ಬೆಂಗಳೂರು : ಪಶ್ಚಿಮ ಬಂಗಾಳದಲ್ಲಿ ಬಹುಮತ ಸಾಧಿಸಿರುವ ಬಿಜೆಪಿ ಸರ್ಕಾರ ರಚನೆಗೂ ಮುನ್ನವೇ ಹಿಂಸಾಚಾರಕ್ಕೆ ಕಾರಣವಾಗುತ್ತಿದೆ. ಬಿಜೆಪಿಯ ಗೆಲುವಿನ ಬಳಿಕ ಪೂರ್ವ ರಾಜ್ಯದಲ್ಲಿ ತೀವ್ರ ಹಿಂಸಾಚಾರ ಮುಂದುವರೆದಿದೆ. ಕಳೆದ ಮೂರು ದಿನಗಳಿಂದಲೂ ಬಂಗಾಳದಲ್ಲಿ ಟಿಎಂಸಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾ ಮಾರಿ ಸೇರಿದಂತೆ ಗಲಭೆಗಳು ಜೋರಾಗಿವೆ. ಇಷ್ಟೇ ಅಲ್ಲದೆ ಕೋಲ್ಕತ್ತಾ ಸೇರಿದಂತೆ ಬಹುತೇಕ ಬಂಗಾಳದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಟಿಎಂಸಿ ಪಕ್ಷದ ಕಚೇರಿಗಳನ್ನು ಧ್ವಂಸ ಮಾಡಿದ್ದಾರೆ.

ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆಗಳನ್ನು ನಡೆಸುತ್ತಿದ್ದಾರೆ. ಈ ರೀತಿಯ ಗಲಾಟೆಯಲ್ಲಿ ಬಿಜೆಪಿ ಹಾಗೂ ಟಿಎಂಸಿ ಪಕ್ಷದ ಕಾರ್ಯಕರ್ತರು ಬಲಿಯಾಗಿದ್ದಾರೆ. ಸದ್ಯ ಪಶ್ಚಿಮ ಬಂಗಾಳದಲ್ಲಿ ಚುನಾವಣೆಗೂ ಮುನ್ನ ಅಧಿಕಾರದಲ್ಲಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ದೌರ್ಜನ್ಯ ನಡೆಸುತ್ತಿದ್ದಾರೆ. ಇದರಿಂದ ಬಂಗಾಳದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ.
ಕಳೆದ ಏಪ್ರಿಲ್ 23 ಹಾಗೂ 29ರಂದು ನಡೆದಿದ್ದ ಎರಡು ಹಂತಗಳ ಚುನಾವಣೆ ಫಲಿತಾಂಶದಲ್ಲಿ 294 ಸದಸ್ಯರ ವಿಧಾನಸಭೆಯಲ್ಲಿ ಟಿಎಂಸಿ 80 ಸ್ಥಾನಗಳನ್ನು ಗೆದ್ದಿತು, ಆದರೆ ಬಿಜೆಪಿ 207 ಸ್ಥಾನಗಳ ಬಹುಮತವನ್ನು ಗಳಿಸಿತು. ಬ್ಯಾನರ್ಜಿ ತಮ್ಮ ಭವಾನಿಪುರ ಸ್ಥಾನವನ್ನು ಸಹ ಕಳೆದುಕೊಂಡರು, ಇದು ಗಮನಾರ್ಹ ವೈಯಕ್ತಿಕ ಮತ್ತು ರಾಜಕೀಯ ಹಿನ್ನಡೆಯಾಗಿದೆ. ದೀದಿ ಸೋಲಿನ ಬಳಿಕ ಮತ್ತಷ್ಟು ಉತ್ಸಾಹದಲ್ಲಿರುವ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ದಿನಕ್ಕೊಂದರಂತೆ ಅಟ್ಟಹಾಸ ಮೆರೆಯುತ್ತಿದ್ದಾರೆ. ಟಿಎಂಸಿ ಕಚೇರಿಗೆ ಬುಲ್ಡೋಜರ್ ನುಗ್ಗಿಸಿ ನೆಲಸಮ ಮಾಡುವ ಮೂಲಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದ.
ಇದನ್ನೂ ಓದಿ : ತಮಿಳುನಾಡಿನಲ್ಲಿ ಸೋಟಕ ರಾಜಕೀಯ ಬೆಳವಣಿಗೆ : ಟಿವಿಕೆಗೆ ಕಾಂಗ್ರೆಸ್ ಷರತ್ತು ಬದ್ಧ ಬೆಂಬಲ..!
ಚುನಾವಣೆಯ ಸಂದರ್ಭದಲ್ಲಿ ಎರಡೂ ಪಕ್ಷಗಳು ಮತದಾರರಲ್ಲಿ ಧರ್ಮದ ಹಾಗೂ ಜಾತಿಯ ಅಮಲನ್ನೇರಿಸಿದ್ದರು. ಬಿಜೆಪಿ ಹಿಂದೂತ್ವದ ಅಜೆಂಡಾದೊಂದಿಗೆ ಜನರ ಮೈಂಡ್ ವಾಷ್ ಮಾಡುವ ಕೆಲಸಕ್ಕೆ ಮುಂದಾಗಿತ್ತು. ಇದಕ್ಕೆ ವಿರುದ್ಧವಾಗಿ ಟಿಎಂಸಿಯು ಕೇಂದ್ರ ಸರ್ಕಾರದ ವೈಫಲ್ಯಗಳು ಹಾಗೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ನೇರ ವಾಗ್ದಾಳಿ ನಡೆಸಿತ್ತು. ಮತದಾರರ ಪಟ್ಟಿ ಪರಿಷ್ಕರಣೆಯ ಸಮಯದಲ್ಲಿ ಸುಮಾರು 90 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ ಎಂದು ಆರೋಪಿಸಿತ್ತು, ಕೇಂದ್ರ ಪಡೆಗಳು ಟಿಎಂಸಿ ಏಜೆಂಟ್‌ಗಳು ಮತ್ತು ಅಭ್ಯರ್ಥಿಗಳನ್ನು ಎಲ್ಲಾ ಜಿಲ್ಲೆಗಳಲ್ಲಿ ಗುರಿಯಾಗಿಸಿಕೊಂಡಿವೆ, ಬೆದರಿಕೆ ಹಾಕಿದ್ದಾರೆ ಎಂದು ಖುದ್ದು ಮಮತಾ ಬ್ಯಾನರ್ಜಿ ದೂರಿದ್ದರು.
ಇನ್ನೂ ಚುನಾವಣೆಯ ಸೋಲಿನ ಬಳಿಕ ಮಮತಾ ಬ್ಯಾನರ್ಜಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಚುನಾವಣಾ ಫಲಿತಾಂಶವನ್ನು ಕಾನೂನುಬದ್ಧ ಸೋಲು ಎಂದು ಒಪ್ಪಿಕೊಳ್ಳುವುದಿಲ್ಲ. ಹಿನ್ನಡೆಯ ಹೊರತಾಗಿಯೂ ತಮ್ಮ ರಾಜಕೀಯ ಹೋರಾಟವನ್ನು ಮುಂದುವರಿಸುವುದಾಗಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.
ದೊಡ್ಡ ಪ್ರಮಾಣದ ರಿಗ್ಗಿಂಗ್, ಮತದಾರರ ಪಟ್ಟಿ ತಿರುಚಿರುವುದು ಮತ್ತು ವ್ಯಾಪಕ ಹಿಂಸಾಚಾರ ನಡೆದಿದೆ. ಬಿಜೆಪಿ 100 ಸ್ಥಾನಗಳನ್ನು ಕಳ್ಳತನ ಮಾಡಿದೆ, ಇದು ಪ್ರಜಾಪ್ರಭುತ್ವದ ಕೊಲೆ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಚುನಾವಣಾ ಫಲಿತಾಂಶವನ್ನು ತಿರಸ್ಕರಿಸಿರುವ ಮಮತಾ ಬ್ಯಾನರ್ಜಿ, ಬಿಜೆಪಿ ವಿರುದ್ಧ ಮಾತ್ರ ಹೋರಾಡುತ್ತಿಲ್ಲ, ಆದರೆ ಇಡೀ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದೆ. ಮತದಾನ ಮತ್ತು ಎಣಿಕೆಯ ಸಮಯದಲ್ಲಿ ಭಾರತದ ಚುನಾವಣಾ ಆಯೋಗ ಮತ್ತು ಕೇಂದ್ರ ಪಡೆಗಳನ್ನು ಒಳಗೊಂಡ ಪಕ್ಷಪಾತ ನೀತಿ ಅನುಸರಿಸಿದೆ. ನಮ್ಮ ಹೋರಾಟ ಇನ್ನಷ್ಟು ಗಟ್ಟಿಯಾಗಲಿದೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.






