ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುತ್ತಿರುವ ದಿನದಂದು ರಾಹುಲ್ ಗಾಂಧಿ ಸೋದರ ಮಾವ ಉದ್ಯಮಿ ರಾಬರ್ಟ್ ವಾದ್ರಾ ಬಿಜೆಪಿ ವಿರುದ್ಧ ತೀರ್ವ ವಾಗ್ದಾಳಿ ನಡೆಸಿದ್ದಾರೆ.
ಹೌದು, ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡಲು ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ರಾಹುಲ್ ಗಾಂಧಿ ಸೋದರ ಮಾವ ಉದ್ಯಮಿ ರಾಬರ್ಟ್ ವಾದ್ರಾ ಆರೋಪಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯಿಂದ ನನಗೂ ಹಲವು ಬಾರಿ ಕರೆ ಬಂದಿದೆ ಎಂದು ವಾದ್ರಾ ಹೇಳಿದ್ದಾರೆ.

ಕೋವಿಡ್-19 ಸಂಬಂಧಿತ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜೂನ್ 23 ರಂದು ಕೇಂದ್ರ ಏಜೆನ್ಸಿಯ ಮುಂದೆ ಹಾಜರಾಗಲಿದ್ದಾರೆ. ಪಿಎಂಎಲ್‌ಎ ಅಡಿಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿದೆ.