ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆ ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು -ಸಿದ್ದರಾಮಯ್ಯ

ಕರೋನಾ ಪರೀಕ್ಷೆ ಕಡಿಮೆ ಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯತಪಡಿಸಿದ್ದಾರೆ.

ಈ ಕರಿತು ಟ್ವಿಟರಿನಲ್ಲಿ ನರಣಿ ಟ್ವೀಟ್‌ ಮಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ. ರಾಜ್ಯದಲ್ಲಿ ಕರೋನಾ ಸೋಂಕು ಕಡಿಮೆಯಾಗುತ್ತಿದೆ ಎಂಬ ಮುಖ್ಯಮಂತ್ರಿಯ ಸುಳ್ಳು ಪ್ರಚಾರಕ್ಕೆ ಕಾರಣ, ರೋಗ ಲಕ್ಷಣಗಳಿಲ್ಲದವರ ( ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ ಬಿಜೆಪಿ ಸರ್ಕಾರದ ಸುತ್ತೋಲೆ ಕಾರಣ. ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ? ಎಂದು ಅವರು ಪ್ರಶ್ನಿಸಿದ್ದಾರೆ.

ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ‌ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಲಾಕ್ ಡೌನ್ ಹೊರತಾಗಿಯೂ ಕರೋನಾ ನಿಯಂತ್ರಣಕ್ಕೆ ಬರದೆ ಇರಲು ಬಿಜೆಪಿ ಸರ್ಕಾರದ ಈ ಮೂರ್ಖ ನಿರ್ಧಾರ ಕಾರಣ ಎಂದು ಅವರು ಎಚ್ಚರಿಸಿದ್ದಾರೆ.

ಮೇ ಮೊದಲ ವಾರದಲ್ಲಿ 49,000ದಷ್ಟಿದ್ದ ಕೊರೊನಾ ಸೋಂಕಿತರ ಸಂಖ್ಯೆ, ಲಾಕ್‌ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು ಮುಖ್ಯಮಂತ್ರಿ ಕೊಚ್ಚಿಕೊಂಡರು. ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ, ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು‌ ಮಾತ್ರ ಅವರು ಹೇಳಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುಳ್ಳು ಲೆಕ್ಕದಿಂದ ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ ಮುಖ್ಯಮಂತ್ರಿಯವರು ರೋಗಲಕ್ಷಣಗಳಿಲ್ಲದವರ ಕೊರೊನಾ ಪರೀಕ್ಷೆ‌ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು‌ ಒತ್ತಾಯಿಸಿದ್ದಾರೆ. ಕರೋನಾವನ್ನು‌ ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...