ಒಂದೇ ಮಾಸ್ಕ್ ಅನ್ನು 2 ರಿಂದ 3 ವಾರಗಳ ಕಾಲ ಬಳಸಿದರೆ ‘ಬ್ಲ್ಯಾಕ್ ಫಂಗಸ್’ ಬರುತ್ತೆ.!: ಏಮ್ಸ್ ವೈದ್ಯ

ಕರೋನ ನಂತದ ಒಂದಾದರೊಂದು ಸಂಕಷ್ಟದಲ್ಲಿ ಸಿಲುಕುತ್ತಿರುವ ನಾಡಿನ ಜನರಿಗೆ ಈಗ ಬ್ಲಾಕ್ ಫಂಗಸ್ ಎಂಬ ಮತ್ತೊಂದು ಮಹಾಮಾರಿಯದ್ದೆ ಚಿಂತೆ. ಈ ಫಂಗಸ್ ಕುರಿತು ಮತ್ತೊಂದು ಸುದ್ದಿ ಹೊರಬಿದ್ದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಹೆಚ್ಚಾಗಿ ಬ್ಲಾಕ್ ಫಂಗಸ್ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೀಡು ಮಾಡಿದ್ದು ಈ ಸಂಬಂಧ ಏಮ್ಸ್​​​ನ ನ್ಯೂರೋಸರ್ಜನ್​​​ ವೈದ್ಯ ಡಾ. ಶರತ್ ಚಂದ್ರ, ಸತತ 2ರಿಂದ 3 ವಾರಗಳ ಕಾಲ ಒಂದೇ ಮಾಸ್ಕನ್ನು ಧರಿಸುವುದರಿಂದಲೂ ಬ್ಲ್ಯಾಕ್​​ ಫಂಗಸ್​​ ಬರುತ್ತದೆ ಎಂದು ಹೇಳಿದ್ದಾರೆ. ಸತತ ಒಂದೇ ಮಾಸ್ಕನ್ನು ಧರಿಸುವುದರಿಂದ ಫಂಗಸ್​​ ಬರುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಸಿದ್ದಾರೆ.

ಸ್ವಚ್ಛಗೊಳಿಸದೆ ಒಂದೇ ಮಾಸ್ಕ್ ಅನ್ನು ಪದೆ ಪದೆ ಉಪಯೋಗ ಮಾಡುವುದರಿಂದ ಸುಲಭವಾಗಿ ಫಂಗಸ್ ಬೆಳೆಯುತ್ತದೆ. ಆದ್ದರಿಂದ ಸೋಂಕಿತರಲ್ಲಿ ಬ್ಲ್ಯಾಕ್​ ಫಂಗಸ್​ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಅನಿಯಂತ್ರಿತ ಮಧುಮೇಹ, ಅತಿಯಾದ ಸ್ಟಿರಾಯಿಡ್​​ ಬಳಕೆ, ಮೆಡಿಕಲ್​ ಆಕ್ಸಿಜನ್​​ ಪಡೆದವರು ಸೋಂಕಿತರಾದ 6 ತಿಂಗಳುಗಳ ಒಳಗೆ ಬ್ಲ್ಯಾಕ್​​ ಫಂಗಸ್​ಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಎಂದು ಏಮ್ಸ್​​ ವೈದ್ಯರು ಮಾಹಿತಿ ನೀಡಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...