ಬ್ಲಾಕ್​ ಫಂಗಸ್: ರಾಜ್ಯದಲ್ಲಿ ಔಷಧ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ -ಹೆಚ್‌ಡಿಕೆ

ದೇಶದಲ್ಲಿ ಕೋವಿಡ್ -19 ರ ಎರಡನೇ ಅಲೆಯ ಹಟ್ಟಹಾಸದ ಮಧ್ಯೆಯೇ ಚೇತರಿಸಿಕೊಳ್ಳುತ್ತಿರುವ ಕೋವಿಡ್‌ ರೋಗಿಗಳಲ್ಲಿ ಶೀಲೀಂದ್ರ ಸೋಂಕು ಕೂಡ ಕಾಣಿಸಿಕೊಳ್ಳುತ್ತಿದೆ.ಈ ಸೋಂಕು ಪ್ರಾಣಾಪಾಯ ಸೃಷ್ಟಿಸುವ ಸಾಧ್ಯತೆಯಿದೆ ಇದನ್ನು ನಿರ್ಲಕ್ಷಿಸದಂತೆ ವೈದ್ಯರು ತಿಳಿಸಿದ್ದು, ಈ ಸೋಂಕು ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಪ್ರಕರಣಗಳು ವರದಿಯಾಗುತ್ತಿವೆ.  ಈ ಸಂಬಂಧ  ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಕಪ್ಪು ಶಿಲೀಂಧ್ರ ಸಮಸ್ಯೆ ಮಹಾರಾಷ್ಟ್ರದಲ್ಲಿ ಹಲವು ತಿಂಗಳಿಗೆ ಮೊದಲೇ ಕಾಣಿಸಿಕೊಂಡಿತ್ತು. ಸಮಸ್ಯೆ ಇಲ್ಲಿಯೂ ಕಾಣಿಸಿಕೊಳ್ಳುವ ಅಪಾಯದ ಬಗ್ಗೆ ತಜ್ಞರು ಹೇಳುತ್ತಲೇ ಬಂದಿದ್ದಾರೆ. ಈ ಸಮಸ್ಯೆ ದೊಡ್ಡದಾಗುವ ಎಚ್ಚರಿಕೆಗಳಿದ್ದರೂ ಔಷಧದ ವ್ಯವಸ್ಥೆ ಮಾಡದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಔಷಧ ಸಂಗ್ರಹ ಈ ಹೊತ್ತಿನ ಅಗತ್ಯ ಎಂದು ರಾಜ್ಯ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಇದು ಸಂದಿಗ್ಧ ಕಾಲದ ಸೂಕ್ತ ಸಲಹೆ ಎಂದು ಎಲ್ಲರೂ ಭಾವಿಸಿಕೊಳ್ಳಬೇಕು. ಹಲವು ದಿನಗಳಿಂದ ಸರ್ಕಾರಕ್ಕೆ ನಾನು ನೀಡಿದ ಸಲಹೆಗಳನ್ನು ಕೆಲ ಕಿಡಿಗೇಡಿಗಳು ‘ರಾಜಕೀಯ’ವೆಂದು ಭಾವಿಸಿದ್ದಾರೆ. ಪಿಡುಗೊಂದು ಕಾಡುವಾಗ ‘ಹಿಂದೆಂದೂ ನೋಡಿರದಷ್ಟು ಜನಸ್ತೋಮ’ ಸೇರಿಸಿ ಯಾರ್ಲಿ ಮಾಡಿದ್ದು, ಜನರನ್ನು ಕಂಡು ಉದ್ಘಾರಿಸಿದ್ದು ನಾವಲ್ಲ ಎಂಬುದು ಅರಿವಲ್ಲಿರಲಿ ಎಂದು ಸರ್ಕಾರಕ್ಕೆ ಪರೋಕ್ಷವಾಗಿ ಚಾಟಿಬೀಸಿದ್ದಾರೆ.

ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ ಎಂದು ಕುಮಾರಸ್ವಾಮಿ ಕಳವಳವ್ಯಕ್ತಪಡಿಸಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...