ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದ್ದರೂ ದೇಶಕ್ಕೆ ಸಂಕಷ್ಟಗಳು ತಪ್ಪಿಲ್ಲ. ದೇಶವನ್ನು ಮರುನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಎದುರಾಗಿದ್ದು, ದೇಶಕ್ಕೆ ಕಾಂಗ್ರೆಸ್ ಅಗತ್ಯವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ, “ಕರಾವಳಿ ಭಾಗದಲ್ಲಿ ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಆರೋಪ, ಟೀಕೆ ಮಾಡುವುದೇ ಬಿಜೆಪಿಯವರ ಕೆಲಸ. ದೇಶ, ರಾಜ್ಯ, ಮಕ್ಕಳಲ್ಲಿ ಅಶಾಂತಿ ಮೂಡಿಸುವುದರಲ್ಲಿ ಬಿಜೆಪಿ ಅವರು ನಿಸ್ಸೀಮರು. ಮೊದಲಿನಿಂದಲೂ ಅವರು ಇದನ್ನೇ ಮಾಡಿಕೊಂಡು ಬರುತ್ತಿದ್ದಾರೆ,” ಎಂದರು.

ಕಾಂಗ್ರೆಸ್ ಕಾರ್ಯಕರ್ತರ ಭಾವನೆ ಅಧ್ಯಕ್ಷರ ಭಾವನೆಯಾಗಬೇಕು. ಯಾರು ನಮ್ಮ ನಾಯಕರಾಗಬೇಕು ಎಂಬುದರ ಬಗ್ಗೆ ಕಾರ್ಯಕರ್ತರ ಅಭಿಪ್ರಾಯವನ್ನು ಆನ್ಲೈನ್ ಮೂಲಕ ಸಂಗ್ರಹಿಸಲು ಅನುವಾಗುವಂತೆ ಡಿಜಿಟಲ್ ಸದಸ್ಯತ್ವ ನೋಂದಣಿ ಆರಂಭಿಸಿದ್ದೇವೆ ಎಂದು ತಿಳಿಸಿದರು.