ಬಿಜೆಪಿಯಲ್ಲಿ ಹಣ ಪಡೆದು ಟಿಕೆಟ್ ನೀಡುವ ಸಂಸ್ಕೃತಿ ಇರುವುದು ಸ್ಪಷ್ಟವಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಹೇಳಿದರು.
ಚಿತ್ರದುರ್ಗದಲ್ಲಿ ಇಂದು ಮಾತನಾಡಿದ ಅವರು, ಹಗರಿಬೊಮ್ಮನಹಳ್ಳಿಯಲ್ಲೂ ಟಿಕೆಟ್‌ಗಾಗಿ ಹಣ ಪಡೆದ ಆರೋಪವಿದೆ. ಬಿಜೆಪಿಯವರಿಗೆ ದುಡ್ಡು ಬಿಟ್ಟರೆ ಬೇರೆನೂ ಗೊತ್ತಿಲ್ಲ. ಸಾಮಾಜಿಕ ನ್ಯಾಯದ ಬಗ್ಗೆ ಅವರಿಗೆ ಅರಿವಿಲ್ಲ. ನಮ್ಮದು ಅಲ್ಪಾವಧಿ ಸರ್ಕಾರ ಎನ್ನುತ್ತಿರುವ ಮಾಜಿ ಸಚಿವರಾದ ಗೋವಿಂದ ಕಾರಜೋಳ ಹಾಗೂ ಈಶ್ವರಪ್ಪ ಭ್ರಮೆಯಲ್ಲಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳನ್ನು ನೋಡಿ ಹೊಟ್ಟೆ ಉರಿಯಿಂದ ಈತರ ಮಾತನಾಡುತ್ತಿದ್ದಾರೆ. ಸಿಎಂ ಡಿಸಿಎಂ ಸೂಚನೆಯಂತೆ ಎಲ್ಲಾ ಶಾಸಕರ ಮನವಿಯನ್ನು ಆಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.