ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಂದಿನ ತಿಂಗಳು ನಡೆಯಲಿರುವ ಉತ್ತರಪ್ರದೇಶ ಚುನಾವಣೆಯಲ್ಲಿ ತಮ್ಮ ತವರು ಕ್ಷೇತ್ರ ಗೋರಖ್ಪುರ ನಗರದಿಂದ ಸ್ಪರ್ಧಿಸುತ್ತಿದ್ದಾರೆ.
ಶನಿವಾರ ಬಿಡುಗಡೆಯಾದ ಮೊದಲ ಹಂತದ ಪಟ್ಟಿಯಲ್ಲಿ ಯೋಗಿ ಹೆಸರನ್ನು ಸಹ ಘೋಷಿಸಲಾಗಿದೆ. ಮಾರ್ಚ್ 3ರಂದು ಆರನೇ ಹಂತದಲ್ಲಿ ಗೋರಖ್ಪುರ್ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಈ ಹಿಂದೆ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸುತ್ತಾರೆ ಎಂದು ವ್ಯಾಪಕವಾಗಿ ಕೇಳಿ ಬಂದಿತ್ತು. ಆದರೆ ಕಡೇ ಕ್ಷಣದಲ್ಲಿ ಅವರು ಕ್ಷೇತ್ರ ಬದಲಾಯಿಸಿದ ಕಾರಣ ಅಂತಿಮವಾಗಿ ಗೋರಖ್ಪುರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಕೇಳಿ ಬಂದಿತ್ತು. ಆದರೆ ಕಡೇ ಕ್ಷಣದಲ್ಲಿ ಅವರು ಕ್ಷೇತ್ರ ಬದಲಾಯಿಸಿದ ಕಾರಣ ಅಂತಿಮವಾಗಿ ಗೋರಖ್ಪುರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಇತ್ತ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರಯಾಗ್ರಾಜ್ನ ಸಿರಹಟ್ಟು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.