ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಅಭೂತ ಪೂರ್ವ ಗೆಲುವು ಸಾಧಿಸಿದ್ದು, ಬಿಜೆಪಿ ಹೆಚ್ಚಿನ ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಬಿಹಾರದ ಭರ್ಜರಿ ಗೆಲುವಿನ ಬೆನ್ನಲ್ಲೇ ಇದೀ ಬಿಜೆಪಿ ಹೈಕಮಾಂಡ್ ಬಿಹಾರದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಕಠಿಣ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಬಿಹಾರದ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವ ಆರ್.ಕೆ. ಸಿಂಗ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅಮಾನತುಗೊಂಡ ನಂತರ ಮಾಜಿ ಕೇಂದ್ರ ಸಚಿವ ಆರ್.ಕೆ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಆಂತರಿಕ ವಿಚಾರದ ಬಗ್ಗೆ ಧ್ವನಿ ಎತ್ತಿ, ಪಕ್ಷದ ವಿರೋಧ ಮಾತನಾಡಿದರು ಎನ್ನುವ ಕಾರಣಕ್ಕೆ ಆರ್.ಕೆ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ ಎನ್ನಲಾಗಿದೆ. ಹಿರಿಯ ರಾಜಕಾರಣಿ ಆರ್.ಕೆ. ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಈ ಹಿಂದೆ ವಿದ್ಯುತ್ ಸಚಿವರಾಗಿ ಸೇವೆ ಸಲ್ಲಿಸಿದ್ದರು.












