• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆಯೇರಿಸಿ ಜನರ ಗಾಯದ ಮೇಲೆ ಬರೆ ಎಳೆದಿದೆ: ದಿನೇಶ್ ಗುಂಡುರಾವ್ ಗರಂ

Any Mind by Any Mind
June 14, 2021
in ಕರ್ನಾಟಕ
0
ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆಯೇರಿಸಿ ಜನರ ಗಾಯದ ಮೇಲೆ ಬರೆ ಎಳೆದಿದೆ: ದಿನೇಶ್ ಗುಂಡುರಾವ್ ಗರಂ
Share on WhatsAppShare on FacebookShare on Telegram

ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಗೆ ಶಾಪಗ್ರಸ್ತ ಸರ್ಕಾರಗಳಾಗಿವೆ. ದೇಶವೇ ಕೋವಿಡ್ ಎರಡನೇ ಅಲೆಯ ಬೇಗುದಿಯಲ್ಲಿದೆ. ಲಾಕ್‌ಡೌನ್‌ನಿಂದಾಗಿ ಸೇವಾ ವಲಯ ಮತ್ತು ಉತ್ಪಾದನಾ ವಲಯ ನೆಲಕಚ್ಚಿದೆ. ಲಾಕ್‌ಡೌನ್ ಪರಿಣಾಮ ಲಕ್ಷಾಂತರ ಜನರಿಗೆ ಉದ್ಯೋಗ ನಷ್ಟವಾಗಿದೆ. ಈ ಸಂದರ್ಭದಲ್ಲಿ ಜನರ ಸಂಕಷ್ಟಕ್ಕೆ ನೆರವಾಗಬೇಕಾದ ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರಗಳು ಬೆಲೆಯೇರಿಸಿ ಜನರ ಹಸಿ ಗಾಯದ ಮೇಲೆ ಬರೆ ಎಳೆದಿವೆ ಎಂದು ಗಾಂಧಿನಗರ ಶಾಸಕ ಮತ್ತು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಗುಡುಗಿದ್ದಾರೆ.

ADVERTISEMENT

ಈ ಕುರುತು ಪತ್ರಿಕ ಹೇಳಿಕೆ ಪ್ರಕಟಿಸಿರುವ ಅವರು, ಮೋದಿಯವರ ಸರ್ಕಾರ ಜನಹಿತ ಮರೆತಿದೆ. ಕೋವಿಡ್ ಸಂಕಷ್ಟದ ಮಧ್ಯೆ ನಿರಂತರವಾಗಿ ತೈಲ ಬೆಲೆ ಏರಿಸುತ್ತಿದೆ. ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ 1 ಲೀಟರ್ ಪೆಟ್ರೋಲ್‌ 30 ರೂಪಾಯಿ ಹೆಚ್ಚಳವಾಗಿದೆ. ಸದ್ಯ ಪೆಟ್ರೋಲ್ ಸಾರ್ವಕಾಲಿಕ ಹೆಚ್ಚಳ ಕಂಡು ಸೆಂಚುರಿ ಬಾರಿಸಿದೆ. ಡಿಸೇಲ್ ಕೂಡ ಶತಕದ ಗಡಿ ಸಮೀಪಿಸಿದೆ‌. ಮನ್‌ಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾ ತೈಲದ ಬೆಲೆ 125 ಡಾಲರ್ ಇತ್ತು. ಆಗ ಪೆಟ್ರೋಲ್ ಬೆಲೆ 70 ರೂಪಾಯಿಯಷ್ಟಿತ್ತು. ಈಗ ಕಚ್ಛಾತೈಲದ ಬೆಲೆ 70 ಡಾಲರ್ ಇದ್ದರೂ ಪೆಟ್ರೋಲ್ ಬೆಲೆ 100 ದಾಟಿದೆ. ಜೊತೆಗೆ ಈಗಿನ ಕೇಂದ್ರ ಸರ್ಕಾರ ಲೀಟರ್ ಪೆಟ್ರೋಲ್ ಮೇಲೆ 31.84 ಹಾಗೂ ಡಿಸೇಲ್ ಮೇಲೆ 32.84 ಅಬಕಾರಿ ಸುಂಕ ವಿಧಿಸಿ ಜನರ ಸುಲಿಗೆ ಮಾಡುತ್ತಿದೆ. 1 ಲೀಟರ್ ಪೆಟ್ರೋಲ್ ಮೂಲಬೆಲೆ 35 ರೂಪಾಯಿ ಇದ್ದರೂ ಜನರು 65 ರೂಪಾಯಿ ತೆರಬೇಕು. ಪ್ರಪಂಚದಲ್ಲಿ ಒಂದು ಲೀಟರ್ ಪೆಟ್ರೋಲ್‌ಗೆ ಶೇ 65% ರಷ್ಟು ತೆರಿಗೆ ಪಾವತಿಸುತ್ತಿರುವುದು ಭಾರತದಲ್ಲಿ ಮಾತ್ರ ಎಂದು ದೂರಿದ್ದಾರೆ.

ತೈಲಬೆಲೆ ಏರಿಕೆಯ ನೇರ ಪರಿಣಾಮ ಅಗತ್ಯ ವಸ್ತುಗಳ ಮೇಲೆ ಬಿದ್ದಿದೆ. ಸಾಗಾಣಿಕೆ ವೆಚ್ಚ ಹೆಚ್ಚಾಗಿದೆ. ವರ್ಷದ ಹಿಂದೆ ಸಾಮಾನ್ಯ ಕುಟುಂಬ ಮಾಸಿಕ 4 ಸಾವಿರದಲ್ಲಿ ಮನೆ ಖರ್ಚು ನಿಭಾಯಿಸುತಿತ್ತು. ಈಗ ಅದೇ ಕುಟುಂಬಕ್ಕೆ ತಿಂಗಳಿಗೆ ಹತ್ತು ಸಾವಿರ ಬೇಕು. 80 ರೂಪಾಯಿ ಇದ್ದ ತೊಗರಿಬೇಳೆಗೆ ಇಂದು 160 ರೂಪಾಯಿ. ಅಡುಗೆ ಎಣ್ಣೆಯ ಬೆಲೆ 90 ರಿಂದ 200 ರೂಪಾಯಿಗೆ ಏರಿಕೆಯಾಗಿದೆ. ಈ ಮಧ್ಯೆ 2013-14 ರಲ್ಲಿ 400 ರೂಪಾಯಿ ಇದ್ದ ಒಂದು ಗ್ಯಾಸ್ ಸಿಲಿಂಡೆರ್‌ನ ಬೆಲೆ 850 ಕ್ಕೆ ತಲುಪಿದೆ ಎಂದು ಹೇಳಿದ್ದಾರೆ.

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

ಹೀಗಿರುವಾಗಲೇ ರಾಜ್ಯ ಸರ್ಕಾರ ಪ್ರತಿ ಯೂನಿಟ್ ವಿದ್ಯತ್‌ಗೆ 30 ಪೈಸೆ ಏರಿಸಿದೆ. ಈ ಸಂದರ್ಭದಲ್ಲಿ ವಿದ್ಯುತ್ ದರ ಏರಿಸುವ ಸರ್ಕಾರದ ನಿರ್ಧಾರ ಸಂವೇದನಾರಹಿತಾ ನಡೆ. ವಿದ್ಯುತ್ ದರ ಏರಿಕೆಯಿಂದ ಜನಸಾಮಾನ್ಯರ ಜೊತೆ ಕೈಗಾರಿಕಾ ಕ್ಷೇತ್ರಕ್ಕೂ ದೊಡ್ಡ ಹೊಡೆತ ನೀಡಲಿದೆ. ಈಗಾಗಲೇ ಕೈಗಾರಿಕೆಗಳು ಲಾಕ್‌ಡೌನ್‌ನಿಂದಾಗಿ ಉತ್ಪಾದನೆ ನಿಲ್ಲಿಸಿವೆ. ವಿದ್ಯುತ್ ದರ ಏರಿಕೆಯಿಂದ ಕೈಗಾರಿಕೆಗಳು ಬಾಗಿಲು ಮುಚ್ಚಿದರೆ ಆಗುವ ಉದ್ಯೋಗ ನಷ್ಡಕ್ಕೆ ಯಾರು ಹೊಣೆ.?ರಾಜ್ಯ ಸರ್ಕಾರದ ಬೇಜವಬ್ಧಾರಿ ಮತ್ತು ನಿರ್ಲಕ್ಷ್ಯಕ್ಕೆ ರಾಜ್ಯದ ಜನ ಕೊರೊನಾ 2ನೇ ಅಲೆಯ ಭೀಕರ ಪರಿಣಾಮ ಎದುರಿಸುವಂತಾಯಿತು ಎಂದು ಹೆಚ್ಚರಿಸಿದ್ದಾರೆ.

ಚಾಮರಾಜನಗರದ ದುರಂತ ರಾಜ್ಯ ಸರ್ಕಾರದ ಪಾಪದ ಫಲ. ರಾಜ್ಯ ಸರ್ಕಾರದ ನಿಷ್ಕ್ರೀಯತೆಯಿಂದಾಗಿ ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ಮಾಡುವ ಅನಿವಾರ್ಯತೆ ಸೃಷ್ಟಿಯಾಯಿತು. ಲಾಕ್‌ಡೌನ್ ನಂತರ ಜನರ ಜೀವನದ ಮೇಲಾಗುವ ಪರಿಣಾಮದ ಬಗ್ಗೆ ಸರ್ಕಾರ ಯೋಚಿಸಲೇ ಇಲ್ಲ. ಲಾಕ್‌ಡೌನ್‌ನಿಂದ ಲಕ್ಷಾಂತರ ಜನರ ಬದುಕು ಮೂರಾಬಟ್ಟೆಯಾಯಿತು. ನಮ್ಮ ಪಕ್ಷ ನಿರಂತರವಾಗಿ ಒತ್ತಡ ಹೇರಿದ ಮೇಲೆ ಮುಖ್ಯಮಂತ್ರಿಯವರು ಕಾಟಾಚಾರಕ್ಕೆ ಆರ್ಥಿಕ ಪ್ಯಾಕೇಜ್ ಘೋ಼ಷಿಸಿದರು. ಆದರೆ ಅದೊಂದು ಎಲ್ಲರನ್ನೂ ಒಳಗೊಳ್ಳದ ಕಣ್ಣೊರೆಸುವ ಪ್ಯಾಕೇಜ್ ಎಂದು ಕಿಡಿಕಾರಿದ್ದಾರೆ.

ಲಾಕ್‌ಡೌನ್ ಪರಿಣಾಮ ರಾಜ್ಯದ ರೈತರ ಬದುಕು ಬೀದಿಗೆ ಬಂದಿದೆ. ಲಾಕ್‌ಡೌನ್‌ನಿಂದಾಗಿ ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ಸಿಗದೆ ನಷ್ಟ ಅನುಭವಿಸಿದ್ದಾರೆ. ಈ ಬಾರಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದ್ದರೂ ಬಿತ್ತನೆ ಬೀಜ ಸಿಗದೆ,ಸಕಾಲಕ್ಕೆ ರಸಗೊಬ್ಬರ ಸಿಗದೆ ಹೈರಾಣಾಗಿದ್ದಾರೆ. ಸರ್ಕಾರ ಘೋಷಿಸಿದ ಆರ್ಥಿಕ ಪ್ಯಾಕೇಜ್‌ನಲ್ಲಿ ರೈತರಿಗೆ ನಯಾಪೈಸೆಯ ನೆರವು ಸಿಗಲಿಲ್ಲ. ಕೇವಲ ಹೂವು ಬೆಳೆಗಾರರಿಗೆ ಹತ್ತು ಸಾವಿರ ಘೋಷಣೆ ಮಾಡಿ ಸರ್ಕಾರ ಕೈ ತೊಳೆದುಕೊಂಡಿದೆ ಎಂದು ಹೇಳಿದ್ದಾರೆ.

ಸರ್ಕಾರ ಸುಳ್ಳು ಭರವಸೆಗಳ ಮೂಲಕ ಜನರನ್ನು ವಂಚಿಸುವ ಕೆಲಸ ಬಿಡಬೇಕು. ಕೋವಿಡ್ ವಿಷಮ ಗಳಿಗೆಯಲ್ಲಿ ಬೆಲೆ ಏರಿಸುವ ನಿರ್ದಯತೆ ಸರ್ಕಾರಕ್ಕಿರಬಾರದು. ಕೇಂದ್ರ ಸರ್ಕಾರ ತೈಲಬೆಲೆ ಇಳಿಸಿ, ಅಗತ್ಯ ವಸ್ತುಗಳ ಬೆಲೆ ಇಳಿಸಲಿ. ಇನ್ನು ಸರ್ಕಾರಕ್ಕೆ ನನ್ನ ಆಗ್ರಹವೇನೆಂದರೆ, ಸರ್ಕಾರ ಪ್ರತಿ ಬಿಪಿಎಲ್ ಕುಟುಂಬಕ್ಕೆ ಹತ್ತು ಸಾವಿರ ರೂಪಾಯಿಗಳ ಸಹಾಯಧನ ನೀಡಬೇಕು. ಆಸ್ತಿ ತೆರಿಗೆಯಲ್ಲಿ ಶೇ. 50% ರಷ್ಟು ವಿನಾಯಿತಿ ನೀಡಬೇಕು. ಜೊತೆಗೆ ಈ ಕೂಡಲೆ ವಿದ್ಯತ್ ದರ ಇಳಿಸಿ ಯಥಾಸ್ಥಿತಿ ಕಾಪಾಡಬೇಕೆಂದು ಆಗ್ರಹಿಸಿದ್ದಾರೆ.

Previous Post

Covid19 ಸೋಕಿನಿಂದ ಮೃತಪಟ್ಟ ಬಿಪಿಎಲ್‌ ಕಾರ್ಡುದಾರರಿಗೆ 1 ಲಕ್ಷ ಪರಿಹಾರ – CM B S Yediyurappa

Next Post

ಅಯೋಧ್ಯ ಲ್ಯಾಂಡ್‌ ಮಾಫಿಯಾ ಆರೋಪ: AAP ಪತ್ರಿಕಾಗೋಷ್ಟಿ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post

ಅಯೋಧ್ಯ ಲ್ಯಾಂಡ್‌ ಮಾಫಿಯಾ ಆರೋಪ: AAP ಪತ್ರಿಕಾಗೋಷ್ಟಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada