• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ

ಫೈಝ್ by ಫೈಝ್
September 10, 2022
in ದೇಶ, ರಾಜಕೀಯ
0
ಗುಜರಾತಿನಲ್ಲಿ ಹೆಜ್ಜೆ ಊರುತ್ತಿರುವ ಎಎಪಿ; ಮೇಧಾ ಪಾಟ್ಕರ್‌ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ
Share on WhatsAppShare on FacebookShare on Telegram

ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ ಏಳು ವರ್ಷಗಳ ನಂತರ, ಸಾಮಾಜಿಕ ಕಾರ್ಯಕರ್ತೆ ಮತ್ತು ನರ್ಮದಾ ಬಚಾವೋ ಆಂದೋಲನದ (ಎನ್‌ಬಿಎ) ಸಂಸ್ಥಾಪಕಿ ಮೇಧಾ ಪಾಟ್ಕರ್ ಅವರ ಆಪ್ ಜೊತೆಗಿನ ಸಂಬಂಧವು ಚುನಾವಣಾ ಗುಜರಾತ್‌ನಲ್ಲಿ ತೀವ್ರ ಪೈಪೋಟಿಯ ರಾಜಕೀಯ ವಿಷಯವಾಗಿದೆ.

ADVERTISEMENT

ಭಾರತೀಯ ಜನತಾ ಪಕ್ಷ (ಬಿಜೆಪಿ) ಪಾಟ್ಕರ್ ಮೇಲೆ ಗುರಿಯಿಟ್ಟಿದ್ದರೂ, ಅದರ ನಿಜವಾದ ಗುರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಇದೆ. ಈಗಾಗಲೇ ಪಂಜಾಬಿನಲ್ಲಿ ಸರ್ಕಾರ ರಚಿಸಿರುವ ಎಎಪಿ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಹೆಜ್ಜೆಗುರುತುಗಳನ್ನು ಊರಲು ಕೆಲಸ ಮಾಡುತ್ತಿದೆ. ಇದು ಬಿಜೆಪಿ ಆತಂಕಕ್ಕೆ ಕಾರಣವಾಗಿದೆ.

ಪಾಟ್ಕರ್ ಅವರು ಸರ್ದಾರ್ ಸರೋವರ ಅಣೆಕಟ್ಟಿನ ವಿರುದ್ಧ ನಡೆಸಿದ ಚಳವಳಿಯನ್ನು ಖಂಡಿಸಿ, ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಆಮ್ ಆದ್ಮಿ ಪಕ್ಷದ ಮೇಲೆ ದಾಳಿ ನಡೆಸುತ್ತಿದೆ, ಎಎಪಿ ಪಾಟ್ಕರ್‌ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬಹುದು ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಪಾಟ್ಕರ್‌ ವಿರುದ್ಧ ಬಿಜೆಪಿ ದಾಳಿ ಮಾಡುತ್ತಿದೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಪ್ರಾರಂಭಿಸಿದ ಈ ದಾಳಿಯು ಕಳೆದ ಒಂದು ವಾರದಲ್ಲಿ ಬಿಜೆಪಿ ವಕ್ತಾರರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಉನ್ನತ ನಾಯಕರಿಂದಲೂ ಮುಂದುವರೆದಿದೆ.

ಆದರೆ  ಮೇಧಾ ಪಾಟ್ಕರ್ ಎಎಪಿ  ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಎಎಪಿಯು ಕೂಡಾ ಈ ಊಹಾಪೋಹಗಳನ್ನು ಅಲ್ಲಗೆಳೆದಿದೆ ಎಂದು ದಿಪ್ರಿಂಟ್‌ ವರದಿ ಮಾಡಿದೆ.

 “ಗುಜರಾತ್‌ನಲ್ಲಿ ಆಪ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮೇಧಾ ಪಾಟ್ಕರ್ ಅವರನ್ನು ಕಣಕ್ಕಿಳಿಸುತ್ತಿದೆ ಎಂದು ಹೇಳುವುದು ಸೋನಿಯಾ ಗಾಂಧಿಯನ್ನು ಬಿಜೆಪಿ ತನ್ನ ಪ್ರಧಾನಿ ಮುಖ ಎಂದು ಬಿಂಬಿಸುತ್ತಿದೆ ಎಂದು ಹೇಳುವಷ್ಟೇ ಬಾಲಿಷವಾದುದು” ಎಂದು ಎಎಪಿ ಜಂಟಿ ಪ್ರಧಾನ ಕಾರ್ಯದರ್ಶಿ ಇಸುದನ್ ಗಧ್ವಿ ಹೇಳಿದ್ದಾರೆ.

ಕಾಂಗ್ರೆಸ್ ಇನ್ನು ಮುಂದೆ ತನ್ನೊಂದಿಗೆ ಸ್ಪರ್ಧಿಸುವ ಸ್ಥಿತಿಯಲ್ಲಿಲ್ಲ ಮತ್ತು ಎಎಪಿ ತನ್ನ ಪ್ರತಿಸ್ಪರ್ಧಿಯಾಗಿ ಮುಂದೆ ಬರುತ್ತಿದೆ ಎಂದು ಎಂದು ಬಿಜೆಪಿ ಗ್ರಹಿಸುತ್ತಿದೆ ಎಂದು ಇನ್ನೊಬ್ಬ ಎಎಪಿ ನಾಯಕ ಹೇಳಿದ್ದಾರೆ. ಈ ಕಾರಣದಿಂದಲೇ ಅವರು (ಬಿಜೆಪಿ ನಾಯಕರು) ವದಂತಿಗಳನ್ನು ಸುದ್ದಿಯಾಗಿ ಪರಿವರ್ತಿಸುತ್ತಿದ್ದಾರೆ ಮತ್ತು ಗೃಹ ಸಚಿವರೂ ಈ ಬಗ್ಗೆ ಪ್ರತಿಕ್ರಿಯಿಸುತ್ತಿದ್ದಾರೆ. ಇದು ತುಂಬಾ ತಮಾಷೆಯಾಗಿದೆ ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ಆಮ್ ಆದ್ಮಿ ಪಕ್ಷವು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಾಟ್ಕರ್ ಅವರನ್ನು ಕಣಕ್ಕಿಳಿಸುವ ಯಾವುದೇ ಯೋಜನೆಯನ್ನು ಹೊಂದಿಲ್ಲದಿದ್ದರೆ, ಅವರು ಅಂತಹ ಹೇಳಿಕೆಗಳನ್ನು ಸಾರ್ವಜನಿಕವಾಗಿ ನಿರಾಕರಿಸಬೇಕು ಎಂದು ಗುಜರಾತ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭಾರ್ಗವ ಭಟ್ ThePrint ಗೆ ತಿಳಿಸಿದ್ದಾರೆ.

ಆದರೆ ಅಂತಹ ಯಾವುದೇ ನಿರಾಕರಣೆ ಇಲ್ಲ ಎಂದು ಅವರು ಹೇಳಿದರು. ಕಳೆದ ಎರಡು ದಶಕಗಳಲ್ಲಿ ಪಾಟ್ಕರ್ ನರ್ಮದೆಯ ವಿಷಯವನ್ನು ಎತ್ತುವ ಮೂಲಕ ಗುಜರಾತ್‌ಗೆ ಹೇಗೆ ದ್ರೋಹ ಬಗೆದರು ಎಂಬುದು ಗುಜರಾತಿಗರಿಗೆ ಗೊತ್ತು. ಕಚ್‌ನ ಬರಪೀಡಿತ ಪ್ರದೇಶಗಳಲ್ಲಿ ನೀರಿನ ಲಭ್ಯತೆಯನ್ನು ಸಾಧ್ಯವಾಗಿಸಿದವರು ಪ್ರಧಾನಿ. ಮೇಧಾ ಪಾಟ್ಕರ್ ಅವರನ್ನು ಗುಜರಾತ್ ಎಂದಿಗೂ ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.

 “AAP ಬುಡಕಟ್ಟು ಪ್ರದೇಶಗಳಲ್ಲಿ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದೆ. ಆದಿವಾಸಿ ಪಕ್ಷದೊಂದಿಗೆ (ಭಾರತೀಯ ಬುಡಕಟ್ಟು ಪಕ್ಷ) ಮೈತ್ರಿ ಮಾಡಿಕೊಂಡಿರುವುದಕ್ಕೆ ಇದೇ ಕಾರಣ; ಪಾಟ್ಕರ್ ಕೆಲಸ ಮಾಡಿದ ಬುಡಕಟ್ಟು ಪ್ರದೇಶಗಳಿಗೆ ಕಾಲಿಡಲು ಅವರು ಯೋಚಿಸಬಹುದು, ಆದರೆ ಅವರು ಪಾಟ್ಕರ್ ಅವರ ಅಭ್ಯರ್ಥಿಯನ್ನು ಘೋಷಿಸಿದರೆ, ಅದು ಹಿನ್ನಡೆಯಾಗುತ್ತದೆ.” ಎಂದು ಹೆಸರು ಹೇಳಲಿಚ್ಛಿಸದ ಗುಜರಾತ್ ಬಿಜೆಪಿಯ ಮತ್ತೊಬ್ಬ ನಾಯಕ ThePrint ಗೆ ಹೇಳಿದರು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಪ್ರಧಾನಿ ಮೋದಿ ಧರಿಸುವ ಸೂಟು ಬೂಟಿನ ಬೆಲೆ ಕಾಣುದಿಲ್ಲವೇ : ದಿನೇಶ್ ಗುಂಡೂರಾವ್

Next Post

ಲೇಖಕ, ಚಿಂತಕ ಪ್ರೊ ಬಿ ಗಂಗಾಧರಮೂರ್ತಿ ಇನ್ನಿಲ್ಲ

Related Posts

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....

Read moreDetails
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

October 23, 2025
Next Post
ಲೇಖಕ, ಚಿಂತಕ ಪ್ರೊ ಬಿ ಗಂಗಾಧರಮೂರ್ತಿ ಇನ್ನಿಲ್ಲ

ಲೇಖಕ, ಚಿಂತಕ ಪ್ರೊ ಬಿ ಗಂಗಾಧರಮೂರ್ತಿ ಇನ್ನಿಲ್ಲ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!