• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BK Hariprasad : ಕೈ ತಪ್ಪಿದ ಸಚಿವ ಸ್ಥಾನ : ಸಿಎಂ ಸಿದ್ದುಗೆ ಬಿ.ಕೆ.ಹರಿಪ್ರಸಾದ್‌ ಪರೋಕ್ಷ ಟಾಂಗ್..!​

Any Mind by Any Mind
May 27, 2023
in Top Story, ಕರ್ನಾಟಕ, ರಾಜಕೀಯ
0
BK Hariprasad : ಕೈ ತಪ್ಪಿದ ಸಚಿವ ಸ್ಥಾನ : ಸಿಎಂ ಸಿದ್ದುಗೆ ಬಿ.ಕೆ.ಹರಿಪ್ರಸಾದ್‌ ಪರೋಕ್ಷ ಟಾಂಗ್..!​
Share on WhatsAppShare on FacebookShare on Telegram

ಬೆಂಗಳೂರು  :‌ ಮೇ.೨೭: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಸ್ಥಾನ ಸಿಕ್ಕಿಲ್ಲ. ಇದ್ರಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಅವರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರು. ಆದ್ರೆ ಅವರಿಗೆ ಸ್ಥಾನ ಮೀಸ್‌ ಆಗಿದೆ. ಸೈದ್ಧಾಂತಿಕವಾಗಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತ ಬಂದಿರುವ ಹರಿಪ್ರಸಾದ್​ ಅವರಿಗೆ ಕಾಂಗ್ರೆಸ್​ ಹೈಕಮಾಂಡ್​ ನಿರಾಸೆ ಮೂಡಿಸಿದ್ದು, ಇದ್ರ ಬೆನ್ನಲ್ಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಗಳು ಸುಳ್ಳು ಎಂದು ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಮಾಧ್ಯಮಗಳ ಜೊತೆ ಮಾತನಾಡಿರುವ  ಹರಿಪ್ರಸಾದ್,​ ತಾವು ಯಾವುದೇ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿಲ್ಲ. ಇದೆಲ್ಲ ವಾಟ್ಸ್​ಆ್ಯಪ್​ ಯೂನಿವರ್ಸಿಟಿಯಲ್ಲಿ ಹುಟ್ಟಿಕೊಂಡಿರುವ ವಿಷಯ ಎಂದು ವದಂತಿಗಳಿಗೆ ತೆರೆ ಎಳೆದಿದ್ದಾರೆ.

ಸಿಎಂ ಸಿದ್ದು ಪರೋಕ್ಷವಾಗಿ ಟಾಂಗ್ ಕೊಟ್ಟ ಬಿಕೆ ಹರಿಪ್ರಸಾದ್​

ನಾನೂ ಕಾಂಗ್ರೆಸ್ ಪಕ್ಷ ಕಟ್ಟಿ‌, ಬೆಳೆಸಿದವನು ಸ್ವಂತ ಮನೆಯಲ್ಲಿ ಇರುವವನು, ಬಾಡಿಗೆ ಮನೆ ತಗೊಂಡು ಬಂದವನು ಅಲ್ಲ. ನನ್ನ ಸಾಮಾಜಿಕ ನ್ಯಾಯಕ್ಕೂ, ಅಹಿಂದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ನಾನು ಯೋಚನೆ ಮಾಡುವ ಸಾಮಾಜಿಕ ನ್ಯಾಯ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ಹಕ್ಕು ಎಂದು ಬಿ.ಕೆ.ಹರಿಪ್ರಸಾದ್‌ ತಿಳಿಸಿದರು. ಅಹಿಂದ ಅಂತ ನಾನು ಯೋಚನೆ ಮಾಡಲ್ಲ. ಕಾಂಗ್ರೆಸ್‌ನ ಸಿದ್ದಾಂತ ಸರ್ವಧರ್ಮ ಸಮಾನ ಎಂದು ನಂಬಿದವನು ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರೇಳದೆ ಹರಿಪ್ರಸಾದ್​ ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ.

ಕಾಲ ಬಂದಾಗ ಹೇಳ್ತೀನಿ

‌ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ರೀತಿಯ ವಿಚಾರ ನಡೆಯುತ್ತಿರುತ್ತೆ. ಕಾಲ ಬಂದಾಗ ಅದನೆಲ್ಲ ಹೇಳ್ತೀನಿ. ಅಧಿಕಾರ ಹಂಚಿಕೆ ಗೊತ್ತಿರುವುದು ಕೇವಲ ಏಳು ಜನರಿಗೆ ಮಾತ್ರ. ಉಳಿದವರುಹೇಳುತ್ತಿರುವುದು ಸುಳ್ಳು ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ.

ಸಚಿವ ಸ್ಥಾನ ಕೈ ತಪ್ಪಿದ ವಿಚಾರವಾಗಿ ಪ್ರತಿಕ್ರಿಯಿಸಿ ಅದು ಮುಖ್ಯಮಂತ್ರಿಗಳ ಪರಮಾಧಿಕಾರ ಎಲ್ಲರೂ ಅವರವರ ರೀತಿಯಲ್ಲಿ ಪಕ್ಷಕ್ಕಾಗಿ ದುಡಿದಿರುತ್ತಾರೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ. ಟೈಮ್ ಇಸ್ ದ ಮೆಡಿಸಿನ್ ಕಾಲ ಬಂದಾಗ ಎಲ್ಲ ಹೇಳ್ತೀನಿ. ಪಕ್ಷದಲ್ಲಿ ಸಕ್ರಿಯ ವಾಗಿರುವವರಿಗೆ ಮಣೆ ಹಾಕುವುದು ಪದ್ದತಿ. ಸಾಂಧರ್ಬಿಕವಾಗಿ ನಾನು ಹೇಳ ಬೇಕಾದಾಗ ಹೇಳ್ತೀನಿ ಎಂದು ಬಿ.ಕೆ. ಹರಿಪ್ರಸಾದ್‌ ಅವರು ಹೊಸ ಬಾಂಬ್​ ಒಂದನ್ನು ಸಿಡಿಸಿದ್ದಾರೆ.

Tags: BJP GovernmentBJP PartyBK Hariprasadbsbommaicabinet expansioncmsiddaramiahcongressvsbjpdcmDCM DK ShivakumarDKSDKShivakumarlatestnewslivenewsPMModisiddaramaiah
Previous Post

DCM DK Shivakumar | ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ನಾಯಕರು ಮುನಿಸು ; ಡಿಸಿಎಂ ಡಿಕೆಶಿ ಏನಂದ್ರು ಗೊತ್ತಾ?

Next Post

ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ : ಸ್ಪಷ್ಟನೆ ನೀಡಿದ ಕೆಪಿಸಿಸಿ

Related Posts

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ
Top Story

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

by ಪ್ರತಿಧ್ವನಿ
April 30, 2026
0

ದಶಕದ ಹಿಂದೆ ರಾಜ್ಯವನ್ನೇ ಕಂಗೊಳಿಸಿದ್ದ ಧರ್ಮಸ್ಥಳದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಪ್ರಕರಣದ...

Read moreDetails
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
Next Post
CM Siddaramaiah Record : ಹದಿನೈದು ದಿನಗಳಲ್ಲಿ ಪೂರ್ಣ ಸರ್ಕಾರ ಅಸ್ತಿತ್ವಕ್ಕೆ ; ದಾಖಲೆ ಬರೆದ CM ಸಿದ್ದರಾಮಯ್ಯ

ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿಲ್ಲ : ಸ್ಪಷ್ಟನೆ ನೀಡಿದ ಕೆಪಿಸಿಸಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada