• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಷೇರು ಮಾರುಕಟ್ಟೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿಗೆ ಬಿಜೆಪಿ ಟಾಂಗ್‌

ಪ್ರತಿಧ್ವನಿ by ಪ್ರತಿಧ್ವನಿ
August 12, 2024
in Top Story, ಇತರೆ / Others
0
Share on WhatsAppShare on FacebookShare on Telegram

ನವದೆಹಲಿ: ಸೆಬಿ ಅಧ್ಯಕ್ಷೆ(SEBI President) ಮಾಧಾಬಿ ಬುಚ್ ವಿರುದ್ಧ ಯುಎಸ್ ಶಾರ್ಟ್ ಸೆಲ್ಲರ್ ಹಿಂಡೆನ್​ಬರ್ಗ್​​ ರಿಸರ್ಚ್ ಮಾಡಿರುವ ಹೊಸ ವರದಿ(Hindenburg Report) ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿಕೆ ನೀಡಿರುವ ಬೆನ್ನಲ್ಲೇ ಬಿಜೆಪಿ ಕಿಡಿ ಕಾರಿದೆ.

ADVERTISEMENT

ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.ಪ್ರತಿಪಕ್ಷದ ನಾಯಕ ಈಗ ಬಹಿರಂಗವಾಗಿ ಭಾರತೀಯ ಷೇರು ಮಾರುಕಟ್ಟೆಯ ನೈಜತೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತಿದ್ದಾರೆ. ನಮ್ಮ ಆರ್ಥಿಕತೆಯ ಮೇಲಿನ ವಿಶ್ವಾಸವನ್ನು ಹಾಳುಮಾಡುವ ಈ ಅಬ್ಬರದ ಪ್ರಯತ್ನವು ರಾಹುಲ್ ಗಾಂಧಿಯವರ ನಿಜವಾದ ಉದ್ದೇಶವನ್ನು ಬಹಿರಂಗಪಡಿಸುತ್ತದೆ, ಇದು ಭಾರತದ ವಿನಾಶವಲ್ಲದೆ ಬೇರೇನೂ ಅಲ್ಲ ಎಂದು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಪೋಸ್ಟ್ ಮಾಡಿದ್ದಾರೆ.

While there are a bunch of “impacted parties” who would not like Madhavi Puri Buch succeeding in her role and in her mission, this sentiment is in fact much broader.

India is today steaming towards becoming the third largest economy in the world. India’s rise has been confident,… pic.twitter.com/OakI1MLuLm

— Amit Malviya (@amitmalviya) August 11, 2024

ಹಿಂಡೆನ್‌ಬರ್ಗ್ ಮಾಡಿರುವ ಆರೋಪಗಳಿಗೆ ಯಾವುದೇ ಆಧಾರಗಳಿಲ್ಲ ಎಂದು ಸುಪ್ರೀಂ ಕೋರ್ಟ್ ನೇಮಿಸಿದ ತಜ್ಞರ ಸಮಿತಿಯೇ ಹೇಳಿದೆ. ಜನವರಿ 3, 2024 ರಂದು, ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್, ಸೆಬಿಯಿಂದ ಯಾವುದೇ ಉದ್ದೇಶಪೂರ್ವಕ ಉಲ್ಲಂಘನೆ ಮಾಡಿಲ್ಲ ಎಂದು ಮಾಳವಿಯಾ ಹೇಳಿದ್ದಾರೆ..

#WATCH | Lok Sabha LoP and Congress MP Rahul Gandhi says, "…It is my duty as Leader of Opposition to bring to your notice that there is a significant risk in the Indian stock market because the institutions that govern the stock market is compromised…A very serious allegation… pic.twitter.com/YcqKwkaNXI

— ANI (@ANI) August 11, 2024

ಸೆಬಿ ಅಧ್ಯಕ್ಷರು ಇನ್ನೂ ಏಕೆ ರಾಜೀನಾಮೆ ನೀಡಿಲ್ಲ ಎಂದು ದೇಶಾದ್ಯಂತದ ಹೂಡಿಕೆದಾರರು ತಿಳಿಯಲು ಬಯಸುತ್ತಾರೆ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ. “ದೇಶಾದ್ಯಂತದ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಸೆಬಿ ಅಧ್ಯಕ್ಷೆ ಮಾಧಾಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಿಲ್ಲ? ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ ಯಾರು ಜವಾಬ್ದಾರರು.

ಪ್ರಧಾನಿ ಮೋದಿ, ಸೆಬಿ ಅಧ್ಯಕ್ಷರು ಅಥವಾ ಗೌತಮ್ ಅದಾನಿಯೇ? ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಮತ್ತೊಮ್ಮೆ ಸ್ವಯಂಪ್ರೇರಿತವಾಗಿ ಪರಿಶೀಲಿಸುತ್ತದೆಯೇ ಎಂದು ರಾಹುಲ್​ ಹೇಳಿದ್ದಾರೆ.”ಜೆಪಿಸಿ ತನಿಖೆಗೆ ಪ್ರಧಾನಿ ಮೋದಿ ಏಕೆ ಹೆದರುತ್ತಾರೆ ಎಂಬುದು ಸ್ಪಷ್ಟವಾಗಿದೆ. ಅದು ಸತ್ಯ ಬಹಿರಂಗಪಡಿಸಬಹುದು ಎಂಬುದು ಸ್ಪಷ್ಟವಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Tags: Congress PartyMP Rahul GandhiSEBI
Previous Post

ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಪ್ರಬಲ ಆಕಾಂಕ್ಷಿ  ಎಂದ ಸಿಪಿ ಯೋಗೇಶ್ವರ್ ! 

Next Post

ದರ್ಶನ್​ಗಾಗಿ ಅಲ್ಲ.. ಚಿತ್ರರಂಗದ ಒಳಿತಿಗಾಗಿ ಹೋಮ – ಹವನ.. ಜಾಲತಾಣದಲ್ಲಿ ಟೀಕಾಸ್ತ್ರ..

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

ಅರಣ್ಯ ಒತ್ತುವರಿಗೆ ಖಡಕ್ ಎಚ್ಚರಿಕೆ; 2015 ಬಳಿಕದ ಅತಿಕ್ರಮಣ ತೆರವಿಗೆ ಖಂಡ್ರೆ ಆದೇಶ

May 26, 2026
Next Post

ದರ್ಶನ್​ಗಾಗಿ ಅಲ್ಲ.. ಚಿತ್ರರಂಗದ ಒಳಿತಿಗಾಗಿ ಹೋಮ - ಹವನ.. ಜಾಲತಾಣದಲ್ಲಿ ಟೀಕಾಸ್ತ್ರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada