಗಿ ಸರ್ಕಾರ ಇತ್ತ ಗಮನಹರಿಸಬೇಕು ಎಂಬ ಕೂಗು ಎದ್ದಿದ್ದು, ಉತ್ತರ ಕರ್ನಾಟಕದ ಬಹುತೇಕ ಪ್ರದೇಶಗಳು ಬರದಿಂದ ತತ್ತರಿಸಿವೆ. ಮಳೆಯ ಅಭಾವದಿಂದ ಖಾರಿಫ್ ಬೆಳೆಯನ್ನು ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ ಎಂದು ದೂರಿದರು. ‘ಇಲ್ಲಿಯವರೆಗೆ ಸರ್ಕಾರ ಅವರಿಗೆ ಪರಿಹಾರ ವಿತರಿಸಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರವಾಹ ಬಂದಾಗ ರೈತರಿಗೆ ಎರಡು ಪಟ್ಟು ಪರಿಹಾರ ನೀಡಿದ್ದೇವೆ. ಬಹುತೇಕ‌ ಸಂದರ್ಭಗಳಲ್ಲಿ‌ ರಾಜ್ಯದ ರೈತರಿಗೆ ನಾವು ಪರಿಹಾರ ಒದಗಿಸಿದ್ದೇವೆ. ಆದರೆ, ರಾಜ್ಯ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ. ಕಾವೇರಿ ನದಿ ಅಷ್ಟೇ ಅಲ್ಲ ಕೃಷ್ಣೆಯ ಹಿತರಕ್ಷಣೆಗೂ ಸರ್ಕಾರ ಮುಂದಾಗಬೇಕು. ಕೃಷ್ಣಾ ನೀರಿನ ವಿಚಾರದಲ್ಲಿ ಬಿಜೆಪಿ ಸ್ಪಷ್ಟ ನಿಲುವು ಹೊಂದಿದೆ’ ಎಂದು ಬೊಮ್ಮಾಯಿ ಹೇಳಿದರು.

Tags: Basavaraj BommaiBJPcauvery protestCauvery waterHubballi
Previous Post

ಮುಂದಿನ ತಿಂಗಳಿಂದ ಅನ್ನಭಾಗ್ಯದಡಿ 10 ಕೆಜಿ ಅಕ್ಕಿ ವಿತರಣೆ: ಸಚಿವ ಕೆ.ಎಚ್ ಮುನಿಯಪ್ಪ

Next Post

ಕಾವೇರಿ ಜಲವಿವಾದದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಕಾವೇರಿ ಜಲವಿವಾದದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ

ಕಾವೇರಿ ಜಲವಿವಾದದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!