• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, November 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Lakhsmi Hebbalkar:ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
August 16, 2025
in Top Story, ಕರ್ನಾಟಕ, ರಾಜಕೀಯ
0
Lakhsmi Hebbalkar:ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Share on WhatsAppShare on FacebookShare on Telegram
  • ಯುವ ಕಾಂಗ್ರೆಸ್ ಕಾರ್ಯಕರ್ತರ ಪದಗ್ರಹಣ ಸಮಾರಂಭದಲ್ಲಿ ಹೇಳಿಕೆ
  • ಯುವ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಕೆಲಸ ಮಾಡಬೇಕು ಉಡುಪಿ: ಬಿಜೆಪಿ‌ಯವರು ಮಾಡಿದ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಹಿನ್ನಡೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಉಡುಪಿಯ ಕೆ.ಎಂ.ಮಾರ್ಗ ಬಳಿಯಿರುವ ಎಲ್ಐಸಿ ಡೈಮಂಡ್ ಜುಬಿಲಿ ಹಾಲ್‌ನಲ್ಲಿ ಶುಕ್ರವಾರ ನಡೆದ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷದ ಶಕ್ತಿ ಕುಂದಿಲ್ಲ ಎಂದರು.

ADVERTISEMENT
79th Independence Day : ಮಳೆಯಲ್ಲೇ ಅಬ್ಬರಿಸಿದ ರಾಹುಲ್ ಗಾಂಧಿ, ಖರ್ಗೆ.. #pratidhvani

ವಿಧಾನಸಭೆ ಚುನಾವಣೆಯಲ್ಲಿ135 ಸೀಟುಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ, ನಮಗೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಆಯಿತು. ಇದಕ್ಕೆ ಕಾರಣ ಮತಗಳ್ಳತನ. ಮುಂದೆ ನಡೆಯುವ ಬಿಹಾರ‌ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವನ್ನು ಸೋಲಿಸುವ ಸಲುವಾಗಿ ಈಗಾಗಲೇ 85 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ. ಕೈಬಿಟ್ಟ ಮತದಾರರ ಪಟ್ಟಿಯನ್ನು ನೀಡದೆ, ಚುನಾವಣಾ ಆಯೋಗ ಪರೋಕ್ಷವಾಗಿ ಬಿಜೆಪಿಗೆ ಬೆಂಬಲಿಸುತ್ತಿದೆ ಎಂದು ಸಚಿವರು ಆರೋಪಿಸಿದರು.

ಭಾರತದ ಇತಿಹಾಸ ಬೇರೆ ಅಲ್ಲ, ಕಾಂಗ್ರೆಸ್ ಇತಿಹಾಸ ಬೇರೆ ಅಲ್ಲ, ನಮ್ಮ ಯುವಕರ ಸಾಮರ್ಥ್ಯ ಬೇರೆ ಅಲ್ಲ, ಕಾಂಗ್ರೆಸ್ ಪಕ್ಷದ ಸಾಮರ್ಥ್ಯ ಬೇರೆ ಅಲ್ಲ. ಇಂದು ನೀವೆಲ್ಲ 50ನೇ ವರ್ಷದ ಸಂಭ್ರಮದಲ್ಲಿದ್ದೀರಿ. 50 ವರ್ಷದ ಈ ದೇಶದ ಇತಿಹಾಸ, ಕಾಂಗ್ರೆಸ್ ಪಕ್ಷದ ಇತಿಹಾಸಕ್ಕೆ ಯುವ ಕಾಂಗ್ರೆಸ್ ಸಾಕ್ಷಿಯಾಗಿದೆ ಎಂದು‌ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಪಕ್ಷಕ್ಕೆ ಕಳೆದ ಚುನಾವಣೆಯಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಿರಬಹುದು.
ಆದರೆ ಅದು ಶಾಶ್ವತವಲ್ಲ, ನಿಮ್ಮೆಲ್ಲರ ಈಗಿನ ಉತ್ಸಾಹ ನೋಡಿದರೆ ಮತ್ತೆ ಫಿನಿಕ್ಸ್ ಪಕ್ಷಿಯಂತೆ ಪಕ್ಷ ಪುಟಿದೇಳುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು.

ಎಲ್ಲರೂ ಕೊಟ್ಟ ಜವಾಬ್ದಾರಿಯನ್ನು ನಿಭಾಯಿಸಬೇಕು. ಬಹಳಷ್ಟು ಯುವಕರಿಗೆ ತಮ್ಮ ಶಕ್ತಿಯ ಅರಿವಿಲ್ಲ‌. ಯಾರೋ ಮಾಡುವ ಟೀಕೆಗಳಿಗೆ ಹೆದರಬಾರದು. ನಿಮ್ಮ ಏರಿಯಾ, ಬೂತ್ ಮಟ್ಟದಲ್ಲಿ ನೀವು ಪ್ರಬಲವಾಗಿ ಬೆಳೆಯಬೇಕು. ನೀವು ಮಾಡುವ ಕೆಲಸಗಳು ಜನರ ಮನಸ್ಸನ್ನು ಗೆಲ್ಲಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಮಾರಂಭದಲ್ಲಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರ್, ಎಂ.ಎ.ಗಫೂರ್, ‌ಪ್ರಸಾದ್ ಕಾಂಚನ್, ರಮೇಶ್ ಕಾಂಚನ್, ಕಿಶನ್ ಶೆಟ್ಟಿ, ಹರೀಶ್ ಕಿಣಿ, ದೀಪಕ್ ಕೊಟ್ಯನ್, ಭುಜಂಗ ಶೆಟ್ಟಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

Tags: BJPCongress Partylakshmi hebbalkar​Lakshmi hebbalkarlakshmi hebbalkar​​lakshmi hebbalkar belgaumlakshmi hebbalkar brotherlakshmi hebbalkar cricketlakshmi hebbalkar dancelakshmi hebbalkar dancinglakshmi hebbalkar familylakshmi hebbalkar healthlakshmi hebbalkar historylakshmi hebbalkar newslakshmi hebbalkar reactionlakshmi hebbalkar speachlakshmi hebbalkar speechlakshmi hebbalkar twitterlakshmi hebbalkar videolakshmi hebbalkar wikiMinister Lakshmi Hebbalkarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಂವಿಧಾನದ ಕನಸುಗಳೂ ಸ್ವಾತಂತ್ರ್ಯದ ಫಲಿತಗಳೂ

Next Post

ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ೭೯ನೇ ಸ್ವಾತಂತ್ರ್ಯ ದಿನ ಆಚರಣೆ ಸಂಭ್ರಮ

Related Posts

Energy Conservation Awareness: KREDL Observes ‘BRICS Sustainable Lifestyle Week–2026
Top Story

ಇಂಧನ ಸಂರಕ್ಷಣೆ ಜಾಗೃತಿ: ಕ್ರೆಡಲ್‌ನಿಂದ ‘ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ–2026’ ಆಚರಣೆ

by Shivakumar
November 8, 2026
0

ಬೆಂಗಳೂರು: ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ–2026 (BRICS Sustainable Lifestyle Week-2026) ಅಂಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (KREDL - KREDL) ಕಚೇರಿಯಲ್ಲಿ ಆಯೋಜಿಸಲಾಗಿದ್ದ...

Read moreDetails
Centre responsible for ethanol confusion: Minister M.B. Patil demands high-level probe

ಎಥೆನಾಲ್ ಗೊಂದಲಕ್ಕೆ ಕೇಂದ್ರವೇ ಹೊಣೆ: ಉನ್ನತ ಮಟ್ಟದ ತನಿಖೆಗೆ ಸಚಿವ ಎಂ.ಬಿ. ಪಾಟೀಲ ಆಗ್ರಹ

November 8, 2026
First PUC Annual Examination: Question papers to be prepared at the state level starting from 2027!

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ : 2027 ರಿಂದ ರಾಜ್ಯಮಟ್ಟದಲ್ಲೇ ಪ್ರಶ್ನೆಪತ್ರಿಕೆ ಸಿದ್ಧ!

November 8, 2026
Hassan DC Lata Kumari hits back at Kumaraswamy’s allegations

ಕುಮಾರಸ್ವಾಮಿ ಆರೋಪಕ್ಕೆ ಹಾಸನ ಡಿಸಿ ಲತಾಕುಮಾರಿ ತಿರುಗೇಟು : ಸುಳ್ಳು ಹಬ್ಬಿಸಿದರೆ ಕಠಿಣ ಕ್ರಮದ ಎಚ್ಚರಿಕೆ

November 8, 2026
SHOCKING: Thieves snatch gold earring from elderly woman sitting outside her home and flee; shocking video goes viral.

SHOCKING : ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಚಿನ್ನದ ಓಲೆ ಕಿತ್ತು ಕಳ್ಳರು ಎಸ್ಕೇಪ್ : ಆಘಾತಕಾರಿ ವಿಡಿಯೋ ವೈರಲ್

November 8, 2026
Next Post
ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ೭೯ನೇ ಸ್ವಾತಂತ್ರ್ಯ ದಿನ ಆಚರಣೆ ಸಂಭ್ರಮ

ಜೆಡಿಎಸ್‌ ರಾಜ್ಯ ಕಚೇರಿ ಜೆಪಿ ಭವನದಲ್ಲಿ ೭೯ನೇ ಸ್ವಾತಂತ್ರ್ಯ ದಿನ ಆಚರಣೆ ಸಂಭ್ರಮ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada