• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮೊಂಡುತನ ಮುಂದುವರೆಸಿದ ಬಿಜೆಪಿ, ಪ್ರತಿಭಟನೆ ನಡೆಸಿದ ನಾಯಕರ ಬಂಧನ

Any Mind by Any Mind
July 19, 2023
in ರಾಜಕೀಯ
0
ನಾನು ಭ್ರಷ್ಟಾಚಾರಿಯೂ ಅಲ್ಲ, ನನ್ನ ಸಿ.ಡಿ ಯಾರ ಬಳಿಯೂ ಇಲ್ಲ ; ಆದ್ರೂ ನನಗೆ ಟಿಕೆಟ್‌ ಕೊಟ್ಟಿಲ್ಲ; ಜಗದೀಶ್​ ಶೆಟ್ಟರ್​..!
Share on WhatsAppShare on FacebookShare on Telegram

ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ಇಂದು, ವಿಧಾನಸಭೆಗೆ ಕಪ್ಪು ಚುಕ್ಕೆ ತರುವ ಕೆಲಸವನ್ನ ಮಾಡಿದೆ. ಸ್ಪೀಕರ್‌ ಅನುಪಸ್ಥಿತಿಯಲ್ಲಿ ಸದನವನ್ನ ಮುನ್ನಡೆಸಿದ್ದ ಉಪ ಸಭಾಪತಿಯಾದ ರುದ್ರಪ್ಪ ಲಮಾಣ ಮುಂದೆ ಪ್ರತಿಭಟಿಸಿದ್ದ ಬಿಜೆಪಿ ಶಾಸಕರು ಸರ್ಕಾರದ ಬಿಲ್‌ ಮಂಡನೆಗೆ ಬಿಡದೇ ಅದರ ಪ್ರತಿಯನ್ನು ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೇವಲ ಇಷ್ಟು ಮಾತ್ರವಾಗಿದ್ದರೆ ಇದು ಸುದ್ದಿಯಾಗುತ್ತಿರಲಿಲ್ಲ. ಆದರೆ ಪ್ರತಿಭಟನೆಯ ನೆಪದಲ್ಲಿ ಬಿಜೆಪಿ ಬಿಲ್‌ ಹರಿದು ಹಾಕಿ ಅದರ ಚೂರುಗಳನ್ನ ಸಭಾಧ್ಯಕ್ಷರ ಸ್ಥಾನದಲ್ಲಿ ಕುಳಿತಿದ್ದ ರುದ್ರಪ್ಪ ಲಮಾಣಿ ಅವರ ಮುಖಕ್ಕೆ ಎಸೆದಿದ್ದಾರೆ.

ADVERTISEMENT

ಇನ್ನು ಬಿಜೆಪಿಯ ಈ ಕುಕೃತ್ಯಕ್ಕೆ ಶಿಕ್ಷೆ ನೀಡಿರುವ ಸ್ಪೀಕರ್‌ ಖಾರದರ್‌, 10 ಮಂದಿ ಶಾಸಕರನ್ನ ಅಮಾನತು ಮಾಡಿ ಆದೇಶವನ್ನ ಹೊರಡಿಸಿದೆ, ಇದು ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು, ಈ ಕುರಿತು ಕಾಂಗ್ರೆಸ್‌ ಸರ್ವಾಧಿಕಾರಿ ಧೋರಣೆಯನ್ನ ಅನುಸರಿಸುತ್ತಿದೆ ಎಂದು ಆಕ್ರೋಶವನ್ ವ್ಯಕ್ತ ಪಡಿಸಿದೆ

ರಾಜ್ಯ ಸರ್ಕಾರ ಸರ್ವಾಧಿಕಾರಿ ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸಭೆಯಲ್ಲಿ ಧರಣಿ ನಿರತ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಸ್ಪೀಕರ್ ಕಚೇರಿ ಹಾಗೂ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಬಿಜೆಪಿ ಜೆಡಿಎಸ್ ಸದಸ್ಯರೊಂದಿಗೆ ಧರಣಿ ನಡೆಸಿದರು. ಪೊಲೀಸರು ಧರಣಿ ನಿರತರನ್ನು ವಶಕ್ಕೆ ಪಡೆದರು. ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜುಲೈ 17,18 ರಂದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಗುಮಾಸ್ತರನ್ನಾಗಿ ಮಾಡಿ ಪ್ರೊಟೊಕಾಲ್ ಇಲ್ಲದವರಿಗೂ ಪಿಎ ಥರಾ ಕೆಲಸ ಮಾಡುವಂತೆ ಮಾಡಿದ್ದಾರೆ.

ಯಾರು ರಾಜ್ಯದ ಗೆಸ್ಟ್ ಅಂತ ಇರುತ್ತಾರೊ ಅವರಿಗೆ ಗೌರವ ಸಲ್ಲಿಸಲು ಪ್ರೊಟೊಕಾಲ್ ಅಧಿಕಾರಿಗಳು ಇದ್ದಾರೆ. ಅವರ ಬದಲು ಹಿರಿಯ ಐಎಎಸ್ ಅಧಿಕಾರಿಗಳಿಗೆ ರಾಜಕಾರಣಿಗಳನ್ನು ಬಾಗಿಲು ಕಾಯಲು ಹಚ್ಚಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೆಲೆ ಪ್ರಜಾಪ್ರಭುತ್ವ ಕಗ್ಗೊಲೆ ಆಗಿದೆ. ಸ್ಪಿಕರ್‌ ಸ್ಥಾನ ದುರುಪಯೋಗ ಆಗಿದೆ. ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ನಾವು ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮ ಸದಸ್ಯರಿಗೆ ಊಟಕ್ಕೆ ಬಿಡದೆ ಸದನ ನಡೆಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಿಟ್ಲರ್ ಶಾಹಿ ಆಡಳಿತ ನಡೆಸಿದ್ದಾರೆ. ಸ್ಪೀಕರ್ ಕಾಂಗ್ರೆಸ್ ನವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಸ್ಪೀಕರ್ ಕುರ್ಚಿಗೆ ಅವಮಾನವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ್ ಪೇಪರ್ ಹರಿದು ಹಾಕಿದ ಉದಾಹರಣೆ ಇದೆ. ಒಬ್ಬ ಸದಸ್ಯರು ಸ್ಪೀಕರ್ ಮುಂದಿನ ಮೈಕ್ ಕಿತ್ತು ಹಾಕಿದ ಉದಾಹರಣೆ ಇದೆ. ಸಿದ್ದರಾಮಯ್ಯ ಸದನದ ಬಾಗಿಲು ಒದ್ದು ಹೊಗಿರುವುದು ನಿದರ್ಶನ ಇದೆ. ಇವರು ಪ್ರತಿಪಕ್ಷದ ಹಕ್ಕನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇವತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇದು ಕರಾಳ ದಿನ. ಇದರ ವಿರುದ್ದ ನಾವು ಸದನದ ಹೊರಗೂ ಹೋರಾಟ ಮಾಡಿ ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.


ಇದೇ ವೇಳೆ ಉಪ ಸಭಾಧ್ಯಕ್ಷರಿಗೆ ಬಿಜೆಪಿ ಅವಮಾನ ಮಾಡಿದೆ ಎಂಬ ಕಾಂಗ್ರೆಸ್ ನವರ ಆರೋಪದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ನವರು ಉಪ ಸಭಾಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ.‌ ಸ್ಪೀಕರ್ ಸದನದ ಪರಿಸ್ಥಿತಿಯನ್ನು ನಿಭಾಯಿಸದೇ ಎದ್ದು ಹೋಗಿದ್ದಾರೆ. ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಯವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರನ್ನು ಉಪಸಭಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್ ನವರೇ ಅವರಿಗೆ ಅವಮಾನ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

Tags: Basavaraja BommaiBJPRudrappa lamaniUT khader
Previous Post

ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ- ಸಂವಿಧಾನ ವಿರೋಧಿ-ಜನ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕರ್ನಾಟಕದ ಸ್ತ್ರೀಯರಿಗೆ ಆರ್ಥಿಕ ಸ್ವಾತಂತ್ರ್ಯ, ಗೃಹ ಲಕ್ಷ್ಮಿ ಯೋಜನೆಗೆ ಸಿಎಂ ಚಾಲನೆ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
Next Post
ಕರ್ನಾಟಕದ ಸ್ತ್ರೀಯರಿಗೆ ಆರ್ಥಿಕ ಸ್ವಾತಂತ್ರ್ಯ, ಗೃಹ ಲಕ್ಷ್ಮಿ ಯೋಜನೆಗೆ ಸಿಎಂ ಚಾಲನೆ

ಕರ್ನಾಟಕದ ಸ್ತ್ರೀಯರಿಗೆ ಆರ್ಥಿಕ ಸ್ವಾತಂತ್ರ್ಯ, ಗೃಹ ಲಕ್ಷ್ಮಿ ಯೋಜನೆಗೆ ಸಿಎಂ ಚಾಲನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada