
ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನ ಜೀವನಾಡಿ ಎಂದೇ ಹೆಸರುವಾಸಿಯಾಗಿರುವ ಬಿಎಂಟಿಸಿ ಬಸ್ಗಳು ಬೆಂಕಿಗಾಹುತಿಯಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಇದೀಗ ಎಲೆಕ್ಟ್ರಿಕ್ ಬಸ್ಸೊಂದು ಜೋರು ಮಳೆಯ ನಡುವೆಯೂ ಧಗಧಗನೆ ಹೊತ್ತಿ ಉರಿದಿರುವ ಘಟನೆ ಬೆಳಕಿಗೆ ಬಂದಿದೆ.ಘಟನೆಯು ಬೆಂಗಳೂರು ನಗರದ ನಾಗವಾರ- ಹೆಬ್ಬಾಳ ಸರ್ವೀಸ್ ರಸ್ತೆಯಲ್ಲಿ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಚಾಲಕನ ಸಮಯ ಪ್ರಜ್ಞೆಗೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ನಿನ್ನೆ (ಆಗಸ್ಟ್ 05) ಸುರಿದ ಭಾರೀ ಮಳೆಗೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಸರ್ವಿಸ್ ರಸ್ತೆಯಲ್ಲಿ ನೀರು ತುಂಬಿಕೊಂಡಿತ್ತು. ಇದೇ ಮಾರ್ಗದಲ್ಲಿ ಬಂದ ಎಲೆಕ್ಟ್ರಿಕ್ ಬಸ್ನಲ್ಲಿ ಹೊಗೆ ಕಾಣಲು ಆರಂಭಿಸಿದೆ. ಇದನ್ನು ಗಮನಿಸಿದ ಚಾಲಕ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ ದೂರಕ್ಕೆ ಕಳುಹಿಸಿದ್ದಾನೆ.ಬಸ್ ಕ್ಷಣಾರ್ಧದಲ್ಲೇ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು,ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತೆರಳುವ ವೇಳೆಗಾಗಲೇ ಬಸ್ ಸುಟ್ಟು ಬೂದಿಯಾಗಿತ್ತು.ಬಸ್ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ನಿಂದ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The burning BMTC electric bus in BENGALURU city right in front of Bangalore Water Supply & Sewage Board (BWSSB) office at Hebbala
— Karnataka Weather (@Bnglrweatherman) August 5, 2024
VC: @kaushikmrinal#BengaluruRains #BangaloreRains https://t.co/cqkVJ0Reqh pic.twitter.com/BghqZykAqx