Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

ತನಗೇನಾದರೂ ಸಂಭವಿಸಿದರೆ ಸರ್ಕಾರ ಹೊಣೆ: Z+ ಭದ್ರತೆ ಹಿಂಪಡೆದ ಕೇಂದ್ರದ ವಿರುದ್ಧ J&K ಮಾಜಿ ರಾಜ್ಯಪಾಲ ಕಿಡಿ

ಪ್ರತಿಧ್ವನಿ

ಪ್ರತಿಧ್ವನಿ

March 14, 2023
Share on FacebookShare on Twitter

ತಮಗಿದ್ದ ಝಡ್+ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿರುವುದರ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್   ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2019 ರ ಆಗಸ್ಟ್‌ನಲ್ಲಿ ಕೇಂದ್ರವು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ, ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದಾಗ ಸತ್ಯಪಾಲ್ ಮಲಿಕ್ ಅವರು ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು.

ಹೆಚ್ಚು ಓದಿದ ಸ್ಟೋರಿಗಳು

ಪ್ರಧಾನಿ MODI ಮತ್ತು ಅದಾನಿ ನಡುವಿನ ಸಂಬಂಧ ಏನು? ಪ್ರಶ್ನಿಸುವುದನ್ನು ನಾನು ನಿಲ್ಲಿಸಲ್ಲ: Rahul Gandhi

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ಝಡ್-ಪ್ಲಸ್ ಭದ್ರತೆ ಅಡಿಯಲ್ಲಿ ತನಗೆ ಇನ್ನು ಮುಂದೆ ಕಮಾಂಡೋಗಳ ರಕ್ಷಣೆ ಲಭ್ಯ ಇರುವುದಿಲ್ಲ ಎಂದು ಪೊಲೀಸ್ ಪ್ರಧಾನ ಕಛೇರಿ ಮೂಲಕ ನನಗೆ ಮಾಹಿತಿ ಬಂದಿದೆ ಎಂದು ಮಲಿಕ್ ಹೇಳಿದ್ದಾರೆ.

“ನನಗೆ ಕೇವಲ ಪಿಎಸ್‌ಒ (ವೈಯಕ್ತಿಕ ಭದ್ರತಾ ಅಧಿಕಾರಿ)ಯನ್ನು ಮಾತ್ರ ನೀಡಲಾಗಿದೆ, ಆದರೆ, ಅವರು ಕೂಡಾ ಕಳೆದ ಮೂರು ದಿನಗಳಿಂದ ಬರಲಿಲ್ಲ. ಯಾರಾದರೂ ನನ್ನ ಮೇಲೆ ದಾಳಿ ಮಾಡಬಹುದು.” ಎಂದು ಸತ್ಯಪಾಲ್‌ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಹಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಬಳಿಕ ಸತ್ಯಪಾಲ್‌ ಅವರಿಗಿರುವ ಭದ್ರತೆಯನ್ನು ಹಿಂಪಡೆದಿರುವುದರಿಂದ ಕೇಂದ್ರದ ನಡೆಯ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.

ಕೃಷಿ ಕಾನೂನು ಸೇರಿದಂತೆ ಹಲವಾರು ವಿಷಯಗಳಲ್ಲಿ ಮಲಿಕ್ ಕೇಂದ್ರದ ಬಿಜೆಪಿ ಸರ್ಕಾರವನ್ನು ಎದುರು ಹಾಕಿಕೊಂಡಿದ್ದಾರೆ.   ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನೆಯ ವೇಳೆ ಅವರು ರೈತರಿಗೆ ಬೆಂಬಲ ನೀಡಿದ್ದರು, ಅಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ಕಡತಗಳನ್ನು ತೆರವುಗೊಳಿಸಲು ₹ 300 ಕೋಟಿ ಲಂಚದ ಆಮಿಷವನ್ನು ತನಗೆ ನೀಡಲಾಗಿತ್ತು ಎಂದು ಅವರು ಆರೋಪಿಸಿದ್ದರು.

“ಜಮ್ಮು ಮತ್ತು ಕಾಶ್ಮೀರದ ಹಿಂದಿನ ಎಲ್ಲಾ ರಾಜ್ಯಪಾಲರು ಉತ್ತಮ ಭದ್ರತೆಯನ್ನು ಹೊಂದಿದ್ದಾರೆ. ನನಗೆ ಏನಾದರೂ ಸಂಭವಿಸಿದರೆ, ಕೇಂದ್ರ ಸರ್ಕಾರವು ಅದಕ್ಕೆ ಜವಾಬ್ದಾರಿ. ನಾನು ರಾಜ್ಯಪಾಲನಾಗಿದ್ದಾಗ, ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆಯನ್ನು ವಿಸರ್ಜಿಸಿದ್ದೇನೆ. ಆರ್ಟಿಕಲ್ 370 ಯನ್ನು ನನ್ನ ಅಧಿಕಾರಾವಧಿಯಲ್ಲಿ ತೆಗೆದುಹಾಕಲಾಗಿದೆ. ನನ್ನ ಜೀವಕ್ಕೆ ಬೆದರಿಕೆ ಇದೆ, ನನಗೇನಾದರೂ ಸಂಭವಿಸಿದರೆ ಅದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ” ಎಂದು ಮಲಿಕ್ ಹೇಳಿದ್ದಾರೆ.

ಮಲಿಕ್ ಅವರನ್ನು 2017 ರಲ್ಲಿ ಬಿಹಾರ ಗವರ್ನರ್ ಆಗಿ ನೇಮಿಸಲಾಗಿತ್ತು. 2018 ರಲ್ಲಿ‌ ಅವರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ವರ್ಗಾಯಿಸಲಾಗಿದ್ದು, ನಂತರ 2019 ರಲ್ಲಿ ಗೋವಾ ಮತ್ತು 2020 ರಲ್ಲಿ ಮೇಘಾಲಯಕ್ಕೆ ಸ್ಥಳಾಂತರಿಸಲಾಯಿತು. ಅವರ ಐದು ವರ್ಷಗಳ ಅಧಿಕಾರವಧಿಯು ವಿವಿಧ ರಾಜ್ಯಗಳಲ್ಲಿ ಹಂಚಿ ಹೋಗಿತ್ತು. ಅಕ್ಟೋಬರ್ 2022 ರಲ್ಲಿ ಅವರ ಸೇವೆಯ ಅವಧಿಯು ಪೂರ್ಣಗೊಂಡಿತ್ತು.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

SIDDARAMAIAH-VARUNA : ಸಿದ್ದರಾಮಯ್ಯ ಅವರಿಗೆ ವರುಣ ಟಿಕೆಟ್ – ಇದರ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್..!
ಇದೀಗ

SIDDARAMAIAH-VARUNA : ಸಿದ್ದರಾಮಯ್ಯ ಅವರಿಗೆ ವರುಣ ಟಿಕೆಟ್ – ಇದರ ಹಿಂದೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್..!

by ಪ್ರತಿಧ್ವನಿ
March 25, 2023
SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :
Top Story

SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :

by ಪ್ರತಿಧ್ವನಿ
March 20, 2023
ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ
ಇದೀಗ

ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ

by ಮಂಜುನಾಥ ಬಿ
March 25, 2023
ಸಚಿವೆ ಶಶಿಕಲಾ ಜೊಲ್ಲೆ ನಿವಾಸದೆದುರು ರೌಡಿಶೀಟರ್​ ಹತ್ಯೆಗೆ ಯತ್ನ
Top Story

ಸಚಿವೆ ಶಶಿಕಲಾ ಜೊಲ್ಲೆ ನಿವಾಸದೆದುರು ರೌಡಿಶೀಟರ್​ ಹತ್ಯೆಗೆ ಯತ್ನ

by ಮಂಜುನಾಥ ಬಿ
March 22, 2023
CONGRESS | ದಲಿತರಿಗೆ ನಾವು ರಕ್ಷಣೆ ಕೊಡ್ತೀವಿ ಎಂದು ಭಾಷಣ ಬಿಗಿತ್ತಿದ್ದ ಬಿಜೆಪಿಗರೇ… ಇದೇನಾ ನಿಮ್ಮ ರಕ್ಷಣೆ
ಇದೀಗ

CONGRESS | ದಲಿತರಿಗೆ ನಾವು ರಕ್ಷಣೆ ಕೊಡ್ತೀವಿ ಎಂದು ಭಾಷಣ ಬಿಗಿತ್ತಿದ್ದ ಬಿಜೆಪಿಗರೇ… ಇದೇನಾ ನಿಮ್ಮ ರಕ್ಷಣೆ

by ಪ್ರತಿಧ್ವನಿ
March 23, 2023
Next Post
ಉರಿಗೌಡ, ನಂಜೇಗೌಡ ದ್ವಾರ ವಿವಾದ; ಡಿಜಿಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

ಉರಿಗೌಡ, ನಂಜೇಗೌಡ ದ್ವಾರ ವಿವಾದ; ಡಿಜಿಪಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು: ಡಿ.ಕೆ. ಶಿವಕುಮಾರ್ ಆಗ್ರಹ

ಒಟಿಟಿಯಲ್ಲಿ ಬರ್ತಿದೆ ಅಪ್ಪು ಕನಸಿನ ʻಗಂಧದ ಗುಡಿʼ

ಒಟಿಟಿಯಲ್ಲಿ ಬರ್ತಿದೆ ಅಪ್ಪು ಕನಸಿನ ʻಗಂಧದ ಗುಡಿʼ

ಬಸವಣ್ಣನವರು ಕುಳಿತ ಪರುಷ ಕಟ್ಟೆಯ ಮೇಲೆ ದನದ ವಿಗ್ರಹಕ್ಕೇನು ಕೆಲಸ?

ಬಸವಣ್ಣನವರು ಕುಳಿತ ಪರುಷ ಕಟ್ಟೆಯ ಮೇಲೆ ದನದ ವಿಗ್ರಹಕ್ಕೇನು ಕೆಲಸ?

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist