ಬೆಂಗಳೂರು : ಬಿಜೆಪಿಯು ನನ್ನೊಬ್ಬನನ್ನು ಸೋಲಿಸೋಕೆ ಹೋಗಿ ತಾನೇ ಸೋತು ಹೋಯಿತು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ನನ್ನ ಮುಂದಿನ ರಾಜಕೀಯ ನಡೆ ಏನು ಅನ್ನುವುದರ ಬಗ್ಗೆ ಕಾಂಗ್ರೆಸ್ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ರು.
ನಾನು ಕಾಂಗ್ರೆಸ್ ಸೇರ್ಪಡೆಯಾಗುವಾಗ ಯಾವುದೇ ಷರತ್ತು ವಿಧಿಸರಲಿಲ್ಲ. ನನಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನನಗೆ ಒಳ್ಳೆಯ ಸ್ಥಾನಮಾನ ನೀಡಲಿದೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.
ಸದ್ಯಕ್ಕೆ ಒತ್ತಡದ ಪರಿಸ್ಥಿತಿ ಇರೋದ್ರಿಂದ ನನಗೆ ಸಚಿವ ಸ್ಥಾನ ನೀಡಿಲ್ಲ. ನನಗೆ ಯಾವುದೇ ಸ್ಥಾನ ನೀಡಿದರೂ ನಾನದನ್ನು ನಿಭಾಯಿಸುತ್ತೇನೆ. ವೈಯಕ್ತಿಕವಾಗಿ ನನಗೆ ಯಾವುದೇ ಆಸೆಯಿಲ್ಲ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆಯೂ ನಾನು ಯೋಚಿಸಿಲ್ಲ ಎಂದಿದ್ದಾರೆ.