ಮೈಸೂರು : ವರುಣ ಕ್ಷೇತ್ರದಲ್ಲಿಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಆರೋಪಗಳ ಸುರಿಮಳೆಗೈದ ಸಿದ್ದರಾಮಯ್ಯ , ಸಂತೋಷ್ಗೆ ನಾನು ಸೋಲಬೇಕು ಎಂಬ ಉದ್ದೇಶವಿದೆ. ಇದೇ ದ್ವೇಷದಿಂದ ಅವರು ಸೋಮಣ್ಣರನ್ನು ವರುಣಾಗೆ ಕರೆ ತಂದಿದ್ದಾರೆ ಎಂದಿದ್ದಾರೆ.

ಯಾವತ್ತೂ ದ್ವೇಷದ ರಾಜಕಾರಣ ಮಾಡಬಾರದು. ಜನರ ಲೆಕ್ಕಾಚಾರ ಏನು ಅನ್ನೋದು ಸದ್ಯದಲ್ಲಿಯೇ ತಿಳಿಯಲಿದೆ ಎಂದು ಸಿದ್ದರಾಮಯ್ಯ ಗುಡುಗಿದ್ರು.
ಬಿಜೆಪಿಯಿಂದ ವಿ.ಸೋಮಣ್ಣ ಕಣಕ್ಕಿಳಿದ ಬಳಿಕ ಸಿದ್ದರಾಮಯ್ಯ ವರುಣ ಕ್ಷೇತ್ರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಬೇರೆ ಯಾವುದೇ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕೆ ಇಳಿಯದ ಸಿದ್ದರಾಮಯ್ಯ ವರುಣ ಕ್ಷೇತ್ರದ ಗೆಲುವಿನ ಮೇಲೆ ತಮ್ಮ ಚಿತ್ತ ನೆಟ್ಟಿದ್ದಾರೆ.