ನವದೆಹಲಿ: ಸೆಬಿ ಅಧ್ಯಕ್ಷೆ(SEBI President) ಮಾಧಾಬಿ ಬುಚ್ ವಿರುದ್ಧ ಯುಎಸ್ ಶಾರ್ಟ್ ಸೆಲ್ಲರ್ ಹಿಂಡೆನ್ಬರ್ಗ್ ರಿಸರ್ಚ್ ಮಾಡಿರುವ ಹೊಸ ವರದಿ(Hindenburg Report) ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿಕೆ ನೀಡಿರುವ ಬೆನ್ನಲ್ಲೇ ಬಿಜೆಪಿ ಕಿಡಿ ಕಾರಿದೆ.
ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.ಪ್ರತಿಪಕ್ಷದ ನಾಯಕ ಈಗ ಬಹಿರಂಗವಾಗಿ ಭಾರತೀಯ ಷೇರು ಮಾರುಕಟ್ಟೆಯ ನೈಜತೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತಿದ್ದಾರೆ. ನಮ್ಮ ಆರ್ಥಿಕತೆಯ ಮೇಲಿನ ವಿಶ್ವಾಸವನ್ನು ಹಾಳುಮಾಡುವ ಈ ಅಬ್ಬರದ ಪ್ರಯತ್ನವು ರಾಹುಲ್ ಗಾಂಧಿಯವರ ನಿಜವಾದ ಉದ್ದೇಶವನ್ನು ಬಹಿರಂಗಪಡಿಸುತ್ತದೆ, ಇದು ಭಾರತದ ವಿನಾಶವಲ್ಲದೆ ಬೇರೇನೂ ಅಲ್ಲ ಎಂದು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಪೋಸ್ಟ್ ಮಾಡಿದ್ದಾರೆ.
While there are a bunch of “impacted parties” who would not like Madhavi Puri Buch succeeding in her role and in her mission, this sentiment is in fact much broader.
— Amit Malviya (@amitmalviya) August 11, 2024
India is today steaming towards becoming the third largest economy in the world. India’s rise has been confident,… pic.twitter.com/OakI1MLuLm
ಹಿಂಡೆನ್ಬರ್ಗ್ ಮಾಡಿರುವ ಆರೋಪಗಳಿಗೆ ಯಾವುದೇ ಆಧಾರಗಳಿಲ್ಲ ಎಂದು ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯೇ ಹೇಳಿದೆ. ಜನವರಿ 3, 2024 ರಂದು, ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, ಸೆಬಿಯಿಂದ ಯಾವುದೇ ಉದ್ದೇಶಪೂರ್ವಕ ಉಲ್ಲಂಘನೆ ಮಾಡಿಲ್ಲ ಎಂದು ಮಾಳವಿಯಾ ಹೇಳಿದ್ದಾರೆ..
#WATCH | Lok Sabha LoP and Congress MP Rahul Gandhi says, "…It is my duty as Leader of Opposition to bring to your notice that there is a significant risk in the Indian stock market because the institutions that govern the stock market is compromised…A very serious allegation… pic.twitter.com/YcqKwkaNXI
— ANI (@ANI) August 11, 2024
ಸೆಬಿ ಅಧ್ಯಕ್ಷರು ಇನ್ನೂ ಏಕೆ ರಾಜೀನಾಮೆ ನೀಡಿಲ್ಲ ಎಂದು ದೇಶಾದ್ಯಂತದ ಹೂಡಿಕೆದಾರರು ತಿಳಿಯಲು ಬಯಸುತ್ತಾರೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. “ದೇಶಾದ್ಯಂತದ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ ಯಾರು ಜವಾಬ್ದಾರರು.
ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷರು ಅಥವಾ ಗೌತಮ್ ಅದಾನಿಯೇ? ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂಪ್ರೇರಿತವಾಗಿ ಪರಿಶೀಲಿಸುತ್ತದೆಯೇ ಎಂದು ರಾಹುಲ್ ಹೇಳಿದ್ದಾರೆ.”ಜೆಪಿಸಿ ತನಿಖೆಗೆ ಪ್ರಧಾನಿ ಮೋದಿ ಏಕೆ ಹೆದರುತ್ತಾರೆ ಎಂಬುದು ಸ್ಪಷ್ಟವಾಗಿದೆ. ಅದು ಸತ್ಯ ಬಹಿರಂಗಪಡಿಸಬಹುದು ಎಂಬುದು ಸ್ಪಷ್ಟವಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.