ಲೋಕಸಭಾ (Lokasabha) ಚುನಾವಣೆಗೆ ತಯಾರಿ ಆರಂಭವಾಗಿದ್ದು, 5 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಬಿಜೆಪಿ (BJP) ಸರ್ವೇ ಕಾರ್ಯ ಆರಂಭಿಸಿದೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.
ಕನಿಷ್ಠ ಮೂರು ಕ್ಷೇತ್ರಗಳಲ್ಲಿ ಮಹಿಳೆಯರಿಗೆ (Woman) ಟಿಕೆಟ್ ಕೊಡಲು ಹೈಕಮಾಂಡ್ ತಂತ್ರ ರೂಪಿಸಿದೆ. ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವರಿಷ್ಠರು ಸರ್ವೇ ನಡೆಸುತ್ತಿದ್ದಾರೆ. ಈ ಮೂಲಕ ಬೆಂಗಳೂರಿನ 2 ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಾದರೂ ಮಹಿಳೆಯರಿಗೆ ಟಿಕೆಟ್ ನೀಡುವ ಪ್ಲಾನ್ ಅನ್ನು ಬಿಜೆಪಿ ಮಾಡಿಕೊಂಡಿದೆ.
ಇತ್ತ ಉತ್ತರ ಕನ್ನಡ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರಗಳಲ್ಲಿಯೂ ಸರ್ವೇ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾದಲ್ಲಿ ಹಾಲಿ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಮತ್ತೊಮ್ಮೆ ಟಿಕೆಟ್ ಕೊಡಬೇಕಾ ಎನ್ನುವ ಬಗ್ಗೆಯೂ ಸರ್ವೇ ನಡೆಯುತ್ತಿದೆ ಎನ್ನಲಾಗಿದೆ
ಒಟ್ಟಾರೆ ಕಾಂಗ್ರೆಸ್ ಗ್ಯಾರಂಟಿ ಅಸ್ತ್ರಕ್ಕೆ ಮಹಿಳಾ ಗ್ಯಾರಂಟಿ ಅಸ್ತ್ರ ಪ್ರಯೋಗ ಮಾಡಲು ಬಿಜೆಪಿ ಯೋಜನೆ ರೂಪಿಸಿಕೊಂಡಿದೆ. ಕನಿಷ್ಠ ಮೂರು ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಟಾರ್ ಮಹಿಳೆಯರೇ ಸ್ಪರ್ಧೆ ಮಾಡ್ತಾರಾ ಎನ್ನುವ ಪ್ರಶ್ನೆ ಮೂಡಿದೆ.