• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೈಸೂರು ಮೇಯರ್‌, ಉಪಮೇಯರ್‌ ಸ್ಥಾನ ಬಿಜೆಪಿಗೆ: ಕಾಂಗ್ರೆಸ್‌, ಜೆಡಿಎಸ್‌ ಗೆ ಆಘಾತ

Any Mind by Any Mind
September 6, 2022
in ಕರ್ನಾಟಕ
0
ಮೈಸೂರು ಮೇಯರ್‌, ಉಪಮೇಯರ್‌ ಸ್ಥಾನ ಬಿಜೆಪಿಗೆ: ಕಾಂಗ್ರೆಸ್‌, ಜೆಡಿಎಸ್‌ ಗೆ ಆಘಾತ
Share on WhatsAppShare on FacebookShare on Telegram

ಮೈಸೂರು ಪಾಲಿಕೆ ಚುನಾವಣೆಯಲ್ಲಿ ಎಲ್ಲರ ಲೆಕ್ಕಾಚಾರ ತಲೆಕೆಳಗು ಮಾಡಿದ ಬಿಜೆಪಿ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನ ಗಿಟ್ಟಿಸಿದರೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಗೆ ಆಘಾತ ಉಂಟಾಗಿದೆ.

ADVERTISEMENT

ಮಂಗಳವಾರ ನಡೆದ ಚುನಾವಣೆಯಲ್ಲಿ 47ನೇ ವಾರ್ಡ್‌ ನ ಬಿಜೆಪಿ ಸದಸ್ಯ ಶಿವಕುಮಾರ್‌ ಆಯ್ಕೆಯಾದರೆ, ಉಪಮೇಯರ್‌ ಆಗಿ ಜಿ. ರೂಪಾ ಅಚ್ಚರಿಯಾಗಿ ಆಯ್ಕೆಯಾದರು.

ಮೈಸೂರು ಮಹಾನಗರಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಅಧಿಕೃತವಾಗಿ ಮೈತ್ರಿ ಮಾಡಿಕೊಂಡಿದೆ. ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಜೆಡಿಎಸ್ ಅಭ್ಯರ್ಥಿ ಕೆ.ವಿ.ಶ್ರೀಧರ್ ನಾಮಪತ್ರ ವಾಪಸ್ ಪಡೆದಿದ್ದರಿಂದ ಬಿಜೆಪಿ- ಕಾಂಗ್ರೆಸ್ ನಡುವೆ ಹಣಾಹಣಿ ಏರ್ಪಟ್ಟಿತ್ತು. ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಹಸರತ್‌ಉಲ್ಲಾ 28 ಮತಗಳನ್ನು ಗಳಿಸಿದರೆ ಬಿಜೆಪಿಯ ಶಿವಕುಮಾರ್ 47 ಮತಗಳನ್ನು ಪಡೆದು ಗದ್ದುಗೆ ಏರಿದರು.

ಮಹಾನಗರಪಾಲಿಕೆ ಮೇಯರ್-ಉಪ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಉಪ ಮೇಯರ್ ಸ್ಥಾನ ಪಡೆಯಲಾಗದೆ ಆಘಾತ ಅನುಭವಿಸಿತು.

ಜೆಡಿಎಸ್ ಅಭ್ಯರ್ಥಿ ರೇಷ್ಮಾ ಭಾನು ನಾಮಪತ್ರ ತಿರಸ್ಕೃತವಾಗಿದ್ದರಿಂದ ಬಿಜೆಪಿ ಅಭ್ಯರ್ಥಿ ಜಿ. ರೂಪಾ 45 ಮತಗಳನ್ನು ಪಡೆದು ಉಪಮೇಯರ್‌ ಸ್ಥಾನ ಪಡೆದರು. ಈ ಮೂಲಕ ಎರಡೂ ಸ್ಥಾನಗಳು ಬಿಜೆಪಿ ಪಾಲಾದಂತಾಯಿತು.

ರೇಷ್ಮಾ ಸಾಮಾನ್ಯ ಕ್ಷೇತ್ರದಿಂದ ಗೆದ್ದಿದ್ದಾರೆ. ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿತ್ತು.  ಜಾತಿ ಪ್ರಮಾಣಪತ್ರ ನೀಡದಿದ್ದರಿಂದ ನಾಮಪತ್ರವನ್ನು ಕ್ರಮಬದ್ಧವಾಗಿಲ್ಲ ಎಂದು ತಿರಸ್ಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಪ್ರಕಾಶ್ ತಿಳಿಸಿದರು.

ಜೆಡಿಎಸ್ ಬಂಡಾಯ ಅಭ್ಯರ್ಥಿ ನಿರ್ಮಲಾ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದ್ದರಿಂದ ಅವರು, 27 ಮತಗಳನ್ನು ಪಡೆದು ಮೂರನೇ ಸ್ಥಾನ ಗಳಿಸಿದರು.

Tags: BJPMysoreಬಿಜೆಪಿ
Previous Post

ಭಾರೀ ಮಳೆ: ಪ್ರವಾಸಿ ತಾಣ ನಂದಿಬೆಟ್ಟದಲ್ಲಿ 2 ಕಡೆ ಗುಡ್ಡ ಕುಸಿತ

Next Post

ದೆಹಲಿಯ ರಾಜ್‌ಪಥ್‌ ಗೆ ʻಕರ್ತವ್ಯ ಪಥʼ ಎಂದು ಮರು ನಾಮಕರಣ!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
ದೆಹಲಿಯ ರಾಜ್‌ಪಥ್‌ ಗೆ ʻಕರ್ತವ್ಯ ಪಥʼ ಎಂದು ಮರು ನಾಮಕರಣ!

ದೆಹಲಿಯ ರಾಜ್‌ಪಥ್‌ ಗೆ ʻಕರ್ತವ್ಯ ಪಥʼ ಎಂದು ಮರು ನಾಮಕರಣ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!