ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಮಾಡಿದ್ದು, ತುಮಕೂರಿನಲ್ಲಿ ಅಶೋಕ್, ಮೈಸೂರಿನಲ್ಲಿ ವಿಜಯೇಂದ್ರ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು. ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಬಿಜೆಪಿ ಪ್ರತಿಭಟನೆ ಮಾಡಿದೆ. ಬಿಜೆಪಿಗೆ ಪ್ರತಿಭಟನೆಗೆ ಎಬಿವಿಪಿ ವಿದ್ಯಾರ್ಥಿ ಸಂಘಟನೆ, ಶ್ರೀರಾಮಸೇನೆ ಕೂಡ ಸಾಥ್ ನೀಡಿದೆ. ನೇಹಾ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು.

ಮೈಸೂರಿನಲ್ಲಿ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ರು. ದಾವಣಗೆರೆ, ರಾಮನಗರದಲ್ಲೂ ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ನೇಹಾ ಸಾವಿಗೆ ನ್ಯಾಯ ಬೇಕು ಎಂದು ಆಗ್ರಹ ಮಾಡಿದ್ರು.

ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ರಸ್ತೆ ತಡೆ ನಡೆಸಲಾಯ್ತು. ಇತ್ತ ತುಮಕೂರಿನಲ್ಲಿ ಪ್ರತಿಭಟನೆ ಮಾಡಿದ ಮಹಿಳಾ ಕಾರ್ಯಕರ್ತರು ಕೊಲೆಗಾರ ಫಯಾಜ್‌ಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯ ಮಾಡಿದ್ರು. ಬಾಗಲಕೋಟೆಯಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯ್ತು.

ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರು ನೇಹಾ ಕೊಲೆ ಖಂಡಿಸಿ ಪ್ರತಿಭಟನೆ ಮಾಡಿದ್ರು. ಚಿಕ್ಕೋಡಿಯಲ್ಲಿ ನಡೆದ ಪ್ರತಿಭಟನಾ ಱಲಿಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ನೇಹಾ ಕಟೌಟ್‌ಗೆ ಪುಷ್ಪ ನಮನ ಸಲ್ಲಿಸಲಾಯ್ತು. ಯಾದಗಿರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ನ್ಯಾಯಕ್ಕಾಗಿ ಆಗ್ರಹ ಮಾಡಲಾಯ್ತು. ನೇಹಾ ಹತ್ಯೆಗೈದ ಆರೋಪಿಯನ್ನ ಗಲ್ಲಿಗೇರಿಸುವಂತೆ ಒತ್ತಾಯ ಮಾಡುವ ಜೊತೆಗೆ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಧಿಕ್ಕಾರದ ಘೋಷಣೆ ಮೊಳಗಿಸಿದ್ರು.

ಕಲಬುರಗಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯ್ತು. ಚಿಕ್ಕಬಳ್ಳಾಪುರ ಕೋಲಾರದಲ್ಲೂ ಬಿಜೆಪಿ ಕಾರ್ಯಕರ್ತರು, ಎಬಿವಿಪಿ ವಿದ್ಯಾರ್ಥಿ ಸಂಘಟನೆ ಜೊತೆಗೆ ಸೇರಿಕೊಂಡು ಪ್ರತಿಭಟನೆ ಮಾಡಿದ್ರು. ಒಟ್ಟಾರೆ, ಪ್ರೇಮ ವೈಫಲ್ಯ ಹಿನ್ನೆಲೆಯಲ್ಲಿ ನಡೆದಿರುವ ಪ್ರಕರಣವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಜನರು ಹೇಗೆ ನಿರ್ಧಾರ ಮಾಡಲಿದ್ದಾರೆ ಎನ್ನುವ ಕುತೂಹಲ ಮೂಡಿಸಿದೆ.