• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

2008ರಲ್ಲೇ ಬಿಜೆಪಿಯಿಂದ ಕೆಎಂಎಫ್​ ಆಪೋಷನಕ್ಕೆ ಯತ್ನ : ಹೆಚ್​ಡಿಕೆ ಗಂಭೀರ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
April 10, 2023
in Top Story, ರಾಜಕೀಯ
0
2008ರಲ್ಲೇ ಬಿಜೆಪಿಯಿಂದ ಕೆಎಂಎಫ್​ ಆಪೋಷನಕ್ಕೆ ಯತ್ನ : ಹೆಚ್​ಡಿಕೆ ಗಂಭೀರ ಆರೋಪ
Share on WhatsAppShare on FacebookShare on Telegram

ಬೆಂಗಳೂರು: ಕೆಎಂಎಫ್ ಆಪೋಷನಕ್ಕೆ ಕೇಂದ್ರ ಬಿಜೆಪಿ ಸರಕಾರ ಮೂರನೇ ಸಂಚು ರೂಪಿಸಿದೆ ಎಂದು ಗಂಭೀರ ಆರೋಪ ಮಾಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; 2008ರಲ್ಲಿಯೇ ನಂದಿನಿಯನ್ನು ಮುಗಿಸಲು ಬಿಜೆಪಿ ಹೊರಟಿತ್ತು ಎಂದು ಮತ್ತೊಂದು ಆರೋಪ ಮಾಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, 2008ರಲ್ಲಿಯೇ ರಾಜ್ಯದ ಬಿಜೆಪಿ ಸರಕಾರ ರಾಜ್ಯದಲ್ಲಿ ಅಮುಲ್ ಮಾರುಕಟ್ಟೆ ವಿಸ್ತರಣೆಗೆ ಬೆಂಬಲ ನೀಡಿತ್ತು ಎಂದು ತಿಳಿಸಿದ್ದಾರೆ.

ADVERTISEMENT

ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ರಾಷ್ಟ್ರ ಬಿಜೆಪಿ ಹಾಗೂ ರಾಜ್ಯ ಬಿಜೆಪಿ ಪಕ್ಷಗಳ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು!! ಇದು ಬಿಜೆಪಿಯ (ಭರ)ವರಸೆ!! ಎಂದಿರುವ ಅವರು ಬಿಜೆಪಿಯೇ ಭರವಸೆ ಎನ್ನುವ ಆ ಪಕ್ಷದ ಘೋಷ ವಾಕ್ಯವನ್ನು ಬಿಜೆಪಿಯ ವರಸೆ ಎಂದು ಮೂದಲಿಸಿ, ಅದನ್ನೇ ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ!! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ!! ಮೋದಿ ಅವರು ಚುನಾವಣೆ ಹೊತ್ತಿನಲ್ಲಿ ತಮ್ಮೆಲ್ಲ ಅಗಾಧ ಕಾರ್ಯಭಾರ ಬದಿಗಿಟ್ಟು ಸಫಾರಿ ಮಾಡಿಹೋಗಿದ್ದಾರೆ. ಸ್ಥಳಕ್ಕೊಂದು ಪೋಷಾಕು ಧರಿಸುವ ಅವರ ಬಗ್ಗೆ ಮಾತಾಡಿದರೆ, ನನಗೆ ಅವರ ಧಿರಿಸಿನ ಬಗ್ಗೆ ಗೊತ್ತೇ ಇಲ್ಲ ಎನ್ನುವುದು ಸಚಿವ ಅಶ್ವತ್ಥನಾರಾಯಣ ಅವರ ಕುಹಕದ ಮಾತು ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬರು; ಸಿಟಿ ರವಿ. ಈ ಮಹಾಶಯರು, ಮೋದಿ ಅವರ ಬಗ್ಗೆ ಟೀಕೆ ಮಾಡಿದರೆ ಅವರ ಎತ್ತರಕ್ಕೆ ಏರಲು ಸಾಧ್ಯವಿಲ್ಲ ಎಂದು ಆಣಿಮುತ್ತು ಉದುರಿಸಿದ್ದಾರೆ. ನಾವು ಅವರ ಮಟ್ಟಕ್ಕೆ ಏರುವುದೂ ಇಲ್ಲ, ಸಿ.ಟಿ.ರವಿ ಅವರ ಮಟ್ಟಕ್ಕೆ ಇಳಿಯುವುದೂ ಇಲ್ಲ. ಆದರೆ, ಕರ್ನಾಟಕವನ್ನು ಗುಜರಾತಿಗಳಿಗೆ ಒತ್ತೆ ಇಡುವ ಪಾಪದ ಕೆಲಸವನ್ನಂತೂ ನಾವು ಮಾಡುತ್ತಿಲ್ಲ ಎಂದು ಕಾಲೆಳೆದಿದ್ದಾರೆ.

ಅಸಲಿ ವಿಷಯ ಅದಲ್ಲ! ಈಗಲ್ಲ, ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕೆಎಂಎಫ್ ಅನ್ನು ಮುಗಿಸಲು ಸುಪಾರಿ ಕೊಡಲಾಗಿತ್ತು!! ಅಂದರೆ 2008ರಲ್ಲೇ ಕನ್ನಡಿಗರ ಮೇಲೆ ಅಮುಲ್ ಅನ್ನು ಹೇರಿ, ನಂದಿನಿಯ ಕತ್ತು ಹಿಸುಕುವ ಕರಾಳ ಪ್ರಯತ್ನ ನಡೆದಿತ್ತು. ಆಗ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಮುಲ್ ಮಾರಾಟ ಘಟಕ ಸ್ಥಾಪಿಸಲು ಹೊರಟಿತ್ತು ಅಂದಿನ ರಾಜ್ಯ ಬಿಜೆಪಿ ಸರಕಾರ. ಅಂದರೆ, 15 ವರ್ಷಗಳ ಹಿಂದೆಯೇ ಅಮುಲ್ ಅನ್ನು ಉದ್ಧರಿಸಲು, ನಂದಿನಿಯ ಕತ್ತು ಕತ್ತರಿಸಲು ಬಿಜೆಪಿ ಹೊರಟಿತ್ತು!! ಎಂದು ಅವರು ಹೇಳಿದ್ದಾರೆ.

ಅಂದು ಅಮುಲ್‌ ಘಟಕದ ಬಗ್ಗೆ ಜೆಡಿಎಸ್ ಪಕ್ಷವು ಭಾರೀ ವಿರೋಧ ವ್ಯಕ್ತಪಡಿಸಿತ್ತು, ಕೆಎಂಎಫ್ʼನ ಅಂದಿನ ಅಧ್ಯಕ್ಷರಾಗಿದ್ದ ಹೆಚ್.ಡಿ.ರೇವಣ್ಣ ಅವರು, “ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅಮುಲ್ ಹಾಲು ಮಾರಾಟಕ್ಕೆ ಅವಕಾಶ ಕೊಡುವುದಿಲ್ಲ” ಎಂದು ಕಡ್ಡಿತುಂಡು ಮಾಡಿದಂತೆ ಹೇಳಿದ್ದರು.ಅಂದು ಬಿಜೆಪಿಗರು ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ,ನಂದಿನಿಯನ್ನು ಮುಗಿಸಲು ಹೊರಟಿದ್ದರು. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್ ಬೀಸಿದ್ದರು.ಈಗ ಪಾತ್ರಗಳು ಬದಲಾಗಿವೆ. ಸಿಟಿ ರವಿ, ಸಚಿವರಾದ ಸುಧಾಕರ್, ಅಶ್ವತ್ಥನಾರಾಯಣ ಇತರರು ರಂಗದ ಮೇಲಿದ್ದಾರಷ್ಟೇ ಎಂದು ಮಾಜಿ ಮುಖ್ಯಮಂತ್ರಿ ಅವರು ಟಾಂಗ್ ನೀಡಿದ್ದಾರೆ.

ಕರ್ನಾಟಕವನ್ನು ಗುಜರಾತಿನ ವಸಾಹತು ಮಾಡುವ ಬಿಜೆಪಿಯ ಹುನ್ನಾರ ಇಂದು ನಿನ್ನೆಯದಲ್ಲ. ವೈಬ್ರೆಂಟ್ ಗುಜರಾತಿನ ಮಹತ್ವಾಕಾಂಕ್ಷೆಯ ಹಿಂದೆಯೇ ಕರ್ನಾಟಕವನ್ನು ಕೆಳಕ್ಕೆ ಕೆಡಹುವ ಬಿಜೆಪಿಯ ಧೂರ್ತ ಅಜೆಂಡಾ ಈ ಚುನಾವಣೆ ಹೊತ್ತಿನಲ್ಲಿ ಬಟಾ ಬಯಲಾಗಿದೆ. 15 ವರ್ಷಗಳ ಹಳೆಯ ಸಂಚಿಗೆ ಮತ್ತೆ ಜೀವ ನೀಡಲಾಗಿದೆ. ಕರ್ನಾಟಕದ ಬ್ಯಾಂಕುಗಳು ಹೋದವು, ಭದ್ರಾವತಿಯ ವಿಎಸ್ ಎನ್ ಎಲ್ ಇನ್ನೇನು ಯಾರೋ ಗುಜರಾತಿ ಉದ್ದಿಮೆದಾರನ ಪಾಲಾಗುವ ಹಂತದಲ್ಲಿದೆ. ಈಗ ನಂದಿನಿ… ಲಾಭದಾಯಕವಾಗಿರುವ ರಾಜ್ಯದ ಒಂದೊಂದೇ ಉದ್ಯಮವನ್ನು ಮುಗಿಸಲು ಬಿಜೆಪಿ ಹೊಂಚು ಹಾಕಿರುವುದು ಸ್ಪಷ್ಟ ಎಂದು ಕುಮಾರಸ್ವಾಮಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಕೈಗಾರಿಕೆ,ಐಟಿಬಿಟಿ,ವಿಜ್ಞಾನ,ಆವಿಷ್ಕಾರ,ಉದ್ಯೋಗ ಸೃಷ್ಟಿ ಸೇರಿ ಜಿಎಸ್ ಟಿ ಕಟ್ಟುವುದರಲ್ಲಿಯೂ ಮುಂಚೂಣಿಯಲ್ಲಿರುವ ಕರ್ನಾಟಕವು, ಭಾರತವೇ ಹೆಮ್ಮೆಪಡುವ ರಾಜ್ಯ. ಇಂಥ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯೆಬ್ಬಿಸಿ ಶಾಶ್ವತವಾಗಿ ದಿಲ್ಲಿಯ ಮುಂದೆ ಭಿಕ್ಷಾಪಾತ್ರೆ ಹಿಡಿದು ನಿಲ್ಲುವಂತೆ ಮಾಡುವುದೇ ಬಿಜೆಪಿಯ ಕುಟಿಲ ನೀತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಯೊಂದನ್ನೂ ಪ್ರಶ್ನಿಸುವ, ನ್ಯಾಯ ಕೇಳುವ ಕನ್ನಡಿಗರನ್ನು ದುರ್ಬಲಗೊಳಿಸುವುದೂ ಎಂದರೆ, ಆರ್ಥಿಕವಾಗಿ ಕರ್ನಾಟಕದ ಬೆನ್ನುಮೂಳೆ ಮುರಿಯುವುದು. ಉತ್ತರಕ್ಕೆ ಬೆಣ್ಣೆ, ದಕ್ಷಿಣಕ್ಕೆ ಸುಣ್ಣ ಎಂಬ ನೀತಿ ಅನುಸರಿಸುವ ಬಿಜೆಪಿ ಡಬಲ್ ಎಂಜಿನ್ ಸರಕಾರವು, ದಕ್ಷಿಣದ ರಾಜ್ಯಗಳ ಜತೆ ಡಬಲ್ ಗೇಮ್ ಆಡುತ್ತಿದೆ. ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!! ಎಂದು. ಹೆಚ್ಡಿಕೆ ಅವರು ಮಾರ್ಮಿಕವಾಗಿ ಹೇಳಿದ್ದಾರೆ.

Tags: amulBJPBJP GovtHD KumaraswamyJDSKMFNandini Productಅಮುಲ್​ಕೆಎಂಎಫ್​ಜೆಡಿಎಸ್​ನಂದಿನಿ ಉತ್ಪನ್ನಬಿಜೆಪಿಬಿಜೆಪಿ ಸರ್ಕಾರಹೆಚ್​ಡಿ ಕುಮಾರಸ್ವಾಮಿ
Previous Post

ಶಿಥಿಲವಾಗುತ್ತಿರುವ ಮಾಧ್ಯಮ ಸ್ವಾತಂತ್ರ್ಯದ ನೆಲೆಗಳು..ಸ್ವಯಂ ನಿರ್ಬಂಧ ಹೇರಿಕೊಂಡಿರುವ ಮಾಧ್ಯಮಗಳೂ ಎಚ್ಚೆತ್ತುಕೊಳ್ಳಬೇಕಿದೆ..!

Next Post

ಬೀದರ್ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ .ಮೌಲ್ಯದ ಗಾಂಜಾ ಜಪ್ತಿ , ಇಬ್ಬರು ವಶಕ್ಕೆ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

May 13, 2026
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
Next Post
ಬೀದರ್ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ .ಮೌಲ್ಯದ ಗಾಂಜಾ ಜಪ್ತಿ , ಇಬ್ಬರು ವಶಕ್ಕೆ

ಬೀದರ್ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ .ಮೌಲ್ಯದ ಗಾಂಜಾ ಜಪ್ತಿ , ಇಬ್ಬರು ವಶಕ್ಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada