• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ಅಣೆಕಟ್ಟು ಒಡೆದಿದೆ.. ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್‌

Any Mind by Any Mind
April 24, 2023
in ರಾಜಕೀಯ
0
ಬಿಜೆಪಿ ಅಣೆಕಟ್ಟು ಒಡೆದಿದೆ.. ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ: ಡಿ.ಕೆ.ಶಿವಕುಮಾರ್‌
Share on WhatsAppShare on FacebookShare on Telegram

2023ರ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್‌ ಶುರುವಾಗಿದ್ದು, ಈಗಾಗಲೇ ಪಕ್ಷದ ನಾಯಕರು ಅಖಾಡಕ್ಕೆ ದುಮುಕಿ ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಂತೂ ಟೆಂಪಲ್‌ ರನ್ ಶುರು ಮಾಡಿದ್ದು, ಇಂದು ಕೊಲ್ಲೂರಿನಲ್ಲಿ ಕುಟುಂಬ ಸಮೇತರಾಗಿ ನವಚಂಡಿಕಾಯಾಗ ನಡೆಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತ್ನಾಡಿದ ಡಿಕೆಶಿ, ʻಬೈಂದೂರಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಜನರ ಉತ್ಸಾಹ ಮುಗಿಲು ಮುಟ್ಟಿತ್ತು. ಬಿಜೆಪಿಯಿಂದ ಸಾವಿರಾರು ಜನ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ADVERTISEMENT

ಅನೇಕ ನಾಯಕರುಗಳು ಕಾಂಗ್ರೆಸ್ ಸೇರಿದ್ದಾರೆ. ಜನರ ಈ ವಿಶ್ವಾಸ ಉಳಿಸಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತಂದು ಜನರ ಸೇವೆ ಮಾಡಬೇಕು. ರಾಹುಲ್ ಗಾಂಧಿ ಅವರು ಈ ಭಾಗದಲ್ಲಿ ಪ್ರಚಾರ ಮಾಡಲಿದ್ದಾರೆ. ಕರಾವಳಿ ಭಾಗದಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ವಾತಾವರಣವಿದ್ದು ಕನಿಷ್ಠ 10 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಭಾಗದಲ್ಲಿ ಬಿಜೆಪಿ ಹಿಂದುತ್ವದ ವಿಚಾರದಲ್ಲಿ ಚುನಾವಣೆ ಮಾಡುತ್ತಿದೆ ಇದು ಫಲ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಈ ಬಾರಿ ಆ ತಂತ್ರ ಫಲ ನೀಡುವುದಿಲ್ಲ. ಈ ಚುನಾವಣೆ ಭಾವನೆ ಹಾಗೂ ಬದುಕಿನ ನಡುವಣ ಚುನಾವಣೆ. ಬಿಜೆಪಿ ಭಾವನೆಗಳ ಮೇಲೆ ಚುನಾವಣೆ ಮಾಡಿದರೆ, ನಾವು ಬದುಕಿನ ಮೇಲೆ ಚುನಾವಣೆ ಮಾಡುತ್ತೇವೆ.

ಅವರು ಭ್ರಷ್ಟಾಚಾರ ನಿರ್ಮೂಲನೆಗೆ ನಾವು ಪಣ ತೊಟ್ಟಿದ್ದೇವೆ’ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷದ ವಿರುದ್ಧ ಬಂಡಾಯ ಸ್ಪರ್ಧಿಗಳ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಬಹುತೇಕ ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುತ್ತಾರೆ. ಕೆಲವರಿಗೆ ಪಕ್ಷೇತರರಾಗಿ ಸ್ಪರ್ಧಿಸುವ ಚಟ ಇದ್ದು, ಮೊದಲಿನಿಂದಲೂ ಹಾಗೆ ಮಾಡಿದ್ದಾರೆ. ಅಂತಹವರು ಹೋಗಬಹುದು, ಉಳಿದವರು ಅರ್ಜಿ ಹಿಂಪಡೆಯಲಿದ್ದಾರೆ. ನಿನ್ನೆ ಉಡುಪಿಯಲ್ಲಿ ಮಾತನಾಡಿದ್ದೇನೆ, ಅವರು ಹಾಗೂ ಚಿಕ್ಕಪೇಟೆಯಲ್ಲಿ ಮಾಜಿ ಮೇಯರ್ ಅವರು ಅರ್ಜಿ ಹಿಂಪಡೆಯಲಿದ್ದಾರೆ’ ಎಂದು ಡಿಕೆ ಶಿವಕುಮಾರ್‌ ತಿಳಿಸಿದರು.

ಸಿದ್ದರಾಮಯ್ಯ ಅವರ ಲಿಂಗಾಯತ ಸಮುದಾಯ ಕುರಿತ ವಿವಾದದ ಬಗ್ಗೆ ಪ್ರತಿಕ್ರಿಸಿದ ಡಿ.ಕೆ.ಶಿವಕುಮಾರ್‌, ‘ಸಿದ್ದರಾಮಯ್ಯ ಅವರು ಅವರ ಕಾಲದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಹೇಳಿದ್ದಾರೆ ಹೊರತು, ಇಡೀ ಸಮುದಾಯ ಉದ್ದೇಶಿಸಿ ಹೇಳಿಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ನಾಯಕರಾದ ಯತ್ನಾಳ್, ವಿಶ್ವನಾಥ್, ಗೂಳಿಹಟ್ಟಿ ಶೇಖರ್, ಕೆಂಪಣ್ಣ ಅವರು ಹೇಳಿದ್ದಾರೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಯಾರು ಮುಚ್ಚಿ ಹಾಕಲು ಸಾಧ್ಯವಿಲ್ಲ. ರಾಜ್ಯದಲ್ಲಿ 40% ಕಮಿಷನ್, ಪಿಎಸ್‌ಐ ಸೇರಿದಂತೆ ನೇಮಕಾತಿ ಹಗರಣ, ವಿವಿ ಉಪಕುಲಪತಿ ನೇಮಕಕ್ಕೆ ಹಣ ಪಡೆದಿರುವುದು ನಮ್ಮ ಕಾಲದಲ್ಲಿ ಆಗಿದೆಯಾ?. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ. ಸಿದ್ದರಾಮಯ್ಯ ಸರ್ಕಾರದ ವಿಚಾರ ಮಾತನಾಡಿದ್ದು, ಸಮುದಾಯದ ವಿಚಾರ ಮಾತನಾಡಿಲ್ಲ’ ಎಂದು ತಿಳಿಸಿದರು. ಈ ಬಾರಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಪಕ್ಷದ ಕೈ ಹಿಡಿಯಲಿದೆಯೆ ಎಂಬ ಪ್ರಶ್ನೆಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷರು, ‘ಬಿಜೆಪಿ ಅಣೆಕಟ್ಟು ಒಡೆದಿದೆ. ಕೇವಲ ಲಿಂಗಾಯತ ಸಮುದಾಯ ಮಾತ್ರವಲ್ಲ, ಎಲ್ಲಾ ಸಮುದಾಯದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಉತ್ತಮ ಆಡಳಿತ ನೀಡಲಾಗುವುದು. ಹೊರಗಡೆ ಇರುವ ಎಲ್ಲ ಮತದಾರರು ತಮ್ಮ ಊರಿಗೆ ಬಂದು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಬೇಕು ಎಂದು ಮನವಿ ಮಾಡುತ್ತೇನೆ’ ಎಂದು ತಿಳಿಸಿದರು.

Tags: #bjp#congress#dkshivakumar#election2023#karnataka#karnatakaassemblyelection#pratidhvani#pratidhvanidigital#pratidhvaninews#statement
Previous Post

ಕೊಲ್ಲೂರಿನಲ್ಲಿ ಡಿಕೆಶಿ ಕುಟುಂಬದಿಂದ ಚಂಡಿಕಾಯಾಗ : ಮುಂದಿನ ಸಿಎಂ ಬಗ್ಗೆ ಮಾರ್ಮಿಕ ನುಡಿ

Next Post

ಚಾಮರಾಜನಗರದಲ್ಲಿ ಪತಿ ಸೋಮಣ್ಣ ಪರ ಪತ್ನಿ ಭರ್ಜರಿ ಮತಬೇಟೆ

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
ಚಾಮರಾಜನಗರದಲ್ಲಿ ಪತಿ ಸೋಮಣ್ಣ ಪರ ಪತ್ನಿ ಭರ್ಜರಿ ಮತಬೇಟೆ

ಚಾಮರಾಜನಗರದಲ್ಲಿ ಪತಿ ಸೋಮಣ್ಣ ಪರ ಪತ್ನಿ ಭರ್ಜರಿ ಮತಬೇಟೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada