ಹಾಲು ದರ ಹೆಚ್ಚಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರೋಧ
ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ @INCKarnataka ಸರ್ಕಾರ
ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ.
ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ.
ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ.